ದೊಡ್ಡಬಳ್ಳಾಪುರ: ಆತ್ಮಹತ್ಯೆ (Suicide) ಮಾಡಿಕೊಂಡಿರುವ ಸ್ಥಿತಿಯಲ್ಲಿ ವ್ಯಕ್ತಿಯ ಶವ ಜಮೀನಿನಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಸಾಸಲು ಸಮೀಪದ ತಮಗಾನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮೃತನನ್ನು ತಮಗಾನಹಳ್ಳಿ ಗ್ರಾಮದ ನರಸಿಂಹ ಮೂರ್ತಿ (55 ವರ್ಷ) ಎಂದು ಗುರುತಿಸಲಾಗಿದೆ.
ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಮೃತ ದೇಹ ಕೊಳೆಯಲಾರಂಭಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ನರಸಿಂಹ ಮೂರ್ತಿ ಮೂರು ಮದುವೆಯಾಗಿದ್ದು, ಇಬ್ಬರು ಮಕ್ಕಳನ್ನು ಹೊಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.