BJP-Dal made a U-turn after forcing RCB to march: DK Suresh

RCB ಮೆರವಣಿಗೆಗೆ ಒತ್ತಾಯ ಮಾಡಿ ಯೂಟರ್ನ್ ಹೊಡೆದ ಬಿಜೆಪಿ- ದಳ: ಡಿಕೆ ಸುರೇಶ್ ಲೇವಡಿ

ಬೆಂಗಳೂರು: “ಆರ್ಸಿಬಿ (RCB) ಗೆದ್ದ ನಂತರ ಬಿಜೆಪಿ ಹಾಗೂ ದಳದ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಎಕ್ಸ್ (ಟ್ವೀಟ್) ಮಾಡಿದ್ದರು. ಆದರೆ ಇಂದು ವರಸೆ ಬದಲಾಯಿಸಿದ್ದಾರೆ. ಬಿಜೆಪಿ ಯೂ ಟರ್ನ್ ಮಾಡುವುದು ಹೊಸದೇನಲ್ಲ” ಎಂದು ನಿಕಟಪೂರ್ವ ಸಂಸದ ಡಿಕೆ ಸುರೇಶ್ (DK Suresh) ಅವರು ಹೇಳಿದರು.

ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಸೋಮವಾರ ಉತ್ತರಿಸಿದರು.

ಬಿಜೆಪಿಯವರು ಡಿಕೆ ಶಿವಕುಮಾರ್ (DK Shivakumar) ಹಾಗೂ ಮುಖ್ಯಮಂತ್ರಿಗಳ ರಾಜಿನಾಮೆಗೆ ಒತ್ತಾಯ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಎರಡೂ ಪಕ್ಷಗಳು ಮೆರವಣಿಗೆಗೆ ಒತ್ತಾಯ ಮಾಡಿದ್ದರು.

ಕ್ರೀಡಾ ಅಭಿಮಾನಿಗಳಿಗೆ ಅವಮಾನ ಮಾಡುತ್ತಿದ್ದೀರಿ, ನಿಮಗೆ ಮೆರವಣಿಗೆ ನಡೆಸಲು ಆಗುವುದಿಲ್ಲವೇ ಎಂದು ಕೇಳಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿಯವರು ಇದೇ ಪ್ರವೃತ್ತಿ ಹೊಂದಿದ್ದಾರೆ.

ಜನ ಅವರಿಗೆ ಬಹುಮತ ನೀಡಿಲ್ಲ. ಬಿಜೆಪಿ ಆಡಳಿತದಲ್ಲಿ ಇರುವ ರಾಜ್ಯಗಳಲ್ಲಿ ಆಗಿರುವ ಘೋರ ದುರಂತಗಳ ಪಟ್ಟಿ ನೀಡುತ್ತೇವೆ. ಬಿಜೆಪಿ ನಾಯುಕರಿಗೆ ನೈತಿಕತೆ ಇದ್ದರೆ ಅವರು ಮೊದಲು ರಾಜಿನಾಮೆ ನೀಡಲಿ” ಎಂದು ಹೇಳಿದರು.

ಮುಂಬೈ ದಾಳಿಯಾದಾಗ ಮನಮೋಹನ್ ಸಿಂಗ್ ಅವರು ರಾಜಿನಾಮೆ ನೀಡಿದ್ದರೆ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ಈ ಘಟನೆ ನಂತರ ವಿಲಾಸ್ ರಾವ್ ದೇಶ್ಮುಖ್ ಅವರು ರಾಜಿನಾಮೆ ನೀಡಿದ್ದರು. ಇದನ್ನು ಕುಮಾರಸ್ವಾಮಿ ಅವರು ಮರೆತು ಹೋಗಿದ್ದಾರೆ.

ಇವರಿಗೆ ಡಿ.ಕೆ.ಶಿವಕುಮಾರ್ ಅವರನ್ನು ನೆನಪಿಸಿಕೊಳ್ಳದೆ ಊಟ, ನಿದ್ದೆ ಏನೂ ಆಗುವುದಿಲ್ಲ. ಅವರು ಮೊದಲು ಆರೋಗ್ಯದ ಬಗ್ಗೆ ಗಮನವಿಡಲಿ, ಈ ರಾಷ್ಟ್ರದ ಜನರ ಸೇವೆ ಮಾಡಲಿ ಎಂದು ಮನವಿ ಮಾಡುತ್ತೇನೆ” ಎಂದರು.

ನನ್ನ ಆರೋಗ್ಯವನ್ನು ದೇವರು ನೋಡಿಕೊಳ್ಳುತ್ತಾನೆ ಎನ್ನುವ ಕುಮಾರಸ್ವಾಮಿ ಪ್ರತ್ಯುತ್ತರದ ಬಗ್ಗೆ ಕೇಳಿದಾಗ, “ಎಲ್ಲರ ಆರೋಗ್ಯವನ್ನು ದೇವರೇ ನೋಡಿಕೊಳ್ಳುವುದು. ಮಂಡ್ಯದ ಜನರ ಆಶೀರ್ವಾದ ಇರಬಹುದು ಕರ್ನಾಟಕದ ಜನರ ಹಾರೈಕೆ ಅಲ್ಲವಲ್ಲ. ಅವರು ಖುಷಿಯಾಗಿದ್ದರೆ ನಮಗೆ ಸಂತೋಷ” ಎಂದು ಹೇಳಿದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ ಐಎ ಗೆ ವಹಿಸಿರುವ ಬಗ್ಗೆ ಕೇಳಿದಾಗ, ನಮ್ಮ ಪೊಲೀಸರು ಸಮರ್ಥರಿದ್ದಾರೆ. ಬಿಜೆಪಿಯವರು ಉನ್ನತ ತನಿಖೆಗೆ ಒತ್ತಾಯಿಸಿದ ಅನೇಕ ಪ್ರಕರಣಗಳನ್ನು ಈ ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸಿಬಿಐಗೆ ನೀಡಿದೆ. ಇದರ ಫಲಿತಾಂಶ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ.

ಕರಾವಳಿ ಭಾಗದಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಇದು ಸರಿಯಲ್ಲ. ಯಾರೇ ತಪ್ಪು ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

ಹೈಕಮಾಂಡ್ ಕರೆ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ದೆಹಲಿ ಭೇಟಿ ನೀಡಿದ್ದಾರೆ ಎನ್ನುವ ಬಗ್ಗೆ ಕೇಳಿದಾಗ, “ಸತ್ಯಕ್ಕೆ ದೂರವಾದ ಮಾತನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿವೆ. ಇದರಲ್ಲಿ ಯಾವುದೇ ಸತ್ಯವಿಲ್ಲ. ಬೆಂಗಳೂರಿನ ಕಸ ವಿಲೇವಾರಿಗೆ ವಿಚಾರವಾಗಿ ಟೆಂಡರ್ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಅವರು ದೆಹಲಿಯಲ್ಲಿ ಇರುವ ಕಸ ವಿಲೇವಾರಿ ಬಗ್ಗೆ ಇರುವ ಹೊಸ ತಂತ್ರಜ್ಞಾನ ವೀಕ್ಷಿಸಲು ಬಿಬಿಎಂಪಿಯ 15 ಜನ ಅಧಿಕಾರಿಗಳ ತಂಡದ ಜೊತೆ ತೆರಳಿದ್ದಾರೆ. ಹೊಸ ರಸ್ತೆ ನಿರ್ಮಾಣದ ಬಗ್ಗೆಯೂ ಚಿಂತನೆ ನಡೆಸಲು ದೆಹಲಿಯ ನಗರಾಭಿವೃದ್ದಿ ಇಲಾಖೆಯ ಜೊತೆ ಸಭೆ ನಡೆಸಲು ತಡರಳಿದ್ದಾರೆ” ಎಂದು ಹೇಳಿದರು.

“ಹೈಕಮಾಂಡ್ ಭೇಟಿ ಮಾಡಬೇಕು ಎಂದು ಹೇಳಿಲ್ಲ. ಶಿವಕುಮಾರ್ ಅವರು ದೆಹಲಿಗೆ ಹೋದಂತಹ ಸಂದರ್ಭದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸುವುದು ಸರ್ವೇ ಸಾಮಾನ್ಯ. ತಿಂಗಳಿಗೆ ಎರಡು ಬಾರಿಯಾದರೂ ದೆಹಲಿಗೆ ಭೇಟಿ ನೀಡುತ್ತಾರೆ. ಪಕ್ಷದ ಅಧ್ಯಕ್ಷರಾಗಿ ಅವರಿಗೂ ಬೇರೆ, ಬೇರೆ ಕೆಲಸಗಳು ಇರುತ್ತವೆ. ನನಗೆ ಇರುವ ಮಾಹಿತಿ ಪ್ರಕಾರ ಮಾಧ್ಯಮಗಳಲ್ಲಿ ಬರುತ್ತಿರುವ ಮಾತು ಸುಳ್ಳು” ಎಂದು ತಿಳಿಸಿದರು.

ತುಮಕೂರನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಬೇಕು ಎನ್ನುವ ಗೃಹಸಚಿವ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಸರ್ಕಾರದ ತೀರ್ಮಾನ. ಅವರು ಸರ್ಕಾರದ ಹಿರಿಯ ಸಚಿವರು, ಸಚಿವ ಸಂಪುಟದಲ್ಲಿ, ಮುಖ್ಯಮಂತ್ರಿಗಳ ಬಳಿ ಮಾತನಾಡಿ ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವು ಸ್ವಾಗತ ಮಾಡುತ್ತೇವೆ” ಎಂದರು.

ನಾಮನಿರ್ದೇಶಿತ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಎಐಸಿಸಿ ತಡೆ ಹಿಡಿದಿದೆ ಎನ್ನುವ ಬಗ್ಗೆ ಕೇಳಿದಾಗ, “ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಎಐಸಿಸಿ ವಿಚಾರ ನನಗೆ ಗೊತ್ತಿಲ್ಲ. ಪಕ್ಷದ ಹಿರಿಯ ಮುಖಂಡರು ಇದನ್ನು ಗಮನಿಸುತ್ತಾರೆ” ಎಂದರು.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]