ದೊಡ್ಡಬಳ್ಳಾಪುರ: ಹಣ್ಣು ವ್ಯಾಪಾರಿಯೋರ್ವ ಅಪಘಾತದಲ್ಲಿ (Accident) ಸಾವನಪ್ಪಿರುವ ಘಟನೆ ತಾಲೂಕಿನ ಮಾಕಳಿ ಬಳಿ ಸಂಭವಿಸಿದೆ.
ಮೃತರನ್ನು ನೆಲಮಂಗಲ ತಾಲೂಕಿನ ಅರಶಿನಕುಂಟೆ ನಿವಾಸಿ 50 ವರ್ಷದ ನಾಗರಾಜು ಎಂದು ಗುರುತಿಸಲಾಗಿದೆ.
ಮೃತನು ಗೌರಿಬಿದನೂರಿನ ಕಡೆಯಿಂದ ಸ್ಕೂಟರ್ ನಲ್ಲಿ ಹಣ್ಣಿನ ವ್ಯಾಪಾರ ನಡೆಸುತ್ತಾ ಅರಿಶಿನ ಕುಂಟೆಗೆ ತೆರಳುವ ವೇಳೆ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ತಿರುವಿನ ಬಳಿ ಸಂಭವಿಸಿದ ಅಪಘಾತದಲ್ಲಿ ಸಾವನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಇದು ಸೆಲ್ಫ್ ಆಕ್ಸಿಡೆಂಟ್ ಅಥವಾ ಯಾವುದಾದರೂ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆಯಾ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಯಾರೂ ನೋಡದ ಕಾರಣ ಇಂದು ಮಧ್ಯಾಹ್ನದ ವೇಳೆಗೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಇನ್ಸ್ಪೆಕ್ಟರ್ ಎಂ.ಬಿ. ನವೀನ್ ಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.