ಗುಡ್ಮಾರ್ನಿಂಗ್ ನ್ಯೂಸ್: ಶಾಲಾ, ಕಾಲೇಜು, ಸಾರ್ವಜನಿಕರ ಚಿತ್ರಕಲಾ ಸ್ಪರ್ಧೆಗೆ ₹25 ಕೋಟಿ ಮೀಸಲು

₹25 crore reserved for art competitions for schools, colleges and the public

ಬೆಂಗಳೂರು: “ಶಾಲಾ,‌ ಕಾಲೇಜು ಹಾಗೂ ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆಯನ್ನು ವರ್ಷಕ್ಕೆ ಮೂರು ದಿನ ಸರ್ಕಾರದ ವತಿಯಿಂದ ಏರ್ಪಡಿಸಲಾಗುವುದು. ಇದಕ್ಕಾಗಿ ₹25 ಕೋಟಿ ಮೀಸಲಿಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಹೇಳಿದರು.

ಬ್ರಿಗೇಡ್ ಫೌಂಡೇಶನ್ ನಿಂದ ನವೀಕರಣಗೊಂಡ ವೆಂಕಟಪ್ಪ ಆರ್ಟ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು.

“ಡಿಸೆಂಬರ್ ಕೊನೆ ವಾರದಲ್ಲಿ ಹೆಚ್ಚು ರಜೆಗಳು ಇರುತ್ತವೆ. ಇದರ ಬಗ್ಗೆ ರೂಪುರೇಷೆಗಳನ್ನು ಒಂದು ವಾರದಲ್ಲಿ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಹೇಳಿದರು.

“ಯುವ ಪೀಳಿಗೆಗೆ ನಮ್ಮ ಇತಿಹಾಸ ತಿಳಿಯಬೇಕು ಎಂದು ವಿಧಾನಸೌಧ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಚಿತ್ರಸಂತೆ, ಪುಸ್ತಕ ಮೇಳೆ ಆಯೋಜಿಸಲಾಗಿದೆ. ಈ ಮೂಲಕ ಬೆಂಗಳೂರಿಗೆ ಹೊಸ ರೀತಿಯ ರೂಪ ನೀಡಲು ಪ್ರಯತ್ನ ಮಾಡಲಾಗುತ್ತಿದೆ” ಎಂದರು.

“ಬೆಂಗಳೂರಿನಲ್ಲಿ ಶಾಲೆಗೆ ಒಟ್ಟಿಗೆ ಕರೆದರೆ 30- 40 ಸಾವಿರ ಜನರು ಬರುತ್ತಾರೆ. ಅದಕ್ಕಾಗಿ ಶಾಲೆಗಳ ನಡುವೆ ಮೊದಲು ಸ್ಪರ್ಧೆ ನಡೆಸಿ ನಂತರ ಅಂತಿಮ ಸ್ಪರ್ಧೆ ಏರ್ಪಡಿಸುವ ಬಗ್ಗೆ ಆಲೋಚನೆ ಮಾಡಲಾಗುವುದು. ಇದನ್ನು ಹೇಗೆ ರೂಪಿಸಬೇಕು ಎಂದು ಕಲಾವಿದರು, ‌ಕಲಾಸಕ್ತರು ಸಲಹೆ ನೀಡಬೇಕು” ಎಂದರು.

“ನಮ್ಮ ಪರಂಪರೆ ನಮ್ಮ ಆಸ್ತಿ ಮುಂದಿನ ಪೀಳಿಗೆ ಇದನ್ನು ಉಳಿಸಿಕೊಂಡು ಹೋಗಬೇಕು. ಕಲೆ ಕಲೆಗಾಗಿ ಅಲ್ಲ ಕಲೆ ಸಮಾಜಕ್ಕಾಗಿ ಎನ್ನುವುದನ್ನು ನಾವು ಮರೆಯಬಾರದು. ವೆಂಕಟಪ್ಪ ಆರ್ಟ್ ಗ್ಯಾಲರಿ ಸರ್ಕಾರದ ಆಸ್ತಿಯಲ್ಲ, ಸಮಾಜದ ಆಸ್ತಿ” ಎಂದರು.

“ಕಲೆ ಪ್ರಪಂಚವನ್ನು ಉಳಿಸುತ್ತದೆ. ನಮ್ಮ ಕಲ್ಪನೆ ಜ್ಞಾನಕ್ಕಿಂತ ದೊಡ್ಡದು ಎಂದು ಹಿರಿಯರು ಹೇಳಿದ್ದಾರೆ. ಕಲೆಯನ್ನು ಕಣ್ಣಲ್ಲಿ ನೋಡಿದಾಗ ಮಾತ್ರ ಅನುಭವಿಸಲು ಸಾಧ್ಯ. ನಮ್ಮ ಕಲೆ ನಮ್ಮ ಆಸ್ತಿ. ಇದು ಉಳಿಯಬೇಕು ಎಂದರೆ ಪ್ರವಾಸೋದ್ಯಮ ಬೆಳೆಯಬೇಕು” ಎಂದರು.

“ನಾನು ಶಾಲಾ ದಿನಗಳಲ್ಲಿ ಬೇಲೂರು,‌ ಹಳೇಬೀಡು ಹಾಗೂ ಹೈದರಾಬಾದ್ ನ ಸಾಲಾರ್ ಜಂಗ್ ಮ್ಯೂಸಿಯಂಗೆ ಹೋಗಿದ್ದೆ. ಆಗ ನಮ್ಮ ಅಧ್ಯಾಪಕರಿಗೆ ನಮ್ಮಲ್ಲಿ ಈ ರೀತಿಯ ಮ್ಯೂಸಿಯಂ ಇಲ್ಲವೇ ಎಂದು ಕೇಳಿದ್ದೆ. ಇದಾದ ನಂತರ ನನ್ನನ್ನು ಮೂರು ತಿಂಗಳ ನಂತರ ಇಲ್ಲಿಗೆ ಕರೆದುಕೊಂಡು ಬಂದಿದ್ದರು” ಎಂದು ನೆನಪುಗಳನ್ನು ಮೆಲುಕು ಹಾಕಿದರು.

“ಬೆಂಗಳೂರಿನ ಟ್ರಾಫಿಕ್‌ ತೊಂದರೆಗಳನ್ನು ತಪ್ಪಿಸಲು ಪ್ರಯತ್ನ ಮಾಡುತ್ತಿದ್ದೇವೆ. ಒಂದು ದಿನಗಳಲ್ಲಿ ಇದಾಗುವ ಕೆಲಸವಲ್ಲ. ಆದರೆ ಪ್ರಯತ್ನ ‌ಬಿಡಬಾರದು. ಟನಲ್ ರಸ್ತೆ, ಫ್ಲೈ ಓವರ್, ಮೆಟ್ರೋ ಸೇರಿದಂತೆ ಅನೇಕ ಯೋಜನೆಗಳಿಗೆ ರೂಪುರೇಷೆಗಳನ್ನು ರೂಪಿಸಲಾಗಿದೆ” ಎಂದು ಹೇಳಿದರು.

“ಪ್ರಣವ್ ಮುಖರ್ಜಿ ಅವರು ಹಾಗೂ ಮನಮೋಹನ್ ಸಿಂಗ್ ಅವರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕು. ಅವರ ಕಾರಣಕ್ಕೆ ಸಿಎಸ್ ಆರ್ ನಿಧಿಯನ್ನು ಇಂತಹ ಸಮಾಜಮುಖಿ ಕೆಲಸಗಳಿಗೆ ಬಳಸಿಕೊಳ್ಳಲು ಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ಮೂರು ವರ್ಷಗಳಲ್ಲಿ 1 ಲಕ್ಷ‌ ಕೋಟಿ ಯೋಜನೆ ರೂಪಿಸಲಾಗಿದೆ” ಎಂದರು.

“ಬ್ರಿಗೇಡ್ ಫೌಂಡೇಶನ್ ಅವರು ಇದೊಂದೆ ಕೆಲಸ ಮಾಡುತ್ತಿಲ್ಲ. ಬೆಂಗಳೂರಿಗೆ ಹೊಸ ವಿನ್ಯಾಸ ನೀಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸರ್ಕಾರ ಎಂಟತ್ತು ಕಟ್ಟಡಗಳನ್ನು ಕಟ್ಟಿರಬಹುದು. ಹೆಚ್ಚಿನ ಕಟ್ಟಡಗಳನ್ನು ಬ್ರಿಗೇಡ್, ಇರ್ಫಾನ್ ಅವರು,‌ ಶೋಭಾ, ಪ್ರೇಸ್ಟೀಜ್ ಸೇರಿದಂತೆ ಅನೇಕ ಸಂಸ್ಥೆಗಳು ನಿರ್ಮಾಣ‌ ಮಾಡಿವೆ. ಹೊಸ ರೂಪ ನೀಡಿವೆ” ಎಂದರು.

ರಾಜಕೀಯ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮುಂದಿನ ತಿಂಗಳ (ಮೇ) ಮೊದಲ ವಾರದಲ್ಲಿ ಜೆಡಿಎಸ್ (JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆಂದು ಜೆಡಿಎಸ್ ಹಿರಿಯ ಮುಖಂಡ ಎಸ್.ಎಂ. ಹರೀಶ್ ಗೌಡ (S.M.

[ccc_my_favorite_select_button post_id="120975"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]