Stampede case: BY Vijayendra open letter to CM

ಕಾಲ್ತುಳಿತ ಪ್ರಕರಣ: ಸಿಎಂಗೆ ಬಿವೈ ವಿಜಯೇಂದ್ರ ಬಹಿರಂಗ ಪತ್ರ

ಬೆಂಗಳೂರು: ಸಹೋದರ ಸಂಸದ ಬಿವೈ ರಾಘವೇಂದ್ರ (BY Ragavendra) ಮಗನ ಮದುವೆ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ, ರಾಜಕೀಯ ಚಟುವಟಿಕೆಗೆ ಗೈರಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಮತ್ತೆ ಆಕ್ಟೀವ್ ಆಗಿದ್ದು, “ಕ್ರಿಕೆಟ್ ಸಂಭ್ರಮದ ಕಾಲ್ತುಳಿತ-ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಈ ಪತ್ರದಲ್ಲಿ ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ ಲಾಭ ಗಳಿಸುವ ಸ್ವಾರ್ಥದ ದುರಾಲೋಚನೆಯಿಂದ ನೀವು ಮತ್ತು ನಿಮ್ಮ ಸರ್ಕಾರ ತೆಗೆದುಕೊಂಡ ಬೇಜವಾಬ್ದಾರಿ ಹಾಗೂ ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ. ಜಮಾವಣೆಗೊಂಡಿದ್ದ ಸಾವಿರಾರು ಜನರು ನೋವು-ಸಂಕಷ್ಟವನ್ನು ಅನುಭವಿಸಿದ್ದಾರೆ.

ಕುಟುಂಬ ಬೆಳಗಬೇಕಿದ್ದ, ಉಜ್ವಲ ಭವಿಷ್ಯದ ಕನಸು ಕಂಡಿದ್ದ 11 ಯುವ ಜನರ ಸಾವು ಆ ಕುಟುಂಬಗಳ ನೆಮ್ಮದಿಯನ್ನು ಕಿತ್ತುಕೊಂಡು ಹೆತ್ತವರು ನಿತ್ಯ ಕಣ್ಣೀರಿಡುವಂತಾಗಿದೆ.

ಇಡೀ ಘಟನೆಯಿಂದಾಗಿ ಈ ಕ್ಷಣಕ್ಕೂ ಇಡೀ ರಾಜ್ಯ ಮಮ್ಮಲ ಮರುಗುತ್ತಿದೆ.
ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಘಟನೆ ಕರ್ನಾಟಕದ ಘನತೆಗೆ ಕಪ್ಪು ಮಸಿ ಬಳಿದಿದೆ, ನಮ್ಮ ರಾಜ್ಯ ಅಸುರಕ್ಷತೆಯ ತಾಣ ಎಂಬ ಸಂದೇಶ ರವಾನೆಯಾಗಿದೆ. ಇಷ್ಟಾಗಿಯೂ ಸರ್ಕಾರಕ್ಕೂ ಈ ಘಟನೆಗೂ ಏನೇನೂ ಸಂಬಂಧವಿಲ್ಲ, ಸರ್ಕಾರ ಈ ಘಟನೆಯ ಜವಾಬ್ದಾರಿಯನ್ನು ಹೊರಲಾಗದು ಎಂಬ ನಿಮ್ಮ ಹೇಳಿಕೆ ಪಲಾಯನವಾದ ಹಾಗೂ ನಿರ್ಲಜ್ಜತನದ ಹೊಣೆಗೇಡಿತನವನ್ನು ಪ್ರತಿಬಿಂಬಿಸುತ್ತಿದೆ.

ಅಧಿಕಾರಕ್ಕೆ ಅಂಟಿಕೊಳ್ಳುವ ಭಂಡತನದ ನಿಮ್ಮ ನಡೆ ಪರಂಪರೆಯ ಕರ್ನಾಟಕದ ನೈತಿಕ ರಾಜಕಾರಣವನ್ನು ಅವಮಾನಿಸುತ್ತಿದೆ.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ, ಆದ್ದರಿಂದ ಇದರಲ್ಲಿ ಸರ್ಕಾರದ ಯಾವ ತಪ್ಪೂ ಇಲ್ಲ, ದುರ್ಘಟನೆ ನಡೆದಿರುವುದು ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ ಎಂದು ಹೇಳಿಕೆ ನೀಡಿದ್ದೀರಿ.

ಸುದೀರ್ಘ ರಾಜಕಾರಣ ಹಾಗೂ ಅಧಿಕಾರದ ಅನುಭವ ಹೊಂದಿರುವ ನಿಮ್ಮ ಬಾಯಿಂದ ಹೊರಟಿರುವ ಇಂಥ ಮಾತುಗಳಿಂದಾಗಿ ನಿಮ್ಮ ಪ್ರಬುದ್ಧತೆಯನ್ನು ನಾವು ಶಂಕಿಸುವಂತಾಗಿದೆ.

ನಿಮ್ಮ ಹೇಳಿಕೆಯಿಂದಾಗಿ ನೀವು ಇಡೀ ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧಕ್ಕೆ ಮಾತ್ರ ಮುಖ್ಯಮಂತ್ರಿಯೋ ಎಂಬ ಪ್ರಶ್ನೆ ಕಾಲ್ತುಳಿತದಲ್ಲಿ ನೊಂದವರು ಕೇಳುತ್ತಿದ್ದಾರೆ.

ಪೊಲೀಸರ ರಕ್ಷಣೆ ನಿಮಗೆ, ನಿಮ್ಮ ಮಂತ್ರಿ ಮಂಡಲಕ್ಕೆ, ನಿಮ್ಮ ಕುಟುಂಬಕ್ಕೆ, ನಿಮ್ಮ ಅಧಿಕಾರಿಗಳಿಗೆ ಮಾತ್ರ ಹೊರತೂ ಸ್ಟೇಡಿಯಂ ಬಳಿಯ ದುರಂತದಲ್ಲಿ ಸಾವು-ನೋವು ಅನುಭವಿಸಿದ ಜನಸಾಮಾನ್ಯರಿಗಲ್ಲ ಎಂಬುದು ನಿಮ್ಮ ಮಾತಿನ ಧಾಟಿಯಲ್ಲಿ ವ್ಯಕ್ತವಾಗುತ್ತಿದೆ.

ಕೂಗಳತೆಯ ದೂರದಲ್ಲಿ ಈ ದುರಂತ ಘಟನೆ ನಡೆದರೂ ಎರಡು ಗಂಟೆಯ ಅಂತರದವರೆಗೂ (3.50 ರಿಂದ 5.45) ತಮಗೆ ದುರಂತದ ಕುರಿತು ಮಾಹಿತಿ ಸಿಗಲಿಲ್ಲ ಎಂಬ ನಿಮ್ಮ ಹೇಳಿಕೆ ಗಮನಿಸಿದರೆ ಆಡಳಿತ ವ್ಯವಸ್ಥೆ ನಿಮ್ಮ ಕೈತಪ್ಪಿ ದಿಕ್ಕೆಟ್ಟು ಹೋಗಿದೆ ಎಂಬುದು ವೇದ್ಯವಾಗುತ್ತದೆ. ಇಂತಹ ದುರ್ಬಲ ಸಮರ್ಥನೆಯ ಮೂಲಕ ನೀವು ಜವಾಬ್ದಾರಿಯಿಂದ ನುಣುಚಿಕೊಳ್ಳಲಾಗದು.

ಪೋಲಿಸ್ ಅಧಿಕಾರಿಗಳ ಮುನ್ನೆಚ್ಚರಿಕೆಯ ಸ್ಪಷ್ಟ ಸೂಚನೆಯ ಪತ್ರವನ್ನು ಕಣ್ಣೆತ್ತಿಯೂ ನೋಡದೇ ಪಕ್ಕಕ್ಕೆ ಸರಿಸಿದ ನಿಮ್ಮ ಇಡೀ ಅಧಿಕಾರ ವ್ಯವಸ್ಥೆ ಕ್ರಿಕೆಟಿಗರ ಸನ್ಮಾನ ಸಮಾರಂಭಕ್ಕೆ ಹರಿದು ಬರುವ ಜನಸಾಗರದ ಮೆಚ್ಚುಗೆಯನ್ನು ಪಡೆಯಬೇಕೆಂಬ ರಾಜಕೀಯ ಉನ್ಮಾದದಲ್ಲಿ ತೇಲಿಹೋಗಿತ್ತು.

ಇದರ ಪರಿಣಾಮವಾಗಿ ಯೋಜಿತವಲ್ಲದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಉಂಟಾಗಬಹುದಾದ ಅವಘಡಗಳನ್ನು ಪರಾಮರ್ಶಿಸದೇ, ಏಕಪಕ್ಷೀಯವಾಗಿ ಸರ್ವಾಧಿಕಾರಿ ಆದೇಶದಿoದಾಗಿ ಅಧಿಕಾರಿಗಳು ನಿಸ್ಸಹಾಯಕರಾಗಿ ಅದನ್ನು ಪಾಲಿಸುವ ಅನಿವಾರ್ಯತೆಗೆ ಸಿಲುಕಿದ್ದು ಅಸಲೀ ಸತ್ಯ ಎಂಬುದು ಇಡೀ ರಾಜ್ಯದ ಜನತೆಗೇ ತಿಳಿದಿದೆ.

“ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು” ಎಂಬಂತೆ ಬೆಂಗಳೂರು ಪೋಲಿಸ್ ಆಯುಕ್ತರೂ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತ್ತುಗೊಳಿಸಿ, ಜನರ ಆಕ್ರೋಶವನ್ನು ತಣಿಸಬಹುದು ಎಂಬ ದುರಾಲೋಚನೆಯಿಂದ ಅವರನ್ನು ಬಲಿಪಶು ಮಾಡಿದಿರಿ.

ನೀವು, ನಿಮ್ಮ ಉಪ-ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳ ಬೇಜವಾಬ್ದಾರಿತನದಿಂದಾಗಿ ಹಾಗೂ ನಿಮ್ಮ ಸುತ್ತಲಿನ ಭಟ್ಟಂಗಿಗಳ ಸಲಹೆಯನ್ನು ಅನುಸರಿಸಲಾಗಿ ಇಂತಹ ಘೋರ ಘಟನೆ ಸಂಭವಿಸಿತು ಎಂಬುದು ʼಅಂಗೈ ಹುಣ್ಣಿನಷ್ಟೇ ʼನಿಖರವಾಗಿದೆ.

ಇಡೀ ಘಟನೆಯ ಕುರಿತು ಈವರೆವಿಗೂ ನಿಮ್ಮ ಬಾಯಿಂದ ಕನಿಷ್ಟ ಪಶ್ಚಾತಾಪದ ಮಾತೂ ಹೊರಬಂದಿಲ್ಲ. ಅನಿವಾರ್ಯವೆಂಬಂತೆ ಜೀವ ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ಘೋಷಿಸಿರುವುದನ್ನೇ ಬಹುದೊಡ್ಡ ಸ್ಪಂದನೆ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದೀರಿ.

ನಿಮ್ಮ ಪರಿಹಾರಗಳು ಅಮೂಲ್ಯ ಜೀವಗಳನ್ನು ಆ ಕುಟುಂಬಗಳಿಗೆ ಮರಳಿಸಲಾಗದು, ಆದರೆ ನ್ಯಾಯವಲ್ಲದ ಸಾವುಗಳಿಗೆ ಕನಿಷ್ಟ ನ್ಯಾಯ ಸಿಗಬೇಕೆಂದರೆ ಹೊಣೆಗೇಡಿತನದ ನಿರ್ಧಾರ ಕೈಗೊಂಡ ಉನ್ನತ ಸ್ಥಾನದಲ್ಲಿರುವ ನೀವು ನೈತಿಕ ಜವಾಬ್ದಾರಿಯನ್ನು ಹೊರಲೇಬೇಕು, ಇಲ್ಲವಾದರೆ ಇತಿಹಾಸ ಎಂದೂ ನಿಮ್ಮನ್ನು ಕ್ಷಮಿಸಲಾರದು.

ಘನ ಉಚ್ಚ ನ್ಯಾಯಾಲಯ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. ನಿಮ್ಮ ವಿವೇಚನೆಯಿಂದ ನಿಯೋಜಿಸಲ್ಪಟ್ಟ ನಿವೃತ್ತ ನ್ಯಾಯಮೂರ್ತಿಗಳ ಮೂಲಕ ನ್ಯಾಯಾಂಗ ತನಿಖೆಗೂ ಆದೇಶಿಸಿದ್ದೀರಿ.

ನಿಮ್ಮದೇ ಮುಷ್ಠಿಯಲ್ಲಿರುವ ಅಧಿಕಾರ ವ್ಯವಸ್ಥೆಯಿಂದ ತನಿಖೆ ನಡೆಸುವ ಕಣ್ಣೊರೆಸುವ ತಂತ್ರವನ್ನು ಅನುಸರಿಸುತ್ತಿದ್ದೀರಿ. ಇದರಲ್ಲಿ ಘನ ಉಚ್ಚನ್ಯಾಯಾಲಯದ ವಿಚಾರಣೆಯೊಂದನ್ನು ಹೊರತುಪಡಿಸಿ ಇನ್ಯಾವುದೇ ತನಿಖೆಗಳಿಂದಲೂ ನ್ಯಾಯ ಸಿಗುತ್ತದೆ, ತಪ್ಪಿತಸ್ಥರ ತಲೆದಂಡವಾಗುತ್ತದೆ ಎಂಬ ನಂಬಿಕೆ ರಾಜ್ಯದ ಜನತೆಗೆ ಉಳಿದಿಲ್ಲ.

ಏಕೆಂದರೆ ನೀವು ಅಧಿಕಾರದಲ್ಲಿ ಉಳಿದುಕೊಳ್ಳಲು ಇಡೀ ಪೋಲಿಸ್ ವ್ಯವಸ್ಥೆಯ ಆತ್ಮಸ್ಥೈರ್ಯವನ್ನೇ ಕುಗ್ಗುವಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದೀರಿ.

ಸಾಮಾನ್ಯ ಪೇದೆಯಿಂದ ಹಿಡಿದು ಅಧಿಕಾರಿಗಳವರೆಗಿನ ಇಡೀ ಪೊಲೀಸ್ ವ್ಯವಸ್ಥೆ ನಿಮ್ಮ ನಿರ್ಧಾರಗಳಿಂದ ಈಗಾಗಲೇ ಘಾಸಿಗೊಂಡಿದೆ. ಈಗಾಗಲೇ ಹಳಿ ತಪ್ಪಿರುವ ಕಾನೂನು ಸುವ್ಯವಸ್ಥೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಸ್ತವ್ಯಸ್ತಗೊಂಡರೆ ಅದರಲ್ಲಿ ಆಶ್ಚರ್ಯವೇನೂ ಇಲ್ಲ.

ಕರ್ನಾಟಕದ ಇತಿಹಾಸದಲ್ಲಿ ಜೂನ್ 4 ರಂದು ನಡೆದ ಕಾಲ್ತುಳಿತದ ಘೋರ ದುರಂತದ ಅಧ್ಯಾಯದಲ್ಲಿ ಕಳಂಕಿತ ಸ್ಥಾನದಲ್ಲಿರುವ ನೀವು, ಉಪ-ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಹಾಗೂ ಗೃಹಮಂತ್ರಿ ಡಾ.ಜಿ. ಪರಮೇಶ್ವರ್ ರವರು ನಿಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುವ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲು ಇನ್ನೂ ಕಾಲ ಮಿಂಚಿಲ್ಲ ಎಂಬುದನ್ನು ನಿಮಗೆ ಮನವರಿಕೆ ಮಾಡಿಕೊಡಲು ಬಯಸುತ್ತೇನೆ.

ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಆರೋಪಗಳು ಬಂದಾಗ ನೈತಿಕ ಜವಾಬ್ದಾರಿ ಹೊತ್ತು ರಾಜಿ ನಾಮೆ ನೀಡಿದ ಪ್ರಸಂಗಗಳು ಪರಂಪರೆಯ ರಾಜಕಾರಣದ ಘನತೆಯ ಬಿಂದುಗಳಾಗಿವೆ.

ಗೌರವಾನ್ವಿತ ಮುಖ್ಯಮಂತ್ರಿಗಳಾಗಿದ್ದ ಮಾನ್ಯರುಗಳಾದ ಎಸ್. ನಿಜಲಿಂಗಪ್ಪನವರು, ವೀರೇಂದ್ರ ಪಾಟೀಲರು, ಡಿ.ದೇವರಾಜ ಅರಸರು, ರಾಮಕೃಷ್ಣ ಹೆಗಡೆಯವರು, ಎಸ್ ಆರ್ ಬೊಮ್ಮಾಯಿಯವರು, ಹೆಚ್. ಮಡಿ ದೇವೇಗೌಡರು, ಜೆ.ಹೆಚ್ ಪಟೇಲ್, ಎಸ್.ಎಂ ಕೃಷ್ಣರವರು ಹಾಗೂ ಬಿ.ಎಸ್ ಯಡಿಯೂರಪ್ಪನವರು ಸೇರಿದಂತೆ ಇತರರು ಮುಖ್ಯಮಂತ್ರಿಗಳ ಸ್ಥಾನದಲ್ಲಿ ಕುಳಿತು ಕರ್ನಾಟಕದ ಜನರ ಹೃದಯಗಳಲ್ಲಿ ಶಾಶ್ವತ ಗೌರವ-ಅಭಿಮಾನಗಳನ್ನು ಉಳಿಸಿಕೊಂಡಿದ್ದಾರೆ.

ಈ ಪರಂಪರೆ ಮುಂದುವರೆಯಬೇಕೆನ್ನುವುದು ಕರ್ನಾಟಕದ ಜನತೆಯ ಅಭಿಪ್ರಾಯವಾಗಿದೆ. ಇದಕ್ಕೆ ಅಪಚಾರವಾಗದಂತೆ ತಾವು ನಡೆದುಕೊಳ್ಳಬೇಕೆನ್ನುವುದು ನಮ್ಮ ಒತ್ತಾಯವಾಗಿದೆ ಎಂದು ಬಿ.ವೈ.ವಿಜಯೇಂದ್ರ ಬರೆದಿದ್ದಾರೆ‌.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]