RCB ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ ವಿರುದ್ಧ ದೂರು

Stampede incident during RCB victory celebration

ಬೆಂಗಳೂರು: ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದ್ದಾರೆ.

ಈಗ ಈ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ.

ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಪದಾಧಿಕಾರಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 106ರ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ.

ದೂರಿನ ಪ್ರಮುಖ ಅಂಶಗಳು

ಜನಪ್ರಿಯ ಪ್ರಚಾರದ ರಾಜಕೀಯ ಲಾಭದ ಕಾರಣಕ್ಕಾಗಿ ಆರ್‌ಸಿಬಿ ತಂಡದ ಆಟಗಾರರನ್ನು ವಿಧಾನಸೌಧದ ಮುಂಭಾಗ ಸನ್ಮಾನ ಮಾಡುವ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಆಚರಿಸುವ ದುಡುಕಿನ ನಿರ್ಧಾರ ಕೈಗೊಂಡು, ಸೂಕ್ತ ಭದ್ರತೆಯ ನಿರ್ಲಕ್ಷ್ಯವನ್ನು ತೋರಿಸಿ, ಸುಮಾರು 11 ಜನರ ಸಾವು ಸಂಭವಿಸಲು, 30 ಜನರಿಗಿಂತಲೂ ಹೆಚ್ಚಿನ ಜನರು ಗಾಯಗೊಳ್ಳಲು ಕಾರಣರಾಗಿದ್ದಾರೆ‌.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಪದಾಧಿಕಾರಿಗಳು ಹಾಗೂ ಇತರರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ ಕಲಂ 106 ರ ಪ್ರಕಾರ ಮೊಕದ್ದಮೆ ದಾಖಲಿಸಿ, ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಲಾಗಿದೆ.

ಗೃಹ ಸಚಿವರ ಪ್ರತಿಕ್ರಿಯೆ

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿದ ಕುರಿತು ಪ್ರತಿಕ್ರಿಯಿಸಿದ ಗೃಹಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಐಪಿಎಲ್‌ನಲ್ಲಿ ಕಪ್ ಗೆದ್ದ ಹಿನ್ನೆಲೆ ವಿಜಯೋತ್ಸವವನ್ನು ಆಚರಿಸಲು ಬೆಂಗಳೂರಿಗೆ ಬರುವಂತೆ ನಾವು ಆರ್‌ಸಿಬಿ ಅಥವಾ ಕ್ರಿಕೆಟ್ ಅಸೋಸಿಯೇಷನ್ (ಕೆಸಿಎ) ಅವರನ್ನು ವಿನಂತಿಸಿರಲಿಲ್ಲ ಎಂದು ಹೇಳಿದ್ದಾರೆ.

ಆರ್‌ಸಿಬಿ ತಂಡ ನಗರದಲ್ಲಿ ವಿಜಯೋತ್ಸವವನ್ನು ಆಯೋಜಿಸಿತ್ತು. ಆದರೆ ರಾಜ್ಯ ಸರ್ಕಾರ ಇದಕ್ಕೆ ವಿನಂತಿಸಿರಲಿಲ್ಲ. ಆರ್‌ಸಿಬಿ ತಂಡ ಸಂಭ್ರಮಾಚರಣೆಗೆ ಬೆಂಗಳೂರಿಗೆ ಬಂದಿತ್ತು. ರಾಜ್ಯ ಸರ್ಕಾರ ಇದನ್ನು ಸುಗಮಗೊಳಿಸಬೇಕೆಂದು ಭಾವಿಸಿತ್ತು ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಕಾಲ್ತುಳಿತ ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ. ಯಾವುದೇ ಲೋಪಗಳು ಕಂಡುಬಂದಲ್ಲಿ ಅದಕ್ಕೆ ಕಾರಣರಾದವರು ಯಾರು ಎಂಬುದರ ಮೇಲೆ ಕ್ರಮ ಕೈಗೊಳ್ಳಲು ವರದಿ ಹೊರಬರಬೇಕು ಎಂದರು.

ತಂಡವನ್ನು ಬೆಂಗಳೂರಿಗೆ ಕರೆತಂದಿದ್ದು ಅವರೇ. ಬೆಂಗಳೂರು ತಂಡ ಆಗಿದ್ದರಿಂದ ಅವರಿಗೆ ಅನುಕೂಲ ಮಾಡಿಕೊಡಬೇಕೆಂದು ಸರ್ಕಾರ ಭಾವಿಸಿತು. ಈ ಘಟನೆ ನಡೆದಿದ್ದಕ್ಕೆ ನನಗೆ ತುಂಬಾ ವಿಷಾದವಿದೆ ಎಂದು ಪರಮೇಶ್ವರ್ ನುಡಿದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]