ದೊಡ್ಡಬಳ್ಳಾಪುರ; ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಗೆಳೆಯರ ನಡುವೆ ಕ್ಷುಲಕ ಕಾರಣಕ್ಕಾಗಿ ಭಾನುವಾರ ನಡೆದ ಜಗಳ ಕೊಲೆಯಲ್ಲಿ (Murder) ಅಂತ್ಯವಾಗಿದೆ.
ಕೊಲೆಯಾದ ವ್ಯಕ್ತಿಯನ್ನು ಕೋಲಾರ ಜಿಲ್ಲೆಯ ಮಾಲೂರಿನ ನಿವಾಸಿ ವಿಜಯಕುಮಾರ್(29 ವರ್ಷ) ಎಂದು ಗುರುತಿಸಲಾಗಿದೆ.
ಕೊಲೆ ಮಾಡಿರುವ ಆರೋಪದ ಮೇಲೆ ಪೂಜಪ್ಪ ಎಂಬಾತನನ್ನು ಬಂಧಿಸಲಾಗಿದೆ.
ಈ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.