ಇಂದಿನಿಂದ ಜೂ.15 ವರೆಗೆ ಬೆಂ.ಗ್ರಾ‌.ಜಿಲ್ಲಾ ಮಟ್ಟದ ಮಾವು ಮತ್ತು ಹಲಸು ಮಾರಾಟ ಮೇಳ

Bengaluru District Level Mango and Jackfruit Sale Fair from June 13 to 15

ಬೆಂ.ಗ್ರಾ.ಜಿಲ್ಲೆ: ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ-2025″ (Fruit Exhibition and Sales Fair-2025) ಕಾರ್ಯಕ್ರಮವನ್ನು ಜೂನ್ 13 ರಿಂದ 15 ರವರೆಗೆ ದೇವನಹಳ್ಳಿ ತಾಲ್ಲೂಕಿನ ಹೋಟೆಲ್ ನಂದಿ ಉಪಚಾರ ಮುಂಭಾಗ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾವು ಹಲಸು ಮೇಳ ಆಯೋಜನೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳನ್ನು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಕಲ್ಪಿಸಿಕೊಡುವ ದೃಷ್ಟಿಯಿಂದ ಹಾಗೂ ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳು ಸಿಗುವಂತೆ ಮಾಡಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ “ಮಾವು ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ-2025 ಅನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಮಾವು ಬೆಳೆಯನ್ನು 4966.79 ಹೆಕ್ಟೇರ್ ಪ್ರದೇಶದಲಿ ಬೆಳೆಯಲಾಗುತ್ತಿದ್ದು, ಪ್ರಮುಖವಾಗಿ ಬಾದಾಮಿ, ರಸಪುರಿ, ತೋತಾಪುರಿ, ಮಲಿಕಾ, ಸೇಂದೂರಾ ಮುಂತಾದ ತಳಿಗಳನ್ನು ಬೆಳೆಯಲಾಗುತ್ತಿದ್ದು ವಾರ್ಷಿಕ ಉತ್ಪಾದನೆ 20,000 ರಿಂದ 22,000 ಮೆಟ್ರಿಕ್ ಟನ್ ಗಳೆಂದು ಅಂದಾಜಿಸಲಾಗಿರುತ್ತದೆ. ಹಲಸು ಬೆಳೆಯನ್ನು 39.29 ಹೆಕ್ಟೇರ್ ಪ್ರದೇಶದಲಿ ಬೆಳೆಯುತ್ತಿದ್ದು, ವಾರ್ಷಿಕ ಉತ್ಪಾದನೆ 1500 ರಿಂದ 2000 ಮೆಟ್ರಿಕ್ ಟನ್ ನಮ್ಮ ಅಂದಾಜಿಸಲಾಗಿದೆ.

ರಾಜ್ಯದ ಮಾರುಕಟ್ಟೆಗಳಲ್ಲಿ ಬೆಲೆ ಕುಸಿದಿರುವುದು ಮಾವು ಮತ್ತು ಹಲಸು ಬೆಳೆಗಾರರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಈ ನಿಟ್ಟಿನಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆ ಹಣ್ಣುಗಳ ಮೇಳ ಆಯೋಜಿಸುವ ಮೂಲಕ ಬೆಳೆಗಾರರಿಗೆ ಬೆಂಬಲ ನೀಡಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಯಲ್ಲಿ ಹಣ್ಣುಗಳನ್ನು ಖರೀದಿ ಮಾಡಬಹುದಾಗಿದೆ. ಬೇರೆ ಜಿಲ್ಲೆಯ ಮಾರಾಟಗಾರರು ಭಾಗವಹಿಸಸಬುದಾಗಿದ್ದು ಮಾರಟಗಾರರಿಗೆ ಮಳಿಗೆ ನೀಡಲಾಗುವುದು.

ಈ ಮೇಳದಲ್ಲಿ 10 ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದ್ದು ರೈತರಿಂದ ನೇರವಾಗಿ ಗ್ರಾಹಕರು ಖರೀದಿ ಮಾಡಬಹುದಾಗಿದೆ.

ಸಾರ್ವಜನಿಕರು ಕೂಡ ಗುಣಮಟ್ಟದ ಹಾಗೂ ತಾಜಾ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಇದಾಗಿದ್ದು, ಮೇಳದ ಸದುಪಯೋಗ ಪಡೆದುಕೊಳ್ಳಲು ಸಿಇಒ ಕೋರಿದರು.

ಸಸ್ಯ ಸಂತೆ

ಮೇಳದಲ್ಲಿ ಸಸ್ಯ ಸಂತೆ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ/ಸಸಿ ಗಿಡಗಳನ್ನು ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಹಾಗೂ ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುವುದು.

ಸಸ್ಯ ಸಂತೆ ಯಲ್ಲಿ ಮಾವು, ಸೀಬೆ, ತೆಂಗು, ನೆರಳೆ, ಕರಿಬೇವು ಇತ್ಯಾದಿ ಸಸಿಗಳು ಹಾಗೂ ಅಲಂಕಾರಿಕ ಗಿಡಗಳನ್ನು ಮಾರಾಟ ಮಾಡಲು ಉದ್ದೇಶಿಸಲಾಗಿದೆ.

ಮಾವು ಹಲಸು ಮಾರಾಟ ಮೇಳದ ಉದ್ಘಾಟನೆಯನ್ನು ಜೂನ್ 13 ರ ಬೆಳಿಗ್ಗೆ 11.00 ಗಂಟೆಗೆ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ನೇರವೇರಿಸಲಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ ಉಪಸ್ಥಿತರಿರುತ್ತಾರೆ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಹೊಸಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ರವರು ಸಸ್ಯ ಸಂತೆ ಮೇಳವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾನ್ಯ ಸಂಸದರು, ಮಾನ್ಯ ಶಾಸಕರು ವಿಧಾನ ಸಭೆ, ಶಾಸಕರು ವಿಧಾನ ಪರಿಷತ್ ಹಾಗೂ ಸ್ಥಳೀಯ ಸಂಸ್ಥೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಇತರೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಬಾಂಧವರು ಭಾಗವಹಿಸಲಿದ್ದಾರೆ ಎಂದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]