AI171 ವಿಮಾನ ದುರಂತ; ಮಾಜಿ ಸಿಎಂ ರೂಪಾನಿ ದುರ್ಮರಣ.. ಮಹಿಳೆಯ ಸೆಲ್ಫಿ ವೈರಲ್

AI171 flight disaster; Former CM Rupani passed away

ಅಹ್ಮದಾಬಾದ್: ಗುಜರಾತ್ ರಾಜ್ಯದ ಮಾಜಿ ಮುಖ್ಯ ಮಂತ್ರಿ, ಬಿಜೆಪಿ ಹಿರಿಯ ನಾಯಕ ವಿಜಯ್ ರುಪಾನಿ (Vijay rupani) ಗುರುವಾರ ಮಧ್ಯಾಹ್ನ ವಿಮಾನ (AI171) ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.

ಅಹ್ಮದಾಬಾದ್‌ನಲ್ಲಿನ ಸರದಾರ್ ವಲ್ಲಭಬಾಯ್ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಏರ್ ಇಂಡಿಯ ವಿಮಾನ ಎಐ 171, ನಂತರದ ಕೆಲವೇ ನಿಮಿಷಗಳಲ್ಲಿ ನಾಗರಿಕ ಪ್ರದೇಶದಲ್ಲಿನ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದ ಮೇಲೆ ಪತನವಾಗಿದೆ. ಆ ವಿಮಾನದಲ್ಲಿಯೇ ಲಂಡನ್‌ಗೆ ಪ್ರಯಾಣಿ ಸುತ್ತಿದ್ದ ವಿಜಯ್ ರುಪಾನಿ, ಉಳಿದ 229 ಪ್ರಯಾಣಿಕರ ಜತೆಗೇ ದುರ್ಮರಣಕ್ಕೀಡಾದರು.

ವಿಡಿಯೊದಲ್ಲಿ ಮಾಜಿ ಸಿಎಂ

AI171 ವಿಮಾನ ದುರಂತ; ಮಾಜಿ ಸಿಎಂ ರೂಪಾನಿ ದುರ್ಮರಣ.. ಮಹಿಳೆಯ ಸೆಲ್ಫಿ ವೈರಲ್

ಅಪಘಾತಕ್ಕೀಡಾದ ಏರ್ ಇಂಡಿಯ ವಿಮಾನ ಎಐ 171ರಲ್ಲಿ ವಿಜಯ್ ರುಪಾನಿ ಹೆಸರು ಪ್ರಯಾಣಿಕರ ಪಟ್ಟಿಯಲ್ಲಿ ಹನ್ನೆರೆಡನೆಯದಾಗಿದೆ.

ವಿಮಾನದಲ್ಲಿ ಪ್ರಯಾಣಿಕರ ಮಧ್ಯೆ ವಿಜಯ್ ರುಪಾನಿ ಕುಳಿತಿರುವ ಕ್ಷಣದ ವಿಡಿಯೊ, ಫೋಟೊಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ವಿಜಯ್ ರುಪಾನಿ ಅವರ ಆಸನಕ್ಕಿಂತ 2 ಸಾಲು ಮುಂದಿನ ಆಸನದಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ತೆಗೆದಿರುವ ಸೆಲ್ಪಿ ಫೋಟೊ ಮತ್ತು ವಿಡಿಯೊದಲ್ಲಿ ವಿಜಯ್ ರುಪಾನಿ ಅವರೂ ಕಾಣಬರುತ್ತಿದ್ದಾರೆ.

ಬೋಯಿಂಗ್ 787 ಡ್ರಮ್‌ಲೈನರ್ ನಿರ್ವಹಣೆಯ, ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಚಲಾಯಿಸುತ್ತಿದ್ದ ಏರ್ ಇಂಡಿಯದ ಎಐ 171 ವಿಮಾನ ಗುರುವಾರ ಮಧ್ಯಾಹ್ನ 1.38ಕ್ಕೆ ಅಹಮದಾಬಾದ್‌ನಿಂದ ಹೊರಟ 5 ನಿಮಿಷಗಳಲ್ಲೇ ಮೇಘನಿ ನಗರದ ವಸತಿ ಪ್ರದೇಶದ ಮೇಲೆ ಪತನವಾಗಿ ಮೆಡಿಕಲ್ ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿ ಸ್ಪೋಟ ಗೊಂಡು ಉರಿದು ಭಸ್ಮವಾಗಿದೆ.

ಕೈವ್ ಕುಂದರ್ ವಿಮಾನದ ಸಹ- ಪೈಲಟ್ ಆಗಿದ್ದರು. ಇವರಿಬ್ಬರು ಪೈಲಟ್‌ಗಳೂ ಪರಿಚಾರಕರೂ ಸೇರಿ ದಂತೆ ಒಟ್ಟು 10 ಸಿಬ್ಬಂದಿವರ್ಗದವರು ಮತ್ತು 230 ವಯಸ್ಕ ಪ್ರಯಾ ಣಿಕರು, 2 ಶಿಶುಗಳು ಸೇರಿದಂತೆ ಒಟ್ಟು 242 ಮಂದಿ ವಿಮಾನದಲ್ಲಿದ್ದರು.

ಪ್ರಯಾಣಿಕರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ನಾಗರಿಕರು, ಒಬ್ಬ ಕೆನಡಾ ಪ್ರಜೆ ಮತ್ತು ಏಳು ಪೋರ್ಚುಗೀಸ್ ಪ್ರಜೆಗಳು ಇದ್ದರು.

ಅದೃಷ್ಟವಶಾತ್ ಘಟನೆಯಲ್ಲಿ ಓರ್ವ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ

[ccc_my_favorite_select_button post_id="121740"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]