Sri Krishnadevaraya University and Bernardo O. Higgins University sign agreement

ಗುಡ್ಮಾರ್ನಿಂಗ್ ನ್ಯೂಸ್: ಶ್ರೀ ಕೃಷ್ಣದೇವರಾಯ ವಿವಿ ಹಾಗೂ ಬರ್ನಾರ್ಡೊ ಒ ಹಿಗ್ಗಿನ್ಸ್ ವಿವಿ ಒಡಂಬಡಿಕೆ

ಬಳ್ಳಾರಿ; ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ (Sri Krishna Devaraya University) ಬಳ್ಳಾರಿ ಹಾಗೂ ಸ್ಯಾಂಟಿಯಾಗೊ ಡಿ ಚಿಲಿಯ ಬರ್ನಾರ್ಡೊ ಒ ಹಿಗ್ಗಿನ್ಸ್ ವಿಶ್ವವಿದ್ಯಾಲಯವು (Bernardo O’Higgins University) ಶೈಕ್ಷಣಿಕ ಒಡಂಬಡಿಕೆ (MOU) ಒಪ್ಪಂದ ಕಾರ್ಯಕ್ರಮ ಬುಧವಾರ ಜೀವವಿಜ್ಞಾನ ಸಭಾಂಗಣದಲ್ಲಿ ನಡೆಯಿತು.

ಒಡಂಬಡಿಕೆ ನಂತರ ವಿವಿಯ ಕುಲಪತಿಗಳಾದ ಪ್ರೊ.ಎಂ ಮುನಿರಾಜು ಮಾತನಾಡಿ, ಶಿಕ್ಷಣದ ಭವಿಷ್ಯ, ಆವಿಷ್ಕಾರಗಳು ಹಾಗೂ ಗುಣಮಟ್ಟದ ಸಂಶೋಧನೆಯನ್ನು ಉತ್ತೇಜಿಸಲು ವಿಶ್ವಮಟ್ಟದ ವಿಶ್ವವಿದ್ಯಾಲಯಗಳೊಂದಿಗಿನ ಶೈಕ್ಷಣಿಕ ಒಡಂಬಡಿಕೆಗಳು ಮಹತ್ವದ್ದಾಗಿವೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಅಂತರಾಷ್ಟ್ರೀಯ ವಿವಿಗಳೊಂದಿಗಿನ ಮೂರನೇ ಶೈಕ್ಷಣಿಕ ಒಡಂಬಡಿಕೆಯಾಗಿದೆ ಎಂದು ತಿಳಿಸಿದರು.

ಗುಣಮಟ್ಟದ ಸಂಶೋಧನಾ ಲೇಖನಗಳು ಮತ್ತು ಉತ್ತಮ ಶಿಕ್ಷಣಕ್ಕೆ ಬೇಕಾದ ಅಂಶಗಳನ್ನು ನಿರೀಕ್ಷಿತ ಮಟ್ಟದಲ್ಲಿ ಸಾಧಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಡಂಬಡಿಕೆಗೆ ನಮ್ಮ ವಿಶ್ವವಿದ್ಯಾಲಯವು ಮುಂದಾಗಿದೆ ಎಂದರು.

ಬರ್ನಾರ್ಡೊ ಒ ಹಿಗ್ಗಿನ್ಸ್ ವಿವಿಯ ಪ್ರೊ ಸೀಸರ್ ಮೊರೇಲ್ಸ್ ವರ್ಡೆಜೊ ಮಾತನಾಡಿ, ಉನ್ನತ ಶಿಕ್ಷಣವನ್ನು ಜಗತ್ತಿನ ವಿಶ್ವವಿದ್ಯಾಲಯಗಳೊಂದಿಗೆ ಹಂಚಿಕೊಳ್ಳುವುದು ನಮ್ಮ ಉದ್ದೇಶವಾಗಿದೆ. ಬೋಧಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಇದರಿಂದ ಜಾಗತಿಕ ಮಟ್ಟದ ಸಂಶೋಧನೆಗಳಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದರು.

ವಿಶ್ರೀಕೃ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಬರ್ನಾರ್ಡೊ ಒ ಹಿಗ್ಗಿನ್ಸ್ ವಿಶ್ವವಿದ್ಯಾಲಯದ ನಿರ್ದೇಶಕರು ಶೈಕ್ಷಣಿಕ ಒಡಂಬಡಿಕೆಗೆ ಪರಸ್ಪರ ಸಹಿ ಹಾಕುವುದರ ಮೂಲಕ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.

ವಿವಿಯ ಮೌಲ್ಯಮಾಪನ ಕುಲಸಚಿವರಾದ ಡಾ. ಎನ್. ಎಂ ಸಾಲಿ, ಶುದ್ಧ ವಿಜ್ಞಾನ ನಿಕಾಯದ ಡೀನರಾದ ಡಾ. ಹನುಮೇಶ್ ವೈದ್ಯ ವೇದಿಕೆಯಲ್ಲಿದ್ದರು.

ವಿವಿಧ ನಿಕಾಯಗಳ ಡೀನರು, ಎಲ್ಲ ವಿಜ್ಞಾನ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ರಾಜಕೀಯ

ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು: ಆರ್‌.ಅಶೋಕ

ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು: ಆರ್‌.ಅಶೋಕ

ಒಕ್ಕಲಿಗ (Vokkaliga) ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಕರೆ ನೀಡಿದರು.

[ccc_my_favorite_select_button post_id="112046"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಹೊರಡಿಸಿದೆ.

[ccc_my_favorite_select_button post_id="111989"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!