Why are you talking about RCB: R Ashok's remarks spark Rupesh Rajanna's anger

ನಿಮ್ಮ ರಾಜಕೀಯ ಏನಾದ್ರು ಮಾಡಿಕೊಳ್ರಿ, RCB ಬಗ್ಗೆ ಯಾಕ್ ಮಾತಾಡ್ತೀರಿ: ಆರ್ ಅಶೋಕ್ ಮಾತಿಗೆ ರೂಪೇಶ್ ರಾಜಣ್ಣ ಕಿಡಿ

ಬೆಂಗಳೂರು; ಕೋಟ್ಯಾಂತರ ಅಭಿಮಾನಿಗಳ ನಿರೀಕ್ಷೆ ಯಂತೆಯೇ 18ನೇ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ.

ಈ ಮೂಲಕ ಕಳೆದ 18 ವರ್ಷಗಳಿಂದ ‘ ಈ ಸಲ ಕಪ್ ನಮ್ಮೆ’ ಎಂದು ಗುನುಗುನಿಸುತ್ತಿದ್ದ ಅಭಿಮಾನಿಗಳ ಕನಸನ್ನು ಸಾಕಾರ ಗೊಳಿಸಿದೆ.

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್ ಗಳ ಅಂತರದಲ್ಲಿ ಮಣಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

ಕಪ್ ಕನಸು ನನಸಾಗುತ್ತಿದ್ದಂತೆ ವಿರಾಟ್ ಕೊಹ್ಲಿ ಸಂಭ್ರಮ ತಾಳಲಾರದೆ ಕಣ್ಣೀರಿಟ್ಟರು. ಈ ಗೆಲುವಿಗೆ ಎಬಿ ಡಿವಿಲಯರ್ಸ್, ಕ್ರಿಸ್‌ಗೇಲ್ ಸಾಕ್ಷಿಯಾದರು.

ಗೆಲುವು ಖಚಿತವಾಗುತ್ತಿದ್ದಂತೆ RCB ಅಭಿಮಾನಿಗಳ ತಾಳ್ಮೆಯ ಕಟ್ಟೆ ಹೊಡೆದು ಹೋಗಿದೆ. ನಡು ರಾತ್ರಿಯೇ ರಸ್ತೆಗಿಳಿದು ಪಟಾಹಿ ಕೊಡೆದು, ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ಈ ಗೆಲುವಿಗೆ ಸಿಎಂ ಸಿದ್ದರಾಮಯ್ಯ, ಡಿಸಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಆರ್.ಅಶೋಕ, ತಮಿಳುನಾಡಿನ ಎಲ್‌ಕೆ ಸ್ಟಾಲಿನ್, ತೆಲುಗು ಚಿತ್ರ ನಟ ಅಲ್ಲು ಅರವಿಂದ್ ಸೇರಿದಂತೆ ಅನೇಕರು ಶುಭಕೋರಿ ಟ್ವಿಟ್ ಮಾಡಿ ಸಂಭ್ರಮದಲ್ಲಿ ಭಾಗಿಯಾಗಿದ್ದರು.

ಕಾಲ್ತುಳಿತ

ಆದರೆ ವಿಪರ್ಯಾಸ ಮರು ದಿನ ನಡೆದ ಸಂಭ್ರಮಾಚರಣೆಯಲ್ಲಿ ಪ್ರಮಾದವೊಂದು ಸಂಭವಿಸಿ, 11 ಮಂದಿ RCB ಅಭಿಮಾನಿಗಳು ಸಾವನಪ್ಪಿದ್ದಾರೆ. ಇದರಿಂದಾಗಿ 18 ವರ್ಷದ ಕಾತರದ ಸಂಭ್ರಮ ಕೆಲವೇ ಗಂಟೆಗಳಲ್ಲಿ ಇಲ್ಲವಾಗಿ ಹೋಯ್ತು.

ಹೌದು 18 ವರ್ಷಗಳ ಬಳಿಕ ಕಪ್ ಗೆದ್ದ ಸಂಭ್ರಮ ಇಡೀ ದೇಶವನ್ನೇ ಅವರಿಸಿತು. ಇದಕ್ಕೆ ಆಟಗಾರರನ್ನು ಸನ್ಮಾನಿಸಲು ರಾಜ್ಯ ಕಾಂಗ್ರೆಸ್ ಸರ್ಕಾರದ ವಿಧಾನ ಸೌಧದ ಬಳಿ ಸನ್ಮಾನ ಕಾರ್ಯಕ್ರಮ ಆಯೋಜಿಸಿತ್ತು. ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಆಟಗಾರರಿಗೆ ಸ್ವಾಗತ ಕೋರಿದರು, ಮತ್ತೊಂದೆಡೆ ಕ್ರಿಕೆಟ್‌ ಮಂಡಳಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ವಿಜಯೋತ್ಸವ ಆಯೋಜಿಸಿತ್ತು.

ಆದರೆ ಈ ವೇಳೆ RCB ಅಭಿಮಾನಿಗಳ ಸುನಾಮಿಗೆ ಬೆಂಗಳೂರು ಸ್ತಬ್ಧವಾಗಿದ್ದರೆ, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಟಿಕೆಟ್ ಗೊಂದಲ, ಏಕಾಏಕಿ ಗೇಟ್ ತೆರೆದ ಕಾರಣ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಸಾವನಪ್ಪಿ, 44 ಮಂದಿ ಆರ್‌ಸಿಬಿ ಅಭಿಮಾನಿಗಳು ಗಾಯಗೊಂಡರು.

ಮೈತ್ರಿ ನಾಯಕರ ದಾಳಿ

ಇದರ ಬೆನ್ನಲ್ಲೇ ಶುರುವಾಗಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಲ-ದಳ ಮೈತ್ರಿ ನಾಯಕರ ದಾಳಿ, ಸಿಎಂ ರಾಜೀನಾಮೆ ಕೊಡಬೇಡು, ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಆರಂಭವಾಗಿ ಕೊನೆಗೆ RCB ಗೆಲುವಿನ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿಗೆ ಅನುಮಾನ‌ ವ್ಯಕ್ತಪಡಿಸಿದರೇ, ಇದೀಗ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆರ್‌ಸಿಬಿ ಅಂದ್ರೆ Real Culprits of Bangalore ಅಂತ ವಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಲೇವಡಿ ಮಾಡಿದ್ದಾರೆಂದು ಖಾಸಗಿ ವಾಹಿನಿ ವರದಿ ಮಾಡಿದೆ.

RCBನ ಬ್ಯಾನ್ ಮಾಡಬೇಕು

ಮತ್ತೊಂದೆಡೆ RCBನ ಬ್ಯಾನ್ ಮಾಡಬೇಕು, ವಿರಾಟ್ ಕೊಯ್ಲಿನ ಬಂಧಿಸಬೇಕು ಎಂಬಂತೆ ಬೇಕಾಬಿಟ್ಟಿ ವರದಿಗಳು ವ್ಯಾಪಕವಾಗಿದ್ದು, ಖುದ್ದು ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋ ಸ್ವಾಮಿ ವಿರಾಟ್ ಕೊಹ್ಲಿ ವಿರುದ್ಧ ಮಾತನಾಡಿದರೆ, ಕುಂಭಮೇಳ ಕಾಲ್ತುಳಿತ ಭಕ್ತರ ಉನ್ಮಾದ ಎಂದ ಖಾಸಗಿ ವಾಹಿನಿಯೊಂದು, ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಸರ್ಕಾರದ ಹೊಣೆ ಎಂದು ತೀರ್ಪು ನೀಡಿದೆ.

RCB ಅಭಿಮಾನಿಗಳ ತಾಳ್ಮೆಯ ಕಟ್ಟೆಹೊಡೆಯುತ್ತಿದೆ

ಈ ಎಲ್ಲಾ ಬೆಳವಣಿಗೆ ನಡುವೆ RCB ಅಭಿಮಾನಿಗಳ ತಾಳ್ಮೆಯ ಕಟ್ಟೆಹೊಡೆಯುತ್ತಿದೆ. ಈಗಾಗಲೇ 18 ವರ್ಷದ ಬಳಿಕ ದೊರೆತ ಗೆಲುವನ್ನು ಪೂರ್ಣವಾಗಿ ಸಂಭ್ರಮಿಸಲಾಗದೆ ಅಭಿಮಾನಿಗಳು ಚಡಪಡಿಸುತ್ತಿದ್ದಾರೆ.

ಇದರ ಬೆನ್ನಲ್ಲೆ ಈ ರೀತಿಯ ಮಾತುಗಳು ಅಭಿಮಾನಿಗಳ ತಾಳ್ಮೆ ಕೆಡಿಸಿದ್ದು, ಕುಂಭಮೇಳ ಕಾಲ್ತುಳಿತ, ಪಹಲ್ಗಾಮ್ ದಾಳಿಯನ್ನು ದೊಡ್ಡದು ಮಾಡದ ನ್ಯೂಸ್ ಚಾನಲ್‌ಗಳು ಈ ಘಟನೆಯನ್ನು ದೊಡ್ಡದಾಗಿ ಬಿಂಬಿಸುವ ಮೂಲಕ RCB ವಿರುದ್ಧ ಷಡ್ಯಂತ್ರ ರೂಪಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಆರ್ ಸಿ ಬಿ ಬಗ್ಗೆ ಯಾಕ್ ಮಾತಾಡ್ತೀರಿ

ಇದರ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆಯನ್ನು ಖಂಡಿಸಿದ್ದಾರೆ.

RCB ಕಪ್ ಗೆದ್ದಾಗ ಶುಭಕೋರಿದ್ದ ಆರ್.ಅಶೋಕ್ ಪೋಸ್ಟ್ ಹಂಚಿಕೊಂಡಿರುವ ಅವರು, ಈ ಪೋಸ್ಟ್ ಹಾಕಬೇಕಾದ್ರೆ ತಮಗೆ ಗೊತ್ತಿರಲಿಲ್ಲವೇ? ಅಶೋಕಣ್ಣ, ನಿಮ್ಮ ರಾಜಕೀಯ ಏನಾದ್ರು ಮಾಡಿಕೊಳ್ರಿ.. ಅದು ಬಿಟ್ಟು
ಆರ್ ಸಿ ಬಿ ಬಗ್ಗೆ ಯಾಕ್ ಮಾತಾಡ್ತೀರಿ.

ಎಲ್ಲಾ ರಾಜ್ಯದವರು ಅವರವರ ತಂಡನಾ ಇಷ್ಟ ಪಡುವಾಗ ನಾವು ನಮ್ಮ ತಂಡದ ಗೆಲುವು ಇಷ್ಟ ಪಟ್ರೆ ತಪ್ಪೇನು? ನಾವು RCB ಪ್ರೀತಿ ಮಾಡೋದು ಬೆಂಗಳೂರು ಅನ್ನೋ ಹೆಸರಿಗಾಗಿ ಎಂದು ತಿರುಗೇಟು ನೀಡಿದ್ದಾರೆ.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!