ಕಡಬ: ರೈಲ್ವೇ ಟ್ರ್ಯಾಕ್ ನಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ (Murder) ಯತ್ನಿಸಿದ ಘಟನೆ ಕೋಡಿಂಬಾಳದ ಕೋರಿಯಾರ್ ಬಳಿ ನಡೆದಿದ್ದು, ಗಾಯಾಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ಸಂಜೆ ನಡೆದಿದೆ.
ಗಂಭೀರ ಸುಟ್ಟ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ಹನುಮಪ್ಪ ಎಂದು ಗುರುತಿಸಲಾಗಿದೆ.
ಗದಗ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಭಾನುವಾರ ಮಧ್ಯಾಹ್ನದ ಮಂಗಳೂರು- ಬೆಂಗಳೂರು ರೈಲು ಮಾರ್ಗ ದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದರು.
ರೈಲು ಹೋದ ಬಳಿಕ ಸುಮಾರು 500 ಮೀ ಮುಂದಕ್ಕೆ ಕರೆದುಕೊಂಡು ಬಂದು ತಮ್ಮ ನಿಂಗಪ್ಪ ಎಂಬಾತ ಏಕಾಏಕಿ ತನ್ನ ಕೈಯಲ್ಲಿದ್ದ ಪೆಟ್ರೋಲ್‌ನ್ನು ಹನುಮಪ್ಪನ ಮೇಲೆ ಎರಚಿ ಬೆಂಕಿ ಹಚ್ಚಿರುವುದಾಗಿ ಹೇಳಲಾಗಿದೆ.
ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಗಾಯಾಳು ಪಕ್ಕದಲ್ಲೇ ಇದ್ದ ಚರಂಡಿ ನೀರಿಗೆ ಜಿಗಿದ ಕಾರಣ ಬೆಂಕಿ ನಂದಿದೆ ಎನ್ನಲಾಗಿದೆ. ಭಾರೀ ಕಿರುಚಾಟ ಕೇಳಿ ಬಂದ ಹಿನ್ನೆಲೆ ಸ್ಥಳೀಯರು ಹೋಗಿ ಗಮನಿಸಿದಾಗ ಗಂಭೀರ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ.
ಕೂಡಲೇ ಗಾಯಾಳುವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ತೆರಳಿದ ಕಡಬ ಪೊಲೀಸರು ಬೆಂಕಿ ಹಚ್ಚಿರುವ ತಮ್ಮ ನಿಂಗಪ್ಪನನ್ನು ವಶಕ್ಕೆ ಪಡೆದಿದ್ದಾರೆ.
ನೀರಲ್ಲಿ ಮುಳುಗಿಸಿ ಮಗಳ ಹತ್ಯೆ
ಗಂಡ-ಹೆಂಡತಿ ಜಗಳದ ಹಿನ್ನೆಲೆ 6 ವರ್ಷದ ಮಗಳನ್ನು ನೀರಲ್ಲಿ ಮುಳುಗಿಸಿ ತಾಯಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಸಾನ್ವಿ (6 ವರ್ಷ) ತಾಯಿಯಿಂದ ಹತ್ಯೆಯಾದ ಕಂದಮ್ಮ.
ಶ್ವೇತಾ(36 ವರ್ಷ) ಎಂಬಾಕೆ ತನ್ನ ಮಗಳನ್ನು ನೀರಲ್ಲಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ.
ಶಿವಮೊಗ್ಗ ಮೂಲದ ರಘು ಎಂಬಾತನ ಜತೆ ಶ್ವೇತ 7 ವರ್ಷದ ಹಿಂದೆ ಮದುವೆ ಆಗಿದ್ದರು. ಮದುವೆಯಾದ 2 ವರ್ಷಕ್ಕೆ ದಂಪತಿ ಮಧ್ಯೆಗಲಾಟೆ ಶುರುವಾಗಿತ್ತು ಎಂದು ವರದಿಯಾಗಿದೆ.