Opposition leader R Ashoka visits deceased Bhumik's house

ಮೃತ ಭೂಮಿಕ್‌ ಮನೆಗೆ ಪ್ರತಿಪಕ್ಷ ನಾಯಕ ಆರ್‌ ಅಶೋಕ ಭೇಟಿ

ಹಾಸನ: ಆರ್‌ಸಿಬಿ (RCB) ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಭೂಮಿಕ್‌ ಅವರ ಮನೆಗೆ ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ (R Ashoka) ಹಾಗೂ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಮೃತ ವಿದ್ಯಾರ್ಥಿ ಭೂಮಿಕ್‌ ಅವರ ತಂದೆ ಡಿ.ಟಿ.ಲಕ್ಷ್ಮಣ ಅವರೊಂದಿಗೆ ಆರ್.ಅಶೋಕ ಮಾತನಾಡಿ, ಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಇದಕ್ಕೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ, ಎಂಜಿನಿಯರಿಂಗ್‌ ವಿದ್ಯಾರ್ಥಿ ಭೂಮಿಕ್‌ ಮೃತಪಟ್ಟಿದ್ದರಿಂದ ಕುಟುಂಬದವರಿಗೆ ಬಹಳ ದುಃಖವಾಗಿದೆ. ಈ ಕುಟುಂಬದವರ ಜಮೀನಿನಲ್ಲಿ 30 ಜನರು ಕೆಲಸ ಮಾಡುತ್ತಿದ್ದಾರೆ. ಇವರ ಆರ್ಥಿಕ ಸ್ಥಿತಿ ಉತ್ತಮವಾಗಿಯೇ ಇದೆ. ಆದರೆ, ಈಗ ಒಬ್ಬನೇ ಮಗ ಮೃತಪಟ್ಟಿದ್ದು, ಆ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ.

ಆರ್‌ಸಿಬಿ ಸಂಭ್ರಮಾಚರಣೆಯನ್ನು ಎರಡು ಮೂರು ದಿನ ಮುಂದೂಡಿದ್ದರೆ ಯಾರಿಗೂ ಸಮಸ್ಯೆಯಾಗುತ್ತಿರಲಿಲ್ಲ ಎಂದು ಈ ಕುಟುಂಬ ಸೇರಿದಂತೆ ಎಲ್ಲರೂ ಹೇಳುತ್ತಿದ್ದಾರೆ. ಕ್ರಿಕೆಟ್‌ನ ಸಂಭ್ರಮಾಚರಣೆ ಜನರಿಗೆ ನೋವು ತಂದಿದೆ. ಈ ಸಾವುಗಳಿಗೆ ನ್ಯಾಯ ಸಿಗಬೇಕು ಎಂದರು.

ಇಂತಹ ಸ್ಥಿತಿ ಯಾವ ತಂದೆ ತಾಯಿಗೂ ಬರಬಾರದು ಎಂದು ಭೂಮಿಕ್‌ ಅವರ ತಂದೆ ಹೇಳುತ್ತಿದ್ದಾರೆ. ಭೂಮಿಕ್‌ ಅವರ ತಂದೆ ಸಮಾಧಿಯ ಬಳಿಯೇ ದುಃಖದಿಂದ ಎರಡು ಮೂರು ದಿನ ಕಳೆದಿದ್ದಾರೆ.

ಮುಂದೆ ಈ ರೀತಿಯ ಅನಾಹುತ ನಡೆಯಬಾರದು. ಕಾರ್ಯಕ್ರಮ ಮಾಡುವುದು ಬೇಡವೆಂದು ಪೊಲೀಸರು ಸೂಚನೆ ನೀಡಿದ್ದರೂ, ಅದನ್ನು ಪಾಲಿಸಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ಇದು ಸೂಕ್ತವಾದ ತನಿಖೆಗೆ ಒಳಪಡಬೇಕು. ನ್ಯಾಯ ಕೊಡಿಸಲು ನಾವೆಲ್ಲರೂ ಹೋರಾಟ ಮುಂದುವರಿಸುತ್ತೇವೆ ಎಂದರು.

ಮೃತ ಭೂಮಿಕ್‌ ತಂದೆ ಲಕ್ಷ್ಮಣ ಮಾತನಾಡಿ, ಇಷ್ಟು ಜನಸಂದಣಿ ಇರುವಾಗ ಇಂತಹ ಕಾರ್ಯಕ್ರಮ ಮಾಡಬಾರದು ಎಂದು ಸರ್ಕಾರಕ್ಕೆ ಯಾಕೆ ಗೊತ್ತಾಗಲಿಲ್ಲ? ನಮ್ಮಂತಹವರ ಮಕ್ಕಳ ಪ್ರಾಣ ಹೋಗಿದೆ. ಸರ್ಕಾರವೇನೋ ಪರಿಹಾರ ನೀಡಿದೆ. ಆದರೆ ಆ ಹಣ ನಮ್ಮನ್ನು ನೋಡಿಕೊಳ್ಳುತ್ತದೆಯೇ? ಎಂದು ಪ್ರಶ್ನೆ ಮಾಡಿದರು.

ಆರ್‌.ಅಶೋಕ ಸೇರಿದಂತೆ ಎಲ್ಲ ಮುಖಂಡರು ನಮಗೆ ಸಹಾಯ ಮಾಡಿದ್ದಾರೆ. ಎಲ್ಲ ತಂದೆ ತಾಯಿಗಳಿಗೆ ಇವರು ಸ್ಪಂದಿಸಿದ್ದಾರೆ. ಘಟನೆ ನಡೆದ ಕೂಡಲೇ ಅಗತ್ಯವಾದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇದು ರಾಜಕೀಯವಲ್ಲ. ಮಾನವೀಯತೆ ದೃಷ್ಟಿಯಿಂದ ಇವರು ಸಹಾಯ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]