ಬೆಂಗಳೂರು ಗ್ರಾಮಾಂತರ ಜಿಲ್ಲೆ: ಸಂಜೀವಿನಿ ಡೇ-ಎನ್.ಆರ್.ಎಲ್.ಎಂ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಡಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಸಿಬ್ಬಂದಿಗಳಿಗೆ ವಿವಿಧ ಇಲಾಖೆಗಳ ಕಾರ್ಯಕ್ರಮಗಳು, ಯೋಜನೆಗಳನ್ನು ಗ್ರಾಮೀಣ ಭಾಗದ ಮಹಿಳೆಯರಿಗೆ ತಲುಪಿಸುವ ಸಂಬಂಧ ಮಾಹಿತಿ ಹಂಚಿಕೆಯ ತರಬೇತಿ ಕಾರ್ಯಾಗಾರವನ್ನು (Training workshop) ಜೂನ್ 10 ರಂದು ಬೆಳಿಗ್ಗೆ:9.30 ಗಂಟೆಗೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ವಿವಿಧ ಇಲಾಖೆಗಳ ಸಹಕಾರದೊಂದಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತರಬೇತಿ ಕಾರ್ಯಾಗಾರ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು, ಕೃಷಿ ಸಖಿ, ಪಶು ಸಖಿ, ಬಿ.ಸಿ ಸಖಿ, ಎಫ್.ಎಲ್.ಸಿ.ಆರ್.ಪಿ ಗಳು ಹಾಗೂ ಘನ ತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಮಹಿಳಾ ವಾಹನ ಚಾಲಕರುಗಳು ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಪಂ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.