MLA Konaraddy, District Collector visit rain-damaged area

ಮಳೆ ಹಾನಿ ಪ್ರದೇಶಕ್ಕೆ ಶಾಸಕ ಕೋನರಡ್ಡಿ, ಜಿಲ್ಲಾಧಿಕಾರಿ ಭೇಟಿ

ಧಾರವಾಡ; ಪಟ್ಟಣದಲ್ಲಿ ಮೂರು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ರಸ್ತೆ ಸಂಚಾರವನ್ನೇ ಅಸ್ತವ್ಯಸ್ತಗೋಳಿಸಿದೆ ಪ್ರದೇಶಗಳಿಗೆ ಶಾಸಕ ಎನ್ ಎಚ್ ಕೋನರಡ್ಡಿ (N.H.Konaraddy), ಜಿಲ್ಲಾಧಿಕಾರಿ ದಿವ್ಯ ಪ್ರಭು (District Collector Divya Prabhu), ಎಸ್ ಪಿ ಡಾ.ಗೋಪಾಲ ಬ್ಯಾಕೋಡಿ ಭೇಟಿ ನೀಡಿ ಪರಿಶೀಲಿದರು.

ಇಬ್ರಾಹಿಂಪುರ ರಸ್ತೆ ಹಳ್ಳದ ಹತ್ತಿರವಿರುವ ಎಸ್ ಎಸ್ ಬಾಗಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಮಳೆಗೆ ಸಿಲುಕಿ ತೊಂದರೆ ಅನುಭವಿಸಿದ ಮಕ್ಕಳನ್ನು ಬೇಟಿ ಮಾಡಿ ದೈರ್ಯ ತುಂಬಿದರು. ನಂತರ ಹಾನಿಗಿಡಾದ ಪ್ರದೇಶಳನ್ನು ವೀಕ್ಷಣೆ ಮಾಡಿದರು.

ಸೋಮವಾರ ಸಂಜೆ ಸುರಿದ ಮಳೆಗೆ ಇಬ್ರಾಹಿಂಪುರ್ ನವಲಗುಂದ ಮಧ್ಯದ ಎರಡು ಹಳ್ಳಗಳು ತುಂಬಿ ಹರಿಯುತ್ತಿದ್ದರೆ ತಿರ್ಲಾಪುರ ಯಮನೂರ, ಹಾಳಕುಸುಗಲ, ಇಬ್ರಾಹಿಂಪೂರ ಹಾಗೂ ಪಟ್ಟಣದ ಕೆಲವು ಭಾಗಗಳಲ್ಲಿ ಗಟಾರ್ ತುಂಬಿ ನೀರು ರಸ್ತೆ ಮೇಲೆ ಹರಿದು ರಸ್ತೆ ಸಂಚಾರವನ್ನೇ ಮೃಘಶಿರ ಮಳೆ ಸ್ಥಗಿತಗೊಳಿಸಿತ್ತು.

ಪಟ್ಟಣದ ಮಿನಿ ವಿಧಾನಸೌಧ ಮುಂಭಾಗದ ಗಟಾರು ತುಂಬಿ ರಸ್ತೆ ಮೇಲೆ ನೀರು ಹರಿದು ಪಕ್ಕದ ನೀರಾವರಿ ಕಾಲೋನಿ, ಮನೆಗಳಿಗೆ ನೀರು ನುಗ್ಗಿದರೆ ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಸೊಲ್ಲಾಪುರ ಶೆಟ್ಟರ ಕೆರಿ ಹತ್ತಿರ ಮಳೆ ನೀರು ಗಟಾರ್ ತುಂಬಿ ರಸ್ತೆಯ ಮೇಲೆ ಹರಿದಿತ್ತು ಇನ್ನು ವಸತಿ ಶಾಲೆಗಳಾದ ರಾಣಿ ಚೆನ್ನಮ್ಮ, ಬಿಸಿಎಂ ಹಾಸ್ಟೆಲ್, ದಿ. ದೇವರಾಜ ಅರಸು ಹಿಂದುಳಿದ ವರ್ಗದ ವಸತಿ, ಶಾಲೆ ಎಲ್.ಐ.ಸಿ ಆಫೀಸ್, ಅಂಬೇಡ್ಕರ್ ನಗರ, ಮಾಡೆಲ್ ಹೈಸ್ಕೂಲ್ ಹತ್ತಿರದ ಕುರಹಟ್ಟಿ ಪ್ಲಾಟ್, ಅಂಬೇಡ್ಕರ್ ನಗರ, ಬಸವೇಶ್ವರನಗರದ ಸರಕಾರಿ ಶಾಲೆಗಳು, ಹಾಗೂ ಹಾದಿ ಬಸವೇಶ್ವರ ದೇವಸ್ಥಾನದ ರಸ್ತೆಯು ನೀರಿನಿಂದ ಜಲಾವೃತಗೊಂಡಿದ್ದವು ಮಳೆಯಿಂದ ಜನರಿಗೆ ಭಯದ ವಾತಾವರಣ ಸೃಷ್ಟಿಯಾಗಿತ್ತು.

ಪ್ರತಿ ಬಾರಿ ಮಳೆ ಬಂದಾಗ ಈ ಶಾಲೆ ಮಕ್ಕಳು, ಇಬ್ರಾಹಿಂಪುರ್ ಗ್ರಾಮಸ್ಥರು ಹಾಗೂ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಈ ಹಿಂದೆಯೂ ಕೂಡ ಸಾಕಷ್ಟು ಬಾರಿ ರೈತರು ಹಾಗೂ ಸಾರ್ವಜನಿಕರು ಈ ಎರಡು ಹಳ್ಳಗಳಿಗೆ ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಮೌಖಿಕವಾಗಿ ಹಾಗೂ ಮನವಿ ಮುಖಾಂತರ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಹೇಳಿದರೂ ಕೂಡ ಪ್ರಯೋಜನವಾಗುತ್ತಿಲ್ಲ ಆದಷ್ಟು ಬೇಗನೆ ಶಾಸಕರು ಮುತುವರ್ಜಿ ವಹಿಸಿ ಈ ಎರಡು ಹಳ್ಳಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ ಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.

ಅತಿ ಹೆಚ್ಚು ನೀರು ನುಗ್ಗಿದ ಪ್ರದೇಶಗಳಿಗೆ ತಹಶೀಲ್ದಾರ್ ಸುಧೀರ್ ಸಾಹುಕಾರ, ಪುರಸಭೆ ಮುಖ್ಯಧಿಕಾರಿ ಶರಣು ಪೂಜಾರ, ಸಿಪಿಐ ರವಿಕುಮಾರ ಕಪ್ಪತನ್ನವರ, ಪುರಸಭೆ ಅಧ್ಯಕ್ಷ ಶಿವಾನಂದ ತಡಿಸಿ ಹಾಗೂ ಪುರಸಭೆ ಸದಸ್ಯರು ಭೇಟಿ ಸಮಸ್ಯೆಗಳಿಗೆ ಸ್ಪಂದಿಸಿದರು.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]