ನವದೆಹಲಿ: ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹೋಗುತ್ತಿದ್ದ AI171 ವಿಮಾನ ಇಂದು ಟೇಕ್ ಆಫ್ ಆದ ನಂತರ ಅಪಘಾತಕ್ಕೀಡಾಗಿದೆ.
ಅಹಮದಾಬಾದ್‌ನಿಂದ ಮಧ್ಯಾಹ್ನ 3.38 ಕ್ಕೆ ಹೊರಟ ವಿಮಾನವು ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಈ ಪೈಕಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಇದ್ದರು ಎನ್ನಲಾಗಿದೆ.
The plane crashed directly on the BJ Medical College UG hostel mess in Meghani Nagar.
— News18 (@CNNnews18) June 12, 2025
Many MBBS students have lost their lives. This is one of the most heartbreaking tragedies the city has seen. 💔#Ahmedabad #BJMedicalCollege #PlaneCrash #AhmedabadPlanecrash pic.twitter.com/PJuoIcHSVk
ವಿಮಾನವು ಮೇಘನಿ ನಗರದ ಬಿಜೆ ವೈದ್ಯಕೀಯ ಕಾಲೇಜು ಯುಜಿ ಹಾಸ್ಟೆಲ್ ಕಟ್ಟಡದ ಮೇಲೆ ನೇರವಾಗಿ ಅಪ್ಪಳಿಸಿದೆ.
ಈ ಘಟನೆಯಲ್ಲಿ ಅನೇಕ ಎಂಬಿಬಿಎಸ್ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ನಗರ ಕಂಡ ಅತ್ಯಂತ ಹೃದಯವಿದ್ರಾವಕ ದುರಂತಗಳಲ್ಲಿ ಇದು ಒಂದು ಎನ್ನಲಾಗುತ್ತಿದೆ.
ಮೋದಿ, ಶಾ ರಾಜೀನಾಮೆಗೆ ಆಗ್ರಹ
ಈ ಘಟನೆ ಬೆನ್ನಲ್ಲೇ ರಾಜ್ಯ ಸಭೆಯ ಮಾಜಿ ಸದಸ್ಯ, ಹಿರಿಯ ನ್ಯಾಯವಾದಿ ಸುಬ್ರಹ್ಮಣ್ಯನ್ ಸ್ವಾಮಿ ಅವರು ನೈತಿಕತೆ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.
When a train derailed in 1950s, Lal Bahadur Shashtri resigned. On the same morality I demand PM Modi, HM Amit Shah and Civil Aviation Naidu resign so that a free& fair inquiry is held. All that Modi and associates have been doing so far is galavanting which must stop must stop.
— Subramanian Swamy (@Swamy39) June 12, 2025
ಈ ಕುರಿತು ಟ್ವಿಟ್ ಮಾಡಿರುವ ಅವರು, 1950 ರ ದಶಕದಲ್ಲಿ ರೈಲು ಹಳಿ ತಪ್ಪಿದಾಗ ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ನೀಡಿದರು. ಅದೇ ನೈತಿಕತೆಯ ಆಧಾರದ ಮೇಲೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ನಾಗರಿಕ ವಿಮಾನಯಾನ ನಾಯ್ಡು ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಅಲ್ಲದೆ ಈ ಮೂವರ ರಾಜೀನಾಮೆಯಿಂದ ಮುಕ್ತ ಮತ್ತು ನ್ಯಾಯಯುತ ತನಿಖೆ ನಡೆಯಲಿದೆ. ಮೋದಿ ಮತ್ತು ಸಹಚರರು ಇಲ್ಲಿಯವರೆಗೆ ತಿರುಗಾಡಿದ್ದಾರೆ, ಕೂಡಲೇ ಅದನ್ನು ನಿಲ್ಲಿಸಬೇಕು ಎಂದಿದ್ದಾರೆ.