Helmet use is mandatory.. no exemptions- SP Dr.Shobharani V.J

ಗುಡ್ಮಾರ್ನಿಂಗ್ ನ್ಯೂಸ್: ಹೆಲ್ಮೆಟ್ ಬಳಕೆ ಕಡ್ಡಾಯ.. ವಿನಾಯಿತಿ ಇಲ್ಲ- ಎಸ್ಪಿ ಡಾ.ಶೋಭಾರಾಣಿ ವಿ.ಜೆ

ಬಳ್ಳಾರಿ: ಜೀವ ಮತ್ತು ಜೀವನ ಅಮೂಲ್ಯವಾದುದು. ಹಾಗಾಗಿ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ (Dr.Shobharani V.J.) ಅವರು ಹೇಳಿದರು.

ನಗರದ ಕನಕದುರ್ಗಮ್ಮ ದೇವಸ್ಥಾನ ವೃತ್ತದಲ್ಲಿ ಎಸ್ಪಿ ಶುಕ್ರವಾರ ಆಯೋಜಿಸಲಾಗಿದ್ದ ಸಾರ್ವಜನಿಕರ ಸುರಕ್ಷತೆಗಾಗಿ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಹೆಲ್ಮೆಟ್ ಮತ್ತು ಗುಲಾಬಿ ಹೂ ವಿತರಿಸಿ ಅವರು ಮಾತನಾಡಿದರು.

ಅಪಘಾತಗಳ ಪೈಕಿ ದ್ವಿಚಕ್ರ ವಾಹನಗಳ ಅಪಘಾತವೇ ಹೆಚ್ಚು. ಅದರಲ್ಲಿ ಹೆಲ್ಮೆಟ್ ಧರಿಸದೆ ಸಾವನಪ್ಪಿರುವರ ಸಂಖ್ಯೆ ಹೇರಳವಾಗಿದೆ. ಆ ವೇಳೆ ತಲೆಗೆ ಪೆಟ್ಟಾಗಿ ಸಾವನ್ನಪ್ಪಿರುವವರು ಹೆಚ್ಚಾಗಿದ್ದಾರೆ. ಇದಕ್ಕೆ ಹೆಲ್ಮೆಟ್ ಧರಿಸದಿರುವುದೇ ಮುಖ್ಯ ಕಾರಣ. ಹಾಗಾಗಿ ನಿಮ್ಮ ಮನೆಯವರು ಹಾಗೂ ನಿಮ್ಮನ್ನು ನಂಬಿದವರಿಗಾಗಿ ಹೆಲ್ಮೆಟ್ ಅನ್ನು ಕಡ್ಡಾಯವಾಗಿ ಧರಿಸಲೇಬೇಕು ಎಂದು ಹೇಳಿದರು.

ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದರಿಂದ ಸಂಭವನೀಯ ಅಪಘಾತಗಳಿಂದ ತಲೆಗೆ ಪೆಟ್ಟಾಗುವುವುದು ತಪ್ಪುತ್ತದೆ. ಪೊಲೀಸರು ನೀಡುವ ಸೂಚನೆಗಳನ್ನು ಅಗತ್ಯವಾಗಿ ಪಾಲಿಸಬೇಕು. ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದರೆ ಸ್ಥಳದಲ್ಲಿಯೇ ರೂ.500 ದಂಡ ತೆರಬೇಕಾಗುತ್ತದೆ. 18 ವರ್ಷದ ಒಳಗಿನವರು ವಾಹನ ಚಲಾಯಿಸುವುದು ಕೂಡ ಅಪರಾಧ. ಹಾಗಾಗಿ ಕಡ್ಡಾಯವಾಗಿ ಸಂಚಾರ ನಿಯಮ ಪಾಲನೆ ಮಾಡಬೇಕು ಎಂದರು.

ಸುರಕ್ಷತೆಗಾಗಿ ಹೆಲ್ಮೆಟ್ ಧರಿಸೋಣ

ದ್ವಿಚಕ್ರ ವಾಹನ ಚಲಾಯಿಸುವ ಪ್ರತಿಯೊಬ್ಬರೂ ಹೆಲ್ಮೆಟ್ ಬಳಸುವ ರೂಢಿಯಾಗಬೇಕೆಂದರೆ ಅಧಿಕಾರಿಗಳು ಸೇರಿದಂತೆ ನಾವೆಲ್ಲರೂ ನಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಮಾಧ್ಯಮ ಪ್ರತಿನಿಧಿಗಳ ಸಂವಾದದಲ್ಲಿ ಹೇಳಿದರು.

ಜಿಲ್ಲೆಯಲ್ಲಿ ಅತಿಯಾಗ ವೇಗದಿಂದ ವಾಹನ ಚಾಲನೆ, ಮದ್ಯ ಸೇವಿಸಿ-ವಾಹನ ಚಾಲನೆ ಮತ್ತು ಸಂಚಾರ ನಿಯಮ ಉಲ್ಲಂಘನೆಯಿಂದ ಅಪಘಾತ ಮತ್ತು ಸಾವು ಸಂಭವಿಸುತ್ತಿವೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದಲೇ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು ಹಾಗೂ ಹಿಂಬದಿಯ ಸವಾರರು ಸಹ ತಪ್ಪದೇ ಹೆಲ್ಮೆಟ್ ಧರಿಸಬೇಕು ಎಂದು ತಿಳಿಸಿದರು.

ಹೆಲ್ಮೆಟ್ ಧರಿಸುವ ಕುರಿತು ನಮ್ಮಿಂದಲೇ ಪ್ರಾರಂಭಿಸಿದರೆ ಸಾರ್ವಜನಿಕರು ಸಹ ದ್ವಿ-ಚಕ್ರ ಸಂಚಾರದಲ್ಲಿ ಸುರಕ್ಷತೆಗಾಗಿ ಹೆಲ್ಮೆಟ್ ಬಳಕೆ ಕುರಿತು ಸಂದೇಶ ರವಾನಿಸಿದಂತಾಗುತ್ತದೆ. ಹಾಗಾಗಿ ಎಲ್ಲರೂ ತಪ್ಪದೇ ಹೆಲ್ಮೆಟ್ ಬಳಸೋಣ ಎಂದರು.
ಜಿಲ್ಲೆಯಲ್ಲಿ ವಾಹನ ಸವಾರರು ಕಡ್ಡಾಯ ಹೆಲ್ಮೆಟ್ ಧರಿಸುವಿಕೆಯ ಕುರಿತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು.

ಹೆಲ್ಮೆಟ್ ಧರಿಸದೇ ಇದ್ದಲ್ಲಿ ದಂಡಕ್ಕೆ ಆಹ್ವಾನಿಸದಂತೆ, ಇದಕ್ಕೆ ಯಾವುದೇ ವಿನಾಯಿತಿ ಇಲ್ಲ. ಪೊಲೀಸರ ಭಯದ ಕಾರಣಕ್ಕೆ ಯಾರೂ ಹೆಲ್ಮೆಟ್ ಧರಿಸಬೇಕಿಲ್ಲ. ಬದಲಾಗಿ ತಮ್ಮ ಸುರಕ್ಷತೆಗಾಗಿ ಸಾರ್ವಜನಿಕರು ಹೆಲ್ಮೆಟ್ ಧರಿಸಬೇಕು ಎಂದು ತಿಳಿಸಿದರು.

ಹೆಲ್ಮೆಟ್ ಬಳಕೆಯ ಕುರಿತು ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ನವೀನ್ ಕುಮಾರ್, ರವಿಕುಮಾರ್, ಬಳ್ಳಾರಿ ನಗರ ಉಪವಿಭಾಗ ಡಿವೈಎಸ್ಪಿ ಚಂದ್ರಕಾಂತ ನಂದಾರೆಡ್ಡಿ, ಸಂಚಾರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಅಯ್ಯನಗೌಡ ಪಾಟೀಲ್ ಸೇರಿದಂತೆ ಇತರರು ಇದ್ದರು.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]