Admission to 6th class in Jawahar Navodaya Vidyalayas

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು; ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ ನವೋದಯ ವಿದ್ಯಾಲಯಗಳಲ್ಲಿ (Jawahar Navodaya Vidyalaya) 2026-27ನೇ ಸಾಲಿಗೆ ಆಯ್ಕೆ ಪರೀಕ್ಷೆಯ ಮೂಲಕ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 2025 ನೇ ಜುಲೈ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿರುವ ಸಂಬಂಧಿಸಿದ ಜವಾಹರ ನವೋದಯ ವಿದ್ಯಾಲಯಗಳ ಆಯಾ ಜಿಲ್ಲೆಯ ನಿವಾಸಿಗಳು ಆಗಿರಬೇಕು ಮತ್ತು 2025-26 ನೇ ಶೈಕ್ಷಣಿಕ ವರ್ಷದಲ್ಲಿ ಅದೇ ಜಿಲ್ಲೆಯ ಸರ್ಕಾರಿ/ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು.

ವಿದ್ಯಾರ್ಥಿಯು 3 ಮತ್ತು 4 ನೇ ತರಗತಿಯ ಪೂರ್ಣ ಶೈಕ್ಷಣಿಕ ವರ್ಷವನ್ನು ಸರ್ಕಾರಿ/ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಪೂರ್ಣಾವಧಿ ಶಾಲಾ ಶಿಕ್ಷಣ ಪಡೆದು ತೇರ್ಗಡ ಹೊಂದಿರಬೇಕು. ದಿನಾಂಕ:01-05-2014 ರಿಂದ ದಿನಾಂಕ: 31-07-2016 ಮಧ್ಯೆ ಜನಿಸಿದವರಾಗಿರಬೇಕು.

ಪ್ರತಿ ಜಿಲ್ಲೆಯಲ್ಲಿ ಸಹ ಶಿಕ್ಷಣ ವಸತಿ ಶಾಲೆಗಳು, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ, ಉಚಿತ ಶಿಕ್ಷಣ, ಆಹಾರ ಮತ್ತು ವಸತಿ ವ್ಯವಸ್ಥೆ, ವಲಸೆ ಯೋಜನೆಯ ಮೂಲಕ ವೈವಿಧ್ಯಮಯ ಸಾಂಸ್ಕøತಿಕ ವಿನಿಮಯ, ಕ್ರೀಡೆ ಮತ್ತು ಆಟೋಟಗಳಿಗೆ ಉತ್ತೇಜನ ನೀಡಲಾಗುತ್ತಿದೆ.

ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಗೈಡ್ಸ್ ಎನ್.ಎಸ್.ಎಸ್. ತರಬೇತಿ ನೀಡಲಾಗುವುದು.

ಜಿಲ್ಲೆಯಲ್ಲಿ ಕನಿಷ್ಠ ಶೇ. 75% ರಷ್ಟು ಸ್ಥಾನಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಂದ ತುಂಬಲಾಗುವುದು.

ಸರ್ಕಾರದ ನಿಯಮದನ್ವಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮತ್ತು ದಿವ್ಯಾಂಗ ವಿದ್ಯಾರ್ಥಿಗಳಿಗೆ ಮೀಸಲಾತಿ ಇದೆ. ಕನಿಷ್ಠ 1/3 ರಷ್ಟು ಸ್ಥಾನಗಳು ಬಾಲಕಿಯರಿಗೆ ಮೀಸಲಾಗಿರುತ್ತವೆ.

ಆಯ್ಕೆ ಪರೀಕ್ಷೆ ದಿನಾಂಕ ಬೇಸಿಗೆಕಾಲ 2025 ನೇ ಡಿಸೆಂಬರ್ 13 ಹಾಗೂ ಚಳಿಗಾಲದಲ್ಲಿ 2026 ಏಪ್ರಿಲ್ 11 ರಂದು ಆಯ್ಕೆ ಪರೀಕ್ಷೆಗಳು ನಡೆಯುತ್ತವೆ ನೋಂದಣಿ ಮತ್ತು ವಿವರಗಳಿಗಾಗಿ ವೆಬ್ಸೈ್ಟ್ https://navodaya.gov.in/NVS.htmlನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ರಾಜಕೀಯ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಗ್ಯಾರಂಟಿಗಳಿಗೆ ಈ ಹಣವನ್ನು ಬಳಸಿದರೂ ಇನ್ನೂ ಹಣ ಉಳಿಯುತ್ತದೆ. ಗ್ಯಾರಂಟಿಗೆ ಹಣ ಕೊಡಬೇಡಿ ಎಂದು ಹೇಳುತ್ತಿಲ್ಲ. ಆರ್. ಅಶೋಕ (R. Ashoka)

[ccc_my_favorite_select_button post_id="112891"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!