June 30th marks the birth anniversary of Nadaprabhu Kempegowda.

ಗುಡ್ಮಾರ್ನಿಂಗ್ ನ್ಯೂಸ್: ಜೂ.30 ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ.. 27 ಕ್ಕೆ ಆವತಿಯಿಂದ ಜ್ಯೋತಿ ಮೆರವಣಿಗೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜೂನ್ 27 ರಂದು ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ (Nadaprabhu Kempegowda Jayanti) ಕಾರ್ಯಕ್ರಮಕ್ಕೆ ದೇವನಹಳ್ಳಿಯ ಆವತಿ ಗ್ರಾಮದಿಂದ ಜ್ಯೋತಿ ಹೊರಡಲಿದ್ದು ಜೂನ್ 30 ರಂದು ನಾಡಪ್ರಭು ಕೆಂಪೇಗೌಡ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಹಿನ್ನೆಲೆ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಬೆಂಗಳೂರಿನ ಬಾಬು ಜಗಜೀವನರಾಂ ಭವನದಲ್ಲಿ ಆಯೋಜಿಸಲಾಗಿದ್ದು ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಿಂದ ಬೆಳಿಗ್ಗೆ 08:30 ಗಂಟೆಗೆ ಕೆಂಪೇಗೌಡ ಜ್ಯೋತಿಯು ಹೊರಡಲಿದೆ.

ಜೂನ್ 27 ರಂದು ಕೆಂಪೇಗೌಡ ಜ್ಯೋತಿ ರಥ ಯಾತ್ರೆ ಕಾರ್ಯಕ್ರಮ ಇರುವುದರಿಂದ, ಆ ದಿನ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಹೊರಡಬೇಕಿದೆ.

ಹಾಗಾಗಿ ಜಿಲ್ಲಾ ಮಟ್ಟದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಜೂನ್ 30 ರಂದು ಆಚರಿಸಲು ನಿರ್ಧರಿಸಲಾಗಿದ್ದು, ಜಿಲ್ಲಾಡಳಿತದಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಪುತ್ಥಳಿ, ವೇದಿಕೆ ಅಲಂಕಾರ ವ್ಯವಸ್ಥೆ, ಕುಡಿಯುವ ನೀರು, ಊಟೋಪಚಾರ ಸುವ್ಯವಸ್ಥಿತವಾಗಿ ಆಗಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಶಾಲಾ ಕಾಲೇಜು ಮಕ್ಕಳಿಗೆ ಪ್ರಬಂಧ, ಚರ್ಚಾ ಸ್ಪರ್ಧೆ ಏರ್ಪಡಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ, ಎಸ್ಸೆಸ್ಸೆಲ್ಸಿ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿ ಸನ್ಮಾನಿಸಲಾಗುವುದು ಅದಕ್ಕಾಗಿ ಪಟ್ಟಿ ಸಿದ್ಧಪಡಿಸಿ ಎಂದು ಶಾಲಾ ಶಿಕ್ಷಣ ಇಲಾಖೆ ಗೆ ಸೂಚಿಸಿದರು.

ಜಿಲ್ಲಾ ಮಟ್ಟದ ಕಾರ್ಯಕ್ರಮ ದಿನದಂದು ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಿಂದ ಕೆಂಪೇಗೌಡರ ಪಲ್ಲಕ್ಕಿ ಮೆರವಣಿಗೆ ಹೊರಡಲಿದ್ದು ತಾಲ್ಲೂಕು ಇಒ ಹಾಗೂ ತಹಶೀಲ್ದಾರ್ ಗಳು ಅಗತ್ಯ ಕ್ರಮ ವಹಿಸಿ ಎಂದರು.

ಕೆಂಪೇಗೌಡ ಜ್ಯೋತಿ ರಥಯಾತ್ರೆ ಕಾರ್ಯಕ್ರಮಕ್ಕೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಸಂಘ ಸಂಸ್ಥೆಗಳು, ಸ್ತ್ರೀ ಶಕ್ತಿ ಸಂಘಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕೋರಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸದಸ್ಯರು ಉಪಸ್ಥಿತರಿದ್ದರು.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]