ತುಮಕೂರು: ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ (Accident) ಮೂವರು ಮೃತಪಟ್ಟಿರುವ ಘಟನೆ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದೆ.
ಬಂಕ್ನಿಂದ ಡಿಸೇಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಸವಾರರು ಮೃತಪಟ್ಟಿದ್ದಾರೆ.
ಮೃತರನ್ನು ರಾಜೇಶ್ (25 ವರ್ಷ), ದನಂಜಯ್ (27 ವರ್ಷ), ಧನುಷ್ (23 ವರ್ಷ) ಎಂದು ಗುರುತಿಸಲಾಗಿದೆ.
ಇವರು ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಮುಗಿಸಿ ತುಮಕೂರಿಗೆ ವಾಪಸಾಗುವಾಗ ಅಪಘಾತ ಸಂಭವಿಸಿದೆ.
ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ನೀಡಿ ಪರಿಶೀಲನೆ ನಡೆಸಿದ್ದಾರೆ.