ರಾಜ್‌ಕುಮಾರ್‌ ಸತ್ತಾಗ ಕುಮಾರಸ್ವಾಮಿ ಶೂಟ್ ಮಾಡಿಸಿದ್ರು.. ಮತ್ತೆ ರಾಜೀನಾಮೆ ಕೊಟ್ರಾ?: ಬೇಳೂರು ಗೋಪಾಲಕೃಷ್ಣ

Kumaraswamy shot Rajkumar when he died.. Should he resign again?: Belur Gopalakrishna

ಬೆಂಗಳೂರು: ಡಾ.ರಾಜ್‌ಕುಮಾರ್‌ (Rajakumar) ತೀರಿಕೊಂಡಾಗ ಅಭಿಮಾನಿಗಳಿಗೆ ಗುಂಡು ಹೊಡೆಸಿದ್ರಲ್ಲ, ಶೂಟ್ ಮಾಡಿಸಿದ್ದರು ಆಗ ಮುಖ್ಯಮಂತ್ರಿ ಆಗಿದ್ದ ಕುಮಾರಸ್ವಾಮಿ (HD Kumaraswamy) ರಾಜೀನಾಮೆ ಕೊಟ್ರಾ ಎಂದು ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ (Beluru Gopala Krishna ) ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ ಘಟನೆ ಕುರಿತು ಸಿಎಂ, ಡಿಸಿಎಂ ರಾಜೀನಾಮೆಗೆ ದೋಸ್ತಿ ನಾಯಕರ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ಇಂತಹ ಘಟನೆ ಆಗಬಾರದಿತ್ತು, RCB ಅಭಿಮಾನಿಗಳು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬರುತ್ತಾರೆ ಎಂಬುದು ತಿಳಿಯಲಾಗದೆ ಆಗಿಹೋಗಿದೆ. ಅದಕ್ಕೆ ಪೊಲೀಸ್ ಅಧಿಕಾರಿಗಳನ್ನ ಸಸ್ಪೆಂಡ್ ಮಾಡಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿಯ ನೇಮಕ ಹಿಂಪಡೆಯಲಾಗಿದೆ.

ಸಿಎಂ, ಡಿಸಿಎಂ ಇಬ್ರೂ ಚೆನ್ನಾಗಿ ಕೆಲಸ ಮಾಡ್ತಿದ್ದಾರೆ. ಇವೆಲ್ಲ ಆಕಸ್ಮಿಕ ಘಟನೆ, ನಾವೂ ಕೂಡ ನೋವಲ್ಲಿ ಇದ್ದೇವೆ. ಗೊಂದಲ ಸೃಷ್ಟಿ ಮಾಡಬಾರದು.

ಪಹಲ್ಗಾಮ್ ಉಗ್ರರ ದಾಳಿಯಲ್ಲಿ 26 ಮಂದಿ ಸಾವನಪ್ಪಿದ್ದಾರೆ, ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ಆಗಿ ಹಲವರು ಸತ್ರು ಪ್ರಧಾನಿ ಮೋದಿ (Narendra modi), ಅಮಿತ್ ಶಾ ರಾಜೀನಾಮೆ ನೀಡಿದ್ರಾ..?, ಕೊಡ್ಸಿ ಮೋದಿ, ಶಾ ರಾಜೀನಾಮೆ, ನಾವು ಕೊಡುಸ್ತೀವಿ.

ರಾಜೀನಾಮೆ ಕೇಳುವ ಕುಮಾರಸ್ವಾಮಿ (HD Kumaraswamy) ಅವರಿಗೆ ನಾಚಿಕೆ ಆಗಬೇಕು. ಡಾ. ರಾಜ್‌ಕುಮಾರ್ ತೀರಿಕೊಂಡಾಗ ನಾಲ್ಕು ಜನರಿಗೆ ಗುಂಡೇಟು ಹೊಡೆಸಿದ್ರು.‌ ಕಂಠೀರವ ಸ್ಟುಡಿಯೋದಲ್ಲಿ ಆಗ ನಾನೂ ಇದ್ದೆ. ಆಗ ಕುಮಾರಸ್ವಾಮಿ ರಾಜೀನಾಮೆ ನೀಡಿದ್ರಾ..?

ಹಾವೇರಿಯಲ್ಲಿ ರೈತರ ಮೇಲೆ ಬಿಎಸ್‌ವೈ ಗೋಲಿಬಾರ್ ಮಾಡಿಸಿದ್ರು, ರಾಜೀನಾಮೆ ನೀಡಿದ್ರಾ..? ಕೊಡಿಸಲಿ, ನಾವೂ ಕೂಡ ಸಿಎಂ, ಡಿಸಿಎಂ ರಾಜೀನಾಮೆ ಕೊಡಿಸ್ತೀವಿ ಅಂತ ಹೇಳಿದ್ದಾರೆ.

ಮೃತರಿಗೆ 10 ಲಕ್ಷ ರೂ. ಪರಿಹಾರ ಸಾಕಾಗಲ್ಲ, ಕನಿಷ್ಠ 50 ಲಕ್ಷ ರೂ. ಕೊಡಬೇಕು. ನಾನೂ ಕೂಡ ಸರ್ಕಾರಕ್ಕೆ ಈ ಬಗ್ಗೆ ಒತ್ತಾಯ ಮಾಡ್ತೀನಿ. ಸತ್ತವರ ಕುಟುಂಬಸ್ಥರನ್ನ ಇಟ್ಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ.

ಮೋದಿ ರಾಜೀನಾಮೆ ಕೊಟ್ಟರೆ ನಾವೂ ರಾಜೀನಾಮೆ ಕೊಡಿಸುತ್ತೇವೆ. ಮೋದಿ, ಶಾ ರಾಜೀನಾಮೆ ಕೊಡಿಸಲು ತಾಕತ್ತು ಇದ್ಯಾ? ಕುಂಭಮೇಳದಲ್ಲಿ ಎಷ್ಟು ಜನ ಸತ್ತರು? ಬೆಂಕಿ ಹಚ್ಚೋ ಕೆಲಸ ಮಾಡಬಾರದು ಎಂದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]