Siddaramaiah is a 'stepping stone' Chief Minister: Union Minister H.D. Kumaraswamy criticizes

ಬೆಂಗಳೂರು ಕಾಲ್ತುಳಿತಕ್ಕೂ ಪೆಹಲ್ಗಾಂ, ಪ್ರಯಾಗ್‌ರಾಜ್‌ ಘಟನೆಗೂ ಏನ್ ಸಂಬಂಧ: ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: ಕಾವೇರಿ ಆರತಿಗೆ ರೂ100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದರು.

ಮಂಡ್ಯದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಕಾವೇರಿ ಆರತಿಗೆ 100 ಕೋಟಿ ಯಾಕೆ ಬೇಕು? ನಮ್ಮ ಪುಟ್ಟರಾಜು ಕೆರೆತಣ್ಣೂರಿನಲ್ಲಿ ಮಾಡಿದಾಗ ಇಂಥ ಕಾರ್ಯಕ್ರಮ ಮಾಡಿದಾಗ ಎಷ್ಟು ಖರ್ಚು ಆಯಿತು ಎಂದು ಕೇಳಿ. ಇಷ್ಟೊಂದು ಬೃಹತ್ ಮೊತ್ತ ವೆಚ್ಚ ಮಾಡುವುದು ಏತಕ್ಕೆ? ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧ ಇದೆ ಎಂದರು.

ಕಾಲ್ತುಳಿತ; ಸರ್ಕಾರದಿಂದ ಗಂಟೆಗೊಂದು ನಿರ್ಧಾರ

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಟೆ ಗಂಟೆಗೊಂದು ನಿರ್ಧಾರ ಮಾಡುತ್ತಿದೆ. ಅಂತಿಮವಾಗಿ ಏನು ಮಾಡುತ್ತದೆ ಎಂಬುದನ್ನು ನೋಡಬೇಕು.

ಮೊದಲು ಮ್ಯಾಜಿಸ್ಟ್ರಿಯಲ್ ತನಿಖೆ ಎಂದರು. ಆಮೇಲೆ ನ್ಯಾಯಾಂಗ ತನಿಖೆ ಎಂದು ಹೇಳಿದರು. ಅದಾದ ಮೇಲೆ ಸಿಐಡಿ ಕೊಡುತ್ತೇವೆ ಎನ್ನುತ್ತಿದ್ದಾರೆ. ಅಂತಿಮವಾಗಿ ಯಾವ ತನಿಖೆ ವರದಿ ಪಡೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು ಎಂದು ಟೀಕಿಸಿದರು.

ಇದನ್ನು ಸರ್ಕಾರ ಎನ್ನಲು ಆಗುತ್ತದೆಯೇ? ಯಾವುದೇ ತೀರ್ಮಾನ ಮಾಡಿದರೆ ಸ್ಪಷ್ಟತೆ ಇರಬೇಕು. ಅಧಿಕಾರಿಗಳ‌ ತಪ್ಪು ಏನಿತ್ತು? ಎಫ್‌ಐಆರ್‌ನಲ್ಲಿ ಅಧಿಕಾರಿಗಳು ಕರ್ತವ್ಯ ಲೋಪ ಆಗಿಲ್ಲ ಎಂದು ಉಲ್ಲೇಖ ಮಾಡಿದ್ದಾರೆ. ಸರ್ಕಾರ ಸಂಪೂರ್ಣವಾಗಿ ವಿಫಲ ಆಗಿದೆ.

ಪೆಹಲ್ಗಾಂ, ಪ್ರಯಾಗ್‌ರಾಜ್‌ನಲ್ಲಿ ಘಟನೆಗಳನ್ನು ಹೇಳುತ್ತಿದ್ದಾರೆ. ಆ ಘಟನೆಗಳಿಗೂ ಇದಕ್ಕೂ ಏನು ಸಂಬಂಧ? ಇಲ್ಲಿ ಇವರು ಮಾಡಿರುವ ತಪ್ಪಿಗೆ ಪೆಹಲ್ಗಾಂ, ಪ್ರಯಾಗ್‌ರಾಜ್ ವಿಚಾರ ತರುತ್ತಿದ್ದಾರೆ.

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಮುಂಬೈ ಮೇಲೆ ಉಗ್ರರ ದಾಳಿ ಆಯಿತಲ್ಲ, ಆಗ ಸಿಂಗ್ ಅವರು ರಾಜೀನಾಮೆ ನೀಡಿದ್ದರಾ? ಕೇವಲ ಸಿಎಂ, ಡಿಸಿಎಂ ವರ್ಚಸ್ಸು ಹೆಚ್ಚಿಸಿಕೊಳ್ಳಲಿಕ್ಕೆ ಮಾಡಿದ ಶೋ ಇದು ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಕುಮಾರಸ್ವಾಮಿ ತಮ್ಮ ಆರೋಗ್ಯ ನೋಡಿಕೊಳ್ಳಲಿ ಎಂದು ಹೇಳಿರುವ ಮಾಜಿ ಸಂಸದ ಡಿಕೆ ಸುರೇಶ್ (DK Suresh) ಹೇಳಿಕೆಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವರು, ನನ್ನ ಆರೋಗ್ಯವನ್ನ ದೇವರು ನೋಡಿಕೊಳ್ಳುತ್ತಾನೆ. ಮಂಡ್ಯ ಜನರ ಹಾರೈಕೆಯಿಂದ ನನಗೆ ಏನು ಆಗಲ್ಲ. ನಾನು ಯಾವುದೇ ಒತ್ತಡದಲ್ಲಿ ಇಲ್ಲ. ಅವರೇ ಒತ್ತಡದಲ್ಲಿ ಇದ್ದಾರೆ ಎಂದು ಟಾಂಗ್ ನೀಡಿದರು.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]