ವಿಮಾನ ದುರಂತ ಆಘಾತ ತಂದಿದೆ: ಗುಜರಾತಿ, ತೆಲುಗು, ಕನ್ನಡಿಗರು ಎಂಬುದು ಬೇಡ.. ಎಲ್ಲರೂ ಭಾರತೀಯರು; ಡಿಕೆ ಶಿವಕುಮಾರ್

Plane crash a shock: DK Shivakumar

ಬೆಂಗಳೂರು: “ನಮಗೆ ರಾಜಕೀಯ ಬಣ್ಣ ಬೇಡ. ಸಾಮಾಜಿಕ ನ್ಯಾಯ ಬೇಕು. ಈ ಕಾರಣಕ್ಕೆ ನಾವು ಮತ್ತೊಮ್ಮೆ ಜಾತಿ ಜನಗಣತಿ ಮಾಡಲು ತೀರ್ಮಾನ ಮಾಡಿದ್ದೇವೆ. ಈ ಹಿಂದಿನ ವರದಿ ಬಗ್ಗೆ ಟೀಕೆ ಮಾಡಿದ್ದ ವಿರೋಧ ಪಕ್ಷದವರು ಈಗ ಉಲ್ಟಾ ಮಾತಾಡುತ್ತಿದ್ದಾರೆ. ಅದರ ಬದಲು ಹಳೆಯದನ್ನೇ ಒಪ್ಪಿಕೊಳ್ಳುವಂತೆ ಆಗ್ರಹಿಸಲಿ” ಎಂದು ಡಿಸಿಎಂ ಡಿ.ಲಕೆ ಶಿವಕುಮಾರ್ (DK Shivakumar) ಅವರು ಹೇಳಿದರು.

ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

ಜಾತಿಗಣತಿ ವಿಚಾರವಾಗಿ ಮರುಸಮೀಕ್ಷೆಗೆ ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧ ಪಕ್ಷಗಳು ಟೀಕಿಸುತ್ತಿರುವ ಬಗ್ಗೆ ಕೇಳಿದಾಗ, ಕುಮಾರಸ್ವಾಮಿ, ವಿಜಯೇಂದ್ರ, ಅಶೋಕ್ ಅವರು ಪುನಃ ಮಾಧ್ಯಮಗೋಷ್ಠಿ ಮಾಡಿ ಹಳೆಯ ವರದಿಯನ್ನೇ ಸ್ವೀಕರಿಸಿ ಎಂದು ಈಗ ಹೇಳಲಿ.

ವಿರೋಧ ಪಕ್ಷದವರು ಈಗ ಏನೇನೋ ಮಾತನಾಡುತ್ತಿದ್ದಾರೆ. ಇದಕ್ಕೆ ನಿಧಾನಕ್ಕೆ ಉತ್ತರ ನೀಡೋಣ. ಯಾರು, ಯಾರು ಏನೇನು ಹೇಳುತ್ತಿದ್ದರು, ಅಶೋಕ್ ಏನು ಹೇಳಿದ್ದಾರೆ ಎಂಬುದನ್ನು ಮಾಧ್ಯಮಗಳು ಮತ್ತೆ ಪ್ರಸಾರ ಮಾಡಿಲಿ. ವಿರೋಧ ಪಕ್ಷದವರು ಹಿಂದೆ ಒಂದು, ಮುಂದೆ ಒಂದು ಮಾತನಾಡಿ ರಾಜಕೀಯವಾಗಿ ಬಣ್ಣ ಕಟ್ಟುತ್ತಿದ್ದಾರೆ ಎಂದರು.

ಯಾರು ಏನು ಬೇಕಾದರೂ ಹೇಳಲಿ. ಜನರು, ಶಾಸಕರುಗಳ ಭಾವನೆ, ಅಭಿಪ್ರಾಯ ಅರಿತು ಕಾನೂನಾತ್ಮಕವಾಗಿ ಜಾತಿ ಗಣತಿ ಮರುಸಮೀಕ್ಷೆಗೆ ಒಪ್ಪಿಗೆ ಕೊಟ್ಟಿದ್ದೇವೆ. ಸೆಕ್ಷನ್ 11 ರ ಪ್ರಕಾರ ಜಾತಿ ಗಣತಿಗೆ 10 ವರ್ಷವಾಗಿದೆ ಎಂದು ಬೇಕಾದಷ್ಟು ಜನ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರಬಹುದು.

11.04.2015 ಅಲ್ಲಿ ಜಾತಿಗಣತಿ ಪ್ರಾರಂಭವಾಗಿ 30.05.2015 ರಲ್ಲಿ ಮುಗಿದಿತ್ತು. ಈ ವರ್ಷ ಫೆ. 29 ರಂದು ಜಾತಿಗಣತಿ ವರದಿ ಸಲ್ಲಿಕೆಯಾಗಿತ್ತು. ನಂತರ ಕ್ಯಾಬಿನೆಟ್ ನಲ್ಲಿ 5-6 ಬಾರಿ ಇದರ ಬಗ್ಗೆ ಚರ್ಚೆ ಮಾಡಲಾಗಿತ್ತು. ವಿರೋಧ ಪಕ್ಷದವರು ಸಹ ಮರು ಗಣತಿಗೆ ಒತ್ತಾಯ ಮಾಡುತ್ತಿದ್ದರು. ಈ ಮದ್ಯೆ ಹೈಕಮಾಂಡ್ ಅವರು ನಮ್ಮನ್ನು ಕರೆಸಿ ಈ ಬಗ್ಗೆ ಒಂದಷ್ಟು ಮಾರ್ಗದರ್ಶನ ನೀಡಿದ್ದಾರೆ ಎಂದರು.

ಲಿಂಗಾಯತ ಮತ್ತು ಒಕ್ಕಲಿಗರಿಂದ ಈ ಹಿಂದೆ ವಿರೋಧ ವ್ಯಕ್ತವಾದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಸಮಾಜದ ಎಲ್ಲರನ್ನು ಒಳಗೊಂಡ ಸಮೀಕ್ಷೆ ಇದಾಗಲಿದೆ. ಹೊರನಾಡು ಕನ್ನಡಿಗರಿಗೆ ಆನ್ ಲೈನ್ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ವ್ಯವಸ್ಥೆ ಕಲ್ಪಿಸಲಾಗುವುದು” ಎಂದು ಹೇಳಿದರು.

ಹೈಕಮಾಂಡ್ ತೀರ್ಮಾನದಂತೆ ಮರು ಸಮೀಕ್ಷೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಹೈಕಮಾಂಡ್ ನಮಗೆ ಮಾರ್ಗದರ್ಶನ ಮಾತ್ರ ನೀಡಿದೆ. 10 ವರ್ಷಗಳು ಆಗಿರುವ ಕಾರಣಕ್ಕೆ ಸಮಾಜದ ಎಲ್ಲರನ್ನು ಒಳಗೊಳ್ಳುವುದು ನಮ್ಮ ಉದ್ದೇಶ. ಇದು ಕಾಂಗ್ರೆಸ್ ಪಕ್ಷದ ಮೂಲ ಆಶಯ” ಎಂದರು.

ವಿಮಾನ ದುರಂತ ಆಘಾತ ತಂದಿದೆ

ಅಹಮದಬಾದ್ ವಿಮಾನ ದುರಂತದ ಬಗ್ಗೆ ಕೇಳಿದಾಗ, “ಈ ಘಟನೆಯ ಬಗ್ಗೆ ಕೇಳಿ ನಾನು ಆಘಾತಕ್ಕೆ ಒಳಗಾಗಿದ್ದೇನೆ. ಮೃತಪಟ್ಟವರ ಕುಟುಂಬದವರಿಗೆ ಸಾಂತ್ವನ ಹೇಳಲು ಬಯಸುತ್ತೇನೆ. ಜಗತ್ತಿಗೆ ಹಾಗೂ ದೇಶಕ್ಕೆ ಇದು ಆಘಾತಕಾರಿ ಸುದ್ದಿ. ಹೆಚ್ಚಿನ ಸಾವು ಆಗದಿರಲಿ ಎಂದು ಆ ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಕರ್ನಾಟಕದ ಸರ್ಕಾರದ ಹಾಗೂ ಪಕ್ಷದ ಸಹಾನುಭೂತಿ ಹಾಗೂ ಪ್ರಾರ್ಥನೆ ಇದ್ದೇ ಇರುತ್ತದೆ. ದೇಶದಲ್ಲಿ ವಿಮಾನಯಾನ ಕ್ಷೇತ್ರ ಅಭಿವೃದ್ಧಿ ಕಾಣುತ್ತಿತ್ತು. ಆದರೆ ಈ ದುರಂತ ನಡೆಯಬಾರದಿತ್ತು” ಎಂದು ವಿಷಾದ ವ್ಯಕ್ತಪಡಿಸಿದರು.

ವಿಮಾನದಲ್ಲಿ ಕನ್ನಡಿಗರು ಇದ್ದರು ಎಂದು ಕೇಳಿದಾಗ, “ಕನ್ನಡಿಗರು ಜೊತೆಗೆ ಅವರು ಭಾರತೀಯರು. ಇಲ್ಲಿ ಮಾನವೀಯತೆ ಮುಖ್ಯ. ತಮಿಳು, ಗುಜರಾತಿ, ಕನ್ನಡಿಗರು ಎಂಬುದು ಬೇಡ. ಅವರೆಲ್ಲರು ನಮ್ಮ ದೇಶದವರು ಅವರ ಉಳಿವಿಗೆ ನಾವು ಪ್ರಾರ್ಥನೆ ಮಾಡೋಣ” ಎಂದರು.

ರಾಜಕೀಯ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ

[ccc_my_favorite_select_button post_id="121740"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]