HD Kumaraswamy doubts about RCB's final win..!

RCB ಫೈನಲ್ ಗೆಲುವಿನ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಅನುಮಾನ..!

ಬೆಂಗಳೂರು: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್‌ಸಿಬಿ (RCB) ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಪ್ರಶ್ನಿಸಿದ್ದಾರೆ.

ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅಹಮದಾಬಾದ್ ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಏಳೂವರೆ ಗಂಟೆಗೆ. ಇಲ್ಲಿ ನೋಡಿದರೆ ಆರು ಗಂಟೆಗೆಲ್ಲ ವಿಜಯೋತ್ಸವ ಮಾಡುತ್ತೇವೆ, ನಮಗೆ ಅನುಮತಿ ಕೊಡಿ ಪೊಲೀಸರಿಗೆ ಆರ್ ಸಿಬಿ ಅವರು ಅರ್ಜಿ ಕೊಡುತ್ತಾರೆ! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ಅರ್ಜಿ ಹಾಕಿದ್ದಾರೆ. ಇದು ಹೇಗೆ ಸಾಧ್ಯ? ಪದ್ಯ ಆರಂಭಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿಗೆ ತಮ್ಮ ತಂಡ ಗೆಲುತ್ತದೆ ಎಂದು ಹೇಗೆ ಗೊತ್ತು? ಎಂದು ಪ್ರಶೈಸಿದರು.

ನಾವು ಗೆಲ್ಲುತ್ತೇವೆ ಎಂದು ಇವರಿಗೇನು ಕನಸು ಬಿದ್ದಿತ್ತಾ? ಫೈನಲ್ ಗೆಲ್ತೀವಿ ಅಂತ ಮೊದಲೇ ಗೊತ್ತಿತ್ತಾ? ಇನ್ನು ಫೈನಲ್ ಮ್ಯಾಚ್ ಶುರುನೇ ಆಗದೇ ಇವರು ಅರ್ಜಿ ಕೊಡುತ್ತಾರೆ. ಇನ್ನೊಂದು ಅರ್ಜಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPR) ಗೆ ಕೊಟ್ಟು ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ಮಾಡೋಕೆ ಅವಕಾಶ ಕೊಡಿ ಎಂದು ಕೇಳುತ್ತಾರೆ? ಇದು ಹೇಗೆ ಸಾಧ್ಯ ಎಂದು ಅವರು ಕೇಳಿದರು.

ಈ ಎಲ್ಲಾ ಪತ್ರಗಳನ್ನು ಯಾರು ಬರೆದಿದ್ದರು? ಪಂದ್ಯ ಮುಗಿದ ಮರುದಿನ ಬೆಳಗ್ಗೆ 7.30ಕ್ಕೆ ಪೊಲೀಸ್ ಕಮೀಷನರ್ ಮೇಲೆ ಒತ್ತಡ ಹಾಕಿದ್ದು ಯಾರು? ಎನ್ನುವುದು ಗೊತ್ತಿದೆ. ಅದನ್ನೇ ಹೇಳಿದ್ದೇನೆ. ನಾನು ವಾಸ್ತವಾಂಶ ತಿಳಿದು ಮಾತಾಡಿದ್ದೇನೆ. ಅಸೂಯೆಯಿಂದ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ನಾನು ಮಾತನಾಡಿಲ್ಲ ಎಂದು ಕೇಂದ್ರ ಸಚಿವರು ಹೇಳಿದರು.

ಅಸೂಕ್ಷ್ಮ ಸರ್ಕಾರಕ್ಕೆ ಕೊನೆಗೂ ಜ್ಞಾನೋದಯವಾಗಿದೆ

ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದ ರಾಜು ಅವರನ್ನು ಕಿತ್ತು ಹಾಕಿರುವುದು ಒಳ್ಳೆಯ ಕ್ರಮ ಎಂದು ಹೇಳಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಈ ಅಸೂಕ್ಷ್ಮ ಸರ್ಕಾರಕ್ಕೆ ಜ್ಞಾನೋದಯವಾಗಿರೋದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ಐವರು ಪೊಲೀಸ್ ಅಧಿಕಾರಿಗಳು ಅಮಾನತು ಮಾಡಿದ್ದು ಸರಿಯಲ್ಲ. ಈ ಅಮಾನತು ಅವಶ್ಯಕತೆ ಇರಲಿಲ್ಲ.

ಈ ರೀತಿ ಸರ್ಕಾರ ನಡೆದುಕೊಂಡರೆ ಅಧಿಕಾರಿಗಳು ಕೆಲಸ ಮಾಡುವುದಕ್ಕೆ ಸಾಧ್ಯವಿಲ್ಲ. ಅವರ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ ಅಧಿಕಾರಿಗಳ ತಲೆದಂಡ ಮಾಡಿರುವುದು ಸರಿಯಲ್ಲ. ಸರ್ಕಾರ ಸೂಕ್ಷ್ಮವಾಗಿ ಯೋಚನೆ ಮಾಡಬೇಕಿತ್ತು. ಈ ಘಟನೆಯ ಮೂಲ ಕಾರಣಗಳೇ ಬೇರೆ. ಆ ಕಾರಣಗಳನ್ನು ಸರ್ಕಾರ ಮರೆಮಾಚುತ್ತದೆ ಎಂದು ಅವರು ಕಟುವಾಗಿ ಟೀಕಿಸಿದರು.

ಹೆಣದ ಮೇಲೆ ಬಿಜೆಪಿ-ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದು ಸಿಎಂ, ಡಿಸಿಎಂ ಹೇಳಿಕೆಗಳ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು; ಹೆಣದ ಮೇಲೆ ರಾಜಕೀಯ ಮಾಡುವ ಅವಶ್ಯಕತೆ ನಮಗೆ ಇಲ್ಲ. ಇದ್ದ ವಿಷಯವನ್ನೇ ನಾನು ಹೇಳಿದ್ದೇನೆ. ನನ್ನ ಮಿತ್ರ ಪಕ್ಷವೂ ಹೇಳಿದೆ. ನಡೆದಿರುವುದನ್ನು ಹೇಳಿದ್ದೇವೆ.

ಇದರಲ್ಲಿ ರಾಜಕೀಯ ಏನಿದೆ? ಕ್ರೀಡಾಂಗಣದ ಮುಂದೆ ಮೃತದೇಹಗಳು ಬಿದ್ದ ಮೇಲೆಯೂ ಕ್ರೀಡಾಂಗಣಕ್ಕೆ ಹೋಗಿ ಕಪ್ ಗೆ ಮುತ್ತಿಕ್ಕಿ ಶೋ ಮಾಡಿದ್ದು ಯಾರು? ಜನರೇ ಎಲ್ಲವನ್ನೂ ನೋಡಿದ್ದಾರೆ. ಮಾಧ್ಯಮಗಳು ಎಲ್ಲವನ್ನೂ ಪ್ರಸಾರ ಮಾಡಿವೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ, ಡಿಸಿಎಂ, ಗೃಹ ಸಚಿವರೇ ಹೊಣೆ ಹೊರಬೇಕು

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣದ ಸಂಪೂರ್ಣ ಹೊಣೆಯನ್ನು ಸಿಎಂ, ಡಿಸಿಎಂ, ಗೃಹ ಸಚಿವರೇ ತೆಗೆದುಕೊಳ್ಳಬೇಕು. ಈ ಮೂವರದು ಕೂಡ ತಪ್ಪಿದೆ. ಪಂದ್ಯ ಗೆದ್ದ 24 ಗಂಟೆ ಒಳಗೆ ಆತುರಾತುರವಾಗಿ ಸನ್ಮಾನ ಮಾಡೋದು ಏನಿತ್ತು? ಹೋಗಲಿ, ಸನ್ಮಾನವನ್ನಾದರೂ ಸರಿಯಾಗಿ ‌ಮಾಡಿದ್ರಾ? ಕಾಟಾಚಾರಕ್ಕೆ ಮಾಡಿದರು.

ಆಟಗಾರರನ್ನು ಕೂಡ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಇವರು ಕೊಟ್ಟ ಶಾಲು, ಟೋಪಿ ಎಲ್ಲವನ್ನು ಅವರು ತಗೊಂಡು ಹೋದರೋ ಬಿಡಾಡಿ ಹೋದರೋ ಗೊತ್ತಿಲ್ಲ. ಈ ಪುರುಷಾರ್ಥಕ್ಕೆ ತರಾತುರಿಯಲ್ಲಿ ಕಾರ್ಯಕ್ರಮ ಬೇಕಿತ್ತಾ? ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ನೈತಿಕತೆ ಇದ್ದರೆ ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು. ಈಗಿನ ಕಾಲದಲ್ಲಿ ನಾವು ರಾಜಕಾರಣಿಗಳು ಭಂಡರು ಅಂತ ತೋರಿಸಿಕೊಂಡಿದ್ದೇವೆ. ಅವರಿಂದ ರಾಜೀನಾಮೆ ನಿರೀಕ್ಷೆ ಮಾಡೋಕೆ ಆಗುವುದಿಲ್ಲ. ವಿರೋಧ ಪಕ್ಷವಾಗಿ ನಾವು ಒತ್ತಾಯ ಮಾಡಿದ್ದೇವೆ. ಹೆಣದ ಮೇಲೆ ರಾಜಕೀಯ ಮಾಡೋ ದುರ್ಗತಿ ನಮಗೆ ಬಂದಿಲ್ಲ. ಅದು ಬರೋದು ಇಲ್ಲ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಸದನದಲ್ಲಿ ಎಲ್ಲರ ಕಾಲದಲ್ಲಿ ಆಗಿದ್ದು ಮಾತಾಡ್ತೀನಿ ಎಂಬ ಡಿಕೆ ಶಿವಕುಮಾರ್ ಹೇಳಿಕೆ ವಿಚಾರದ ಬಗ್ಗೆ ಲೇವಡಿ ಮಾಡಿದ ಸಚಿವರು, ಸದನದಲ್ಲಿ ಅವರು ಏನು ಮಾತನಾಡುತ್ತಾರೆ? ತಮ್ಮ ಬಳಿ ಏನು ದಾಖಲೆ ಇದೆ ಎನ್ನುವುದನ್ನು ಇಡಲಿ. ಹಿಂದೆ ನಡೆದ ಕಲಾಪಗಳಲ್ಲಿ ಅವರು ಏನೇನು ಮಾಡಿದ್ದರು ಎಂಬುದು ಗೊತ್ತಿದೆ. ಏನ್ ಸಾಧನೆ ಮಾಡಿದ್ದೀನಿ ಅಂತ ಸದನದಲ್ಲಿ ‌ಮಾತಾಡ್ತಾರೆ. ಈ ಘಟನೆ ಬಿಡಿ ಎರಡು ವರ್ಷಗಳಲ್ಲಿ ಇವರ ಸಾಧನೆ ಏನು? ಬೆಂಗಳೂರು ನಗರಕ್ಕೆ, ರಾಜ್ಯಕ್ಕೆ ಇವರ ಕೊಡುಗೆ ಏನು? ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ದುರಂತದಲ್ಲಿ ಮೃತಪಟ್ಟವರಿಗೆ ಕಡಿಮೆ ಮೊತ್ತದ ಪರಿಹಾರ ನೀಡಲಾಗಿದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜೀವ ಕಳೆದುಕೊಂಡವರು ವಾಪಸ್ ಬರುವುದಿಲ್ಲ. ದುಡ್ಡಿನ ಮೇಲೆ ಜೀವಕ್ಕೆ ಬೆಲೆ ಕಟ್ಟಲು ಆಗಲ್ಲ. ಸರ್ಕಾರ ಅನೇಕ ಸಮಯದಲ್ಲಿ ವಿಶೇಷ ಪ್ರಕರಣ ಅಂತ ಅನೇಕ ಬಾರಿ ಪರಿಹಾರ ಕೊಟ್ಟಿದೆ. ಇದು ಸರ್ಕಾರವೇ ಎಸಗಿದ ತಪ್ಪು. ಕುಟುಂಬಗಳಿಗೆ ಆಗಿರುವ ದುಃಖವನ್ನು ನೀಗಿಸಲು ಸಾಧ್ಯವಿಲ್ಲ. ಇದನ್ನು ವಿಶೇಷ ‌ಪ್ರಕರಣ ಎಂದು ಸರ್ಕಾರ ಹೆಚ್ಚು ಪರಿಹರ ನೀಡಬೇಕು ಎಂದು ಒತ್ತಾಯಿಸಿದರು.

ಡಾ.ರಾಜ್ ಅವರ ನಿಧನದ ದಿನಕ್ಕೆ ಹೋಲಿಸುವುದು ಸರಿಯಲ್ಲ

ವರನಟ ಡಾ.ರಾಜ್ ಕುಮಾರ್ ಅವರ ನಿಧನದ ಸಂದರ್ಭದಲ್ಲಿ ಏನೇನು ನಡೆಯಿತೋ ಎನ್ನುವುದು ಈಗಾಗಲೇ ಹೇಳಿದ್ದೇನೆ. ಈ ಸರ್ಕಾರ ಅಣ್ಣಾವ್ರ ನಿಧನದ ವಿಷಯ ಇಟ್ಟುಕೊಂಡು ಕಾಲ್ತುಳಿತ ಪ್ರಕರಣದಲ್ಲಿ ರಕ್ಷಣೆ ಪಡೆಯೋದು ಬೇಡ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ರಾಜ್ ಕುಮಾರ್ ಅವರು ನಿಧನರಾದ ಸಂದರ್ಭದಲ್ಲಿ ಅಶಾಂತಿ ಉಂಟು ಮಾಡಲು ನಿರ್ದಿಷ್ಟವಾಗಿ ಕೆಲವರು ಪ್ರಯತ್ನಪಟ್ಟರು.

ಸೀಮೆಎಣ್ಣೆ, ಪೆಟ್ರೋಲ್ ತಂದು ಬೆಂಗಳೂರು ನಗರದಲ್ಲಿ ಶಾಂತಿಯುತವಾಗಿ ನಡೆಯಬೇಕಿದ್ದ ವರನಟರ ಅಂತಿಮಯಾತ್ರೆ, ಅಂತ್ಯ ಸಂಸ್ಕಾರದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸವನ್ನು ಕೆಲವರು ವ್ಯವಸ್ಥಿತವಾಗಿ ಮಾಡಿದರು. ಆಗ ಗೋಲಿಬಾರ್ ಆಯಿತು. ಇಬ್ಬರು ಸಾವನ್ನಪ್ಪಿದರು. ಅದನ್ನು ನಾನು ಸ್ಪಷ್ಟವಾಗಿ ಹೇಳಿದ್ದೇನೆ. ಆ ಘಟನೆಗೂ ಕಾಲ್ತುಳಿತಕ್ಕೆ ಹೋಲಿಕೆ ಮಾಡಬಾರದು ಎಂದು ಅವರು ಹೇಳಿದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!