Stampede at RCB victory celebration: CM Siddaramaiah's lengthy response

RCB ವಿಜಯೋತ್ಸವದ ವೇಳೆ ಕಾಲ್ತುಳಿತ: BJP-JDS ಆಕ್ರೋಶ, Police ಕಮಿಷನರ್ ಅಮಾನತು ಕುರಿತು ಸಿಎಂ‌ ಸುದೀರ್ಘ ಪ್ರತಿಕ್ರಿಯೆ| Video ನೋಡಿ

ಮೈಸೂರು: ಆರ್‌ಸಿಬಿ (RCB) ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡು ಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ ಪೊಲೀಸರ ಮೇಲೆ ಸರ್ಕಾರ ಕ್ರಮ ತೆಗೆದುಕೊಂಡಿದೆ.

ಬಿಜೆಪಿ ಹಾಗೂ ಜೆಡಿಎಸ್ ನವರ ಬೇಡಿಕೆಯಂತೆ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ ಎಂದರು. ಅಂತೆಯೇ ಪೊಲೀಸರ ಮೇಲೆಯೂ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ರಮ ಆಯೋಜನೆಗೆ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಷರತ್ತುಬದ್ಧ ಅನುಮತಿ ನೀಡಲಾಗಿತ್ತು ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ

ವಿಧಾನಸೌಧದ ಭದ್ರತೆಯ ದೃಷ್ಟಿಯಿಂದ ಕಾರ್ಯಕ್ರಮ ನಡೆಸದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಪಿಎಆರ್ ನಿಂದ ಷರತ್ತುಬದ್ದ ಅನುಮತಿ ನೀಡಲಾಗಿತ್ತು.

ಷರತ್ತುಗಳನ್ನು ಪಾಲಿಸಿ , ಕಾರ್ಯಕ್ರಮವನ್ನು ಆಯೋಜಿಸುವುದು ಪೊಲೀಸರ ಕರ್ತವ್ಯವಾಗಿತ್ತು. ಈ ಅನುಮತಿ ವಿಧಾನಸೌಧದ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದು, ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆ ಸಂಭವಿಸಿದೆ. ಪೊಲೀಸರು ಸಮರ್ಪಕವಾಗಿ ಇಲ್ಲಿ ಭದ್ರತೆ ಒದಗಿಸಬೇಕಿತ್ತು. ಆದರೆ ಪೊಲೀಸ್ ವ್ಯವಸ್ಥೆ ಸಮರ್ಪಕವಾಗಿರದಿದ್ದ ಕಾರಣ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದರು.

ಕಾಲ್ತುಳಿತದ ಘಟನೆ ಸರ್ಕಾರಕ್ಕೆ ನೋವು ತಂದಿದೆ

ಕಾರ್ಯಕ್ರಮದ ಸ್ಥಳದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಬಗ್ಗೆ ಪೊಲೀಸ್ ಇಲಾಖೆಯಿಂದ ಸಮಗ್ರ ಮಾಹಿತಿ ಕೊಟ್ಟಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಸರ್ಕಾರಿ ಕಾರ್ಯಕ್ರಮವಾಗಿರಲಿಲ್ಲ ಹಾಗೂ ಇದಕ್ಕೆ ನನಗೆ ಆಹ್ವಾನವೂ ಇರಲಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ನವರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ.

ಮಧ್ಯಾಹ್ನ 3.50 ಕ್ಕೆ ಗಾಯಗೊಂಡವರು ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ, ನನಗೆ ಸಂಜೆ 5.45 ಕ್ಕೆ ಕ್ರೀಡಾಂಗಣದ ಬಳಿ ಕಾಲ್ತುಳಿತ ಉಂಟಾಗಿ, ಜನರು ಮೃತಪಟ್ಟಿರುವ ಮಾಹಿತಿ ದೊರೆಯಿತು. ಕಾಲ್ತುಳಿತದ ಘಟನೆ ಘಟಿಸಬಾರದಿತ್ತು. ಬಹಳ ಬೇಸರ ತಂದಿದೆ ಎಂದರು.

ಕ್ರೀಡಾಂಗಣ ಸ್ಥಳಾಂತರದ ಬಗ್ಗೆ ಪರಿಶೀಲಿಸಿ ತೀರ್ಮಾನ

ಕಡಿಮೆ ಸಾರ್ಮಥ್ಯವಿರುವ ಕ್ರಿಕೆಟ್ ಕ್ರೀಡಾಂಗಣವನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಗಮನಹರಿಸಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯ ಸರ್ಕಾರ ಪರಿಶೀಲಿಸಲಿದೆ. ಯಾವ ಸರ್ಕಾರದ ಅವಧಿಯಲ್ಲಿಯೂ ಇಂತಹ ಅಹಿತಕರ ಘಟನೆ ನಡೆಯಬಾರದು. ವೈಯಕ್ತಿಕವಾಗಿ ಈ ಘಟನೆ ಸರ್ಕಾರಕ್ಕೆ ನೋವು ತಂದಿದೆ ಎಂದರು.

ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ

ಈ ಪ್ರಕರಣದಲ್ಲಿ ಪೊಲೀಸರನ್ನು ಬಲಿಪಶು ಮಾಡಲಾಗಿದೆ ಎಂದು ಸಮಾಜಿಕ ಜಾಲತಾಣಗಳಲ್ಲಿ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸ್ ಇಲಾಖೆಯ ಐದು ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. ಗುಪ್ತಚರ ಮುಖ್ಯಸ್ಥರನ್ನು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನು ಬದಲಾಯಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ತಪ್ಪು ಮಾಡಿಲ್ಲ. ಆದರೆ ಘಟನೆ ದು:ಖ ತಂದಿದೆ ಎಂದರು.

ಬಿಜೆಪಿಯ ಇಂತಹ ಇಬ್ಬದಿತನದ ನಿಲುವು

ಹಲವಾರು ವರ್ಷಗಳ ಕನಸನ್ನು ಆರ್ ಸಿ ಬಿ ಕನಸು ನನಸಾಗಿಸಿದ್ದು, ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಅನುಮತಿ ನೀಡದಿರುವುದು ಗೃಹ ಸಚಿವರ ಅಸಮರ್ಪಕತೆಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿಯವರು ಪತ್ರ ಬರೆದಿದ್ದಾರೆ. ಆದರೆ ಈಗ ಘಟನೆಯ ನಂತರ ಸರ್ಕಾರವನ್ನು ದೂರುತ್ತಿದ್ದಾರೆ. ರಾಜ್ಯ ಬಿಜೆಪಿಯ ಇಂತಹ ಇಬ್ಬದಿತನದ ನಿಲುವು ತೋರುತ್ತದೆ ಎಂದರು.

ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ

ಸರ್ಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಹೆಜ್ಜೆ ಇಟ್ಟಿಲ್ಲ. ಹಾಗೂ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ತೆಗೆದುಕೊಂಡಿರುವ ಕಾರಣ, ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ. ಉತ್ತರಪ್ರದೇಶದ ಕುಂಭಮೇಳದ ಸೇತುವೆ ಬಿದ್ದ ಪ್ರಕರಣದಲ್ಲಿ ಜನರು ಮೃತ್ತಪಟ್ಟ ಸಂದರ್ಭದಲ್ಲಿ ಅಲ್ಲಿನ ಮುಖ್ಯಮಂತ್ರಿಗಳು ರಾಜಿನಾಮೆ ನೀಡಿದರೇ? ಬಿಜೆಪಿ ಹಾಗೂ ಜೆಡಿಎಸ್ನವರು ಅಲ್ಲಿನ ಮುಖ್ಯಮಂತ್ರಿಗಳ ರಾಜಿನಾಮೆ ಕೇಳಿದರೇ? ಎಂದು ಮರುಪ್ರಶ್ನಿಸಿದರು.

ಸುಹಾಸ್ ಶೆಟ್ಟಿ ಪ್ರಕರಣದಲ್ಲಿ, ತನಿಖೆಯನ್ನು ಎನ್ ಐ ಎಗೆ ವಹಿಸಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು.

ದಸರಾ ಪೂರ್ವಭಾವಿ ಸಭೆ ಹಾಗೂ ಕೆಡಿಪಿ ಸಭೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಮೈಸೂರಿನಲ್ಲಿ ಕೆಡಿಪಿ ಹಾಗೂ ದಸರಾ ಸಭೆ ನಡೆಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ನರೇಗಾ ಹಣವನ್ನು ಸಕಾಲದಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಏನ್ ಡಿ ಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಬಯಸಿದಾಗ ರಾಜ್ಯಗಳು ಹಣ ಪಡೆಯಬೇಕಾದ ಪರಿಸ್ಥಿತಿ ಇದೆ ಎಂದರು

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]