ಬೆಂಗಳೂರು: ತವರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇಂಡಿಯನ್ ಪ್ರೀಮಿಯರ್ ಲೀಗ್ ಗೆಲುವಿನ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಸಾವನಪ್ಪಿದವರಿಗೆ ಆರ್‌ಸಿಬಿ (RCB) ಆಡಳಿತ ಮಂಡಳಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಈ ಬಗ್ಗೆ ಆರ್‌ಸಿಬಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿದೆ.
ನಿನ್ನೆ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಘಟನೆಯು ಆರ್‌ಸಿಬಿ ಕುಟುಂಬಕ್ಕೆ ತೀವ್ರ ನೋವನ್ನುಂಟು ಮಾಡಿದೆ. ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಮೃತರ ಹನ್ನೊಂದು ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಆರ್‌ಸಿಬಿ ಘೋಷಿಸಿದೆ.
ಅಲ್ಲದೆ ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು ಆರ್‌ಸಿಬಿ ಕೇರ್ಸ್ ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ.
ನಾವು ಮಾಡುವ ಪ್ರತಿಯೊಂದರಲ್ಲೂ ನಮ್ಮ ಅಭಿಮಾನಿಗಳು ಯಾವಾಗಲೂ ಹೃದಯದಲ್ಲಿ ಉಳಿಯುತ್ತಾರೆ. ನಾವು ದುಃಖದಲ್ಲಿ ಒಂದಾಗಿದ್ದೇವೆ ಎಂದು RCB ಹೇಳಿದೆ.