ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್ವಿಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಪತಗೊಂಡಿದೆ (Air India plane crash).
AI-171 ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ B787 ವಿಮಾನ VT-ANB, ಅಹಮದಾಬಾದ್‌ನಿಂದ ಟೇಕ್ ಆಫ್ ಆದ ತಕ್ಷಣ ಪತನಗೊಂಡಿದೆ.
Reports of an Air India 787 Dreamliner has crashed on takeoff…
— Flight Emergency (@FlightEmergency) June 12, 2025
More info to follow @AirNavRadar
pic.twitter.com/lMiKKhUqR0
ವಿಮಾನದಲ್ಲಿ 2 ಪೈಲಟ್‌ಗಳು ಮತ್ತು 10 ಕ್ಯಾಬಿನ್ ಸಿಬ್ಬಂದಿ ಸೇರಿದಂತೆ 242 ಜನರಿದ್ದರು.
ಪ್ರಧಾನಿ ಮೋದಿ ಅವರು ಗೃಹ ಸಚಿವ ಅಮಿತ್ ಶಾ ಮತ್ತು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿದರು.
Air India London flight crashes at Ahmedabad Airport.
— Rage Blake (@RageOnDev) June 12, 2025
My prayers with all the passengers 🙏🏻#airindia #ahemdabad #flightcrash pic.twitter.com/3Jm6jpyjb5
ಕೂಡಲೇ ಅಹಮದಾಬಾದ್‌ಗೆ ತೆರಳಿ ವಿಮಾನ ಅಪಘಾತದ ನಂತರ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ವಿಸ್ತರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆಂದು ವರದಿಯಾಗಿದೆ. (ಹೆಚ್ವಿನ ಮಾಹಿತಿ ನಿರೀಕ್ಷಿಸಲಾಗಿದೆ)
ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದು, ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ.
ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನಗಳಿಗೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದಿದ್ದಾರೆ.