Another chance to resolve caste census confusion: DCM DK Shivakumar

ಜಾತಿಗಣತಿ ಗೊಂದಲ ಬಗೆಹರಿಸಲು ಮತ್ತೆ ಅವಕಾಶ: ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ: “ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸಲ್ಲಿಸಲು ಅವಕಾಶ ನೀಡಲಾಗುವುದು. ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.

ನವದೆಹಲಿಯಲ್ಲಿ ಎಐಸಿಸಿ ನಾಯಕರ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಂಗಳವಾರ ಮಾತನಾಡಿದರು.

“ಮಂಗಳವಾರದಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆಸಿ ಪಕ್ಷ ಸಂಘಟನೆ ವಿಚಾರವಾಗಿ, ರಾಜ್ಯ ರಾಜಕಾರಣ ಹಾಗೂ ಇತ್ತೀಚಿನ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚೆ ಮಾಡಲಾಯಿತು” ಎಂದು ಹೇಳಿದರು.

ಜಾತಿ ಗಣತಿ ವಿಚಾರವಾಗಿ ಇದೇ ತಿಂಗಳ 12ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲು ನಿರ್ಧರಿಸಿದ್ದೆವು. ಈ ವಿಚಾರವಾಗಿ ಸಂಸದರು, ಶಾಸಕರು, ಸಂಘ ಸಂಸ್ಥೆಗಳು ನಮ್ಮ ವರಿಷ್ಠರ ಜತೆ ಚರ್ಚೆ ಮಾಡಿದ್ದಾರೆ.

ಕೆಲವು ಸಂಘಟನೆ ಹಾಗೂ ಸಮಾಜಗಳಿಂದ ಈ ಜಾತಿ ಗಣತಿಗೆ ಅಪಸ್ವರ ಬಂದಿರುವ ಹಿನ್ನೆಲೆಯಲ್ಲಿ ಎಲ್ಲರಿಗೂ ನ್ಯಾಯಬದ್ಧವಾಗಿ ಅವಕಾಶ ಕಲ್ಪಿಸಿಕೊಡಬೇಕು ಎಂದು ವರಿಷ್ಠರು ನಮಗೆ ಮಾರ್ಗದರ್ಶನ ನೀಡಿದ್ದಾರೆ.

ಈ ಜಾತಿ ಗಣತಿಯಲ್ಲಿ ಯಾರನ್ನೂ ಬಿಡಬಾರದು, ಎಲ್ಲರನ್ನು ಒಳಗೊಳ್ಳಬೇಕು ಎಂದು ತೀರ್ಮಾನಿಸಲಾಗಿದೆ. ಯಾರ ಅಪಸ್ವರವೂ ಇಲ್ಲದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಸಾಮಾಜಿಕ ನ್ಯಾಯದ ಬಗ್ಗೆ ಸರ್ಕಾರದ ಬದ್ಧತೆ ಇದೆ. ಜಾತಿ ಗಣತಿಯಲ್ಲಿ ಅಂಕಿ ಅಂಶಗಳ ಬಗ್ಗೆ ಅನೇಕ ಸಮಾಜಗಳು ಅಪಸ್ವರ ಎತ್ತಿದ್ದು, ಈ ಬಗ್ಗೆ ಎಲ್ಲರಿಗೂ ಸ್ಪಷ್ಟನೆ ನೀಡಲು ಅವಕಾಶ ಮಾಡಿಕೊಡಬೇಕು ಎಂದು ತೀರ್ಮಾನಿಸಲಾಗಿದೆ.

ಸಾರ್ವಜನಿಕರು ನ್ಯಾಯಬದ್ಧವಾಗಿ ಯಾವ ಸಮಾಜಕ್ಕೆ ಸೇರಿದ್ದೀರಿ ಎಂಬುದನ್ನು ವ್ಯಕ್ತಪಡಿಸಿಕೊಳ್ಳಬೇಕು. ಈ ಅವಕಾಶವನ್ನು ಎಲ್ಲರೂ ಬಳಸಿಕೊಳ್ಳಬೇಕು. ಸಮಾಜದ ಮುಖಂಡರು ಹಾಗೂ ಮಠಾಧೀಶರು ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಳೆದ ಎರಡು ತಿಂಗಳಿನಿಂದ ಒಳಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿ ಅವರ ಜನಗಣತಿ ಮಾಡುತ್ತಿದ್ದೇವೆ. ಹೀಗಾಗಿ ಈ ಪ್ರಕ್ರಿಯೆ ಸುದೀರ್ಘವಾಗಿ ನಡೆಯುವುದರಿಂದ ಇದನ್ನು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ನಾವು ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು. ಇದರಲ್ಲಿ ಯಾವುದೇ ಆತಂಕ ಬೇಡ.

ನಮ್ಮ ಈ ಪ್ರಯತ್ನದ ಮೂಲಕ ಜಾತಿಗಣತಿ ವಿಚಾರವಾಗಿ ಇರುವ ಅಪಸ್ವರವನ್ನು ಸರಿಪಡಿಸಲಾಗುವುದು. ನಮ್ಮ ರಾಜ್ಯದವರು ಎಲ್ಲೇ ಇದ್ದರೂ ಈ ಬಗ್ಗೆ ಆನ್ಲೈನ್ ಮೂಲಕ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆಯಾಯಿತೇ ಎಂದು ಕೇಳಿದಾಗ, “ಈ ವಿಚಾರವಾಗಿ ಚರ್ಚೆ ಮಾಡಲಾಯಿತು. ಈ ದುರ್ಘಟನೆಯನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಬಗ್ಗೆ ವರಿಷ್ಠರಿಗೆ ಸಂಪೂರ್ಣ ಮಾಹಿತಿ ನೀಡಿ ಸತ್ಯಾಸತ್ಯತೆಯನ್ನು ವಿವರಿಸಿದ್ದೇವೆ” ಎಂದು ತಿಳಿಸಿದರು.

ಸಚಿವ ಸಂಪುಟ ಮರುವಿಂಗಡಣೆ ಬಗ್ಗೆ ಚರ್ಚೆಯಾಯಿತೇ ಎಂದು ಕೇಳಿದಾಗ, “ಈ ವಿಚಾರವಾಗಿ ಯಾವುದೇ ಚರ್ಚೆ ಆಗಿಲ್ಲ” ಎಂದು ತಿಳಿಸಿದರು.

ವಿಧಾನ ಪರಿಷತ್ ಸ್ಥಾನಕ್ಕೆ ನಾಮನಿರ್ದೇಶನದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಹೈಕಮಾಂಡ್ ಪರಿಶೀಲಿಸಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಿದೆ” ಎಂದು ತಿಳಿಸಿದರು.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]