ದೊಡ್ಡಬಳ್ಳಾಪುರ: ರಸ್ತೆ ಬದಿ ಸಾಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಕಾರು, ಚಾಲಕನ ನಿಯಂತ್ರಣ ತಪ್ಪಿ ಟ್ರಂಚಲ್ಲಿದ್ದ ಮರ ಬುಡಕ್ಕೆ ಡಿಕ್ಕಿ ಹೊಡೆದ ಅಪಘಾತದಲ್ಲಿ (Accident) ಮೂವರಿಗೆ ಗಂಭೀರವಾದ ಪೆಟ್ಟು ಬಿದ್ದಿರುವ ಘಟನೆ ತಾಲೂಕಿನ ಚಿಕ್ಕಬಳ್ಳಾಪುರ ರಸ್ತೆಯ ದೊಡ್ಡರಾಯಪ್ಪನಹಳ್ಳಿ ಬಳಿ ಸಂಭವಿಸಿದೆ.
ಬೆಂಗಳೂರು ಇಂದಿರಾನಗರದ ನಿವಾಸಿಗಳು ಇಂದು ಕಾರಿನಲ್ಲಿ ಚಿಕ್ಕಬಳ್ಳಾಪುರಕ್ಕೆ ತೆರಳುವಾಗ ಎದುರಾದ ವಾಹನ ತಪ್ಪಿಸುವ ಸಂದರ್ಭದಲ್ಲಿ ರಸ್ತೆ ಬದಿ ಸಾಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಟ್ರಂಚನಲ್ಲಿದ್ದ ಮರದ ಬುಡಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಪಾದಚಾರಿಗಳಿಬ್ಬರು, ಕಾರಿನಲ್ಲಿದ್ದ ಓರ್ವನಿಗೆ ತೀವ್ರ ಸ್ವರೂಪದ ಗಾಯಗಳಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.