ದೊಡ್ಡಬಳ್ಳಾಪುರ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನಪ್ಪಿ, ಅನೇಕರು ಗಾಯಗೊಂಡಿರುವುದಕ್ಕೆ ಕಾಂಗ್ರೆಸ್ ಸರಕಾರವೇ ನೇರ ಹೊಣೆ ಎಂದು ದೊಡ್ಡಬಳ್ಳಾಪುರ ಬಿಜೆಪಿ ಯುವ ಮೋರ್ಚಾ ಮಾಜಿ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ (Vijay Kumar) ಆರೋಪಿಸಿದ್ದಾರೆ.
ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆರೋಪಗಳಿಗೆ, ಯುವ ಕಾಂಗ್ರೆಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪುನೀತ್ ಗೌಡ ಮಲ್ಲೋಹಳ್ಳಿ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ವಿಜಯ್ ಕುಮಾರ್, ದೊಡ್ಡಬಳ್ಳಾಪುರ ಶಾಸಕರ ಬಗ್ಗೆ ಮಾತನಾಡುವ ಮುನ್ನ ಪ್ರತಿಯೊಬ್ಬರು ಲಿಮಿಟಲ್ ಇರಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: 2 ಬಾರಿ ಅಮಾನತಾಗಿದ್ದ ಶಾಸಕನಿಂದ ಸರ್ಕಾರಕ್ಕೆ ಉಪದೇಶ: ಪುನೀತ್ ಗೌಡ ಮಲ್ಲೋಹಳ್ಳಿ ಲೇವಡಿ
ಶಾಸಕರಾದವರು ಅಧಿವೇಶನದಲ್ಲಿ ಸರ್ಕಾರದ ಲೋಪ ದೋಷಗಳ ಕುರಿತು ಪ್ರತಿಭಟನೆ ಮಾಡ್ತಾರೆ, ಈ ಮುಂಚೆ ಕಾಂಗ್ರೆಸ್ ಶಾಸಕರು ಮಾಡಿದ್ದರು. ವಿಧಾಪರಿಷತ್ ಅಧಿವೇಶನದಲ್ಲಿ ಕಾಂಗ್ರೆಸ್ ಸದಸ್ಯರು ಸಭಾಪತಿಯನ್ನು ಯಾವ ರೀತಿ ನಡೆಸಿಕೊಂಡಿದ್ದಾರೆ ಎಂಬುದು ದೇಶಕ್ಕೆ ಗೊತ್ತಿದೆ.
ಗ್ರಾಮಪಂಚಾಯಿತಿ ಸದಸ್ಯನಾಗಿ ಆಯ್ಕೆಯಾಗದ ಪುನೀತ್, ದೊಡ್ಡಬಳ್ಳಾಪುರ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡುವುದು ಸರಿಯಲ್ಲ ಎಂದು ವಿಜಯ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.