ಬೆಂಗಳೂರು: ತವರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಗೆಲುವಿನ ವಿಜಯೋತ್ಸವವನ್ನು ಕಣ್ಣುಂಬಿಕೊಳ್ಳಲು ಬಂದ ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿ 11 ಮಂದಿ ಮೃತಪಟ್ಟು, 47 ಮಂದಿ ಗಾಯಗೊಂಡ ಪ್ರಕರಣ ಸಂಬಂಧ ಆರ್‌ಸಿಬಿ ಆಡಳಿತ ಮಂಡಳಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಈ ಬಗ್ಗೆ ಆರ್‌ಸಿಬಿ-ಕೆಎಸ್‌ಸಿಎ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿವೆ.
ಈ ದುಃಖದ ಸಂದರ್ಭದಲ್ಲಿ ನಾವು ಮೃತರ ಕುಟುಂಬಗಳೊಂದಿಗೆ ಇರುತ್ತೇವೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿವೆ.