ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

JDS kicks off Janata Dal state tour with people

ಬೆಂಗಳೂರು: ಜೆಡಿಎಸ್ (JDS) ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ (ಜೂನ್‌ 16) ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು.

ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರೊಂದಿಗೆ ಜನತಾದಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿಯೇ ರಾಜ್ಯ ಪಕ್ಷ ಸಂಘಟನಾ ರಾಜ್ಯ ಪ್ರವಾಸ ಮತ್ತು ಮಿಸ್ ಕಾಲ್ ಅಭಿಯಾನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಇಂದಿನಿಂದ ಅಧಿಕೃತವಾಗಿ ಮಿಸ್ಡ್ ಕಾಲ್ ಅಭಿಯಾನದ ಮೂಲಕ ಸದಸ್ಯತ್ವ ನೋಂದಣಿ ಆರಂಭ ಮಾಡಿದ್ದೇವೆ. ರಾಜ್ಯ ಪ್ರವಾಸದ ವೇಳೆ ಪ್ರತಿ ಕಾರ್ಯಕರ್ತರನ್ನು ಭೇಟಿ ಮಾಡಿ. ಪಕ್ಷಕ್ಕಾಗಿ ದುಡಿಯುವ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು.

ಕನಿಷ್ಠ ಐವತ್ತು ಲಕ್ಷ ಜನ ಸದಸ್ಯರಾಗಬೇಕು ಎಂಬ ಗುರಿ ಇಟ್ಟುಕೊಂಡು ಹೋಗೋಣ. ಮತ್ತೆ ಈ ಪಕ್ಷವನ್ನು ತಳ ಮಟ್ಟದಿಂದ ಪುಟಿದೇಳುವಂತೆ ಮಾಡಬೇಕು ಎಂಬ ನಿಟ್ಟಿನಲ್ಲಿ ಆ.16 ರವರೆಗೆ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದೆ ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿದರು.

ಚಿತ್ರರಂಗದಲ್ಲಿ ಅಣ್ಣಾವ್ರು, ರಾಜಕಾರಣದಲ್ಲಿ ಕುಮಾರಣ್ಣ

ಚಿತ್ರರಂಗದಲ್ಲಿ ಡಾ ರಾಜ್ ಕುಮಾರಣ್ಣ ಅವರಿಗೆ ಅಣ್ಣ ಅಂತ ಸ್ಥಾನ ಕೊಟ್ಟಿದ್ದರು. ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗೆ ಜನರು ಸ್ಥಾನ‌ ನೀಡಿದ್ದಾರೆ. ಅಪ್ಪಂದಿರ ದಿನಾಚರಣೆ ಆಚರಿಸೋಕ್ಕೆ ನನಗೆ ಒಳ್ಳೆ ಅವಕಾಶ ತಂದೆ ಅಂದ್ರೆ ನಮ್ಮ‌ ಜೀವನದ ಬೆಳಕು. ನಾನು ನಮ್ಮ‌ ತಂದೆಯಿಂದ ಹಲವು ವಿಚಾರಗಳನ್ನು ಹಾಗೆಯೇ ದೇವೇಗೌಡರ ರಾಜಕೀಯ ಕಾರ್ಯ ಕೆಲಸ ಕಲಿತಿದ್ದೇನೆ ಎಂದು ತಿಳಿಸಿದರು.

ಕೆಂಪುಕೋಟೆ ಮೇಲೆ ತ್ರಿವರ್ಣದ್ವಜ ಹಾರಿಸಿದ HDD ಈಶ್ವರನ ವರ ಪುತ್ರ

ಒಬ್ಬ ರೈತನ ಮಗ ದೇಶದ ಉನ್ನತ ಹುದ್ದೆ ಅಲಂಕರಿಸಿದರು ದೇವೇಗೌಡರನ್ನ ಈಶ್ವರನ ಪುತ್ರ ಎಂದೇ ಹೇಳಬಹುದು. ರಾಜ್ಯದ ಬಗ್ಗೆ ಅವರಿಗೆ ಇದ್ದ ಬದ್ದತೆ ನೋಡಿದ್ರೆ ಹಲವು ಜನರಿಗೆ ಮಾರ್ಗದರ್ಶನ ಆಗುವಂತದ್ದು ಎಂದರು. ನನ್ನ ಒಳಗೆ ಆತಂಕವಿದೆ ಎಲ್ಲರೂ ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ನಾನು ಪಕ್ಷದ ಸಂಘಟನೆಗೆ ಮೊದಲು ಹಾಜರಾತಿ ಆಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮಾವೇಶಕ್ಕೂ ಮೊದಲು ಆದಿಚುಂಚನಗಿರಿ ಬುದ್ದಿಗಳ ಜೊತೆ ಕೂತಿದ್ದೆ. ಅವರು ಅನೇಕ ಪ್ರಸ್ತಾವಿಕ ನುಡಿ ಹೇಳುತ್ತಿದ್ರು. ಹೀಗಾಗಿ ಮಧ್ಯೆ ಎದ್ದು ಬರಲು ಆಗಲಿಲ್ಲ. ಎಲ್ಲರಿಗೂ ಕ್ಷಮೆ ಕೇಳುತ್ತೇನೆ ಮುಂದೆ ಈ ರೀತಿ ಆಗಲಿಲ್ಲ. ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ.ಪಕ್ಷಕ್ಕೆ ಹೊಸ ಯುಗ ಆರಂಭವಾಗಬೇಕು ಎಂದರು.

58 ದಿನಗಳ ಕಾಲ ನಿಮ್ಮ ಜೊತೆ ನಿರಂತರವಾಗಿ ಹೆಜ್ಜೆ ಹಾಕ್ತೇನೆ

ನಾಳೆಯಿಂದ ಬಹುತೇಕ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡುತ್ತೇನೆ. ಇವತ್ತು ಬಹಳ ಉತ್ಸಾಹದಿಂದ ಪಕ್ಷ ಕಟ್ಟೋಕ್ಕೆ‌ ಎಲ್ಲರು ಬಂದಿದ್ದಾರೆ. 58 ದಿನಗಳ ಕಾಲ ನಿಮ್ಮ ಜೊತೆ ನಿರಂತರವಾಗಿ ಹೆಜ್ಜೆ ಹಾಕ್ತೇನೆ.ನಾನು ನಿಮ್ಮ ಜೊತೆ ಇರುತ್ತೇನೆ. ಒಂದು ಕಡೆ ಪಕ್ಷ ಸಂಘಟನೆ ಆದರೆ ಮತ್ತೊಂದು ಕಡೆ ಸರ್ಕಾರದ ವೈಫಲ್ಯ ತೆರದಿಡಲು ಬರುತ್ತಿದ್ದೇನೆ ಎಂದರು.

ಭ್ರಷ್ಟಾ ಸರ್ಕಾರ ರಾಜ್ಯದಿಂದ ತೊಲಗಬೇಕು

ರೈತ ವರ್ಗಕ್ಕೆ ಕುಮಾರಣ್ಣ ಕೊಟ್ಟ ಕೊಡುಗೆ ಹೇಳಲು ಆಗದು. 25 ಸಾವಿರ ಕೋಟಿ‌ ಯೋಜನೆಯನ್ನ ರೈತಾಪಿ ವರ್ಗಕ್ಕೆ ನೀಡಿದ್ದಾರೆ. ಪಂಚ ರತ್ನ ಯೋಜನೆ ಕನಸು ನನಸು ಆಗಬೇಕು.ಈ ಭ್ರಷ್ಟಾ ಸರ್ಕಾರ ರಾಜ್ಯದಿಂದ ತೊಲಗಬೇಕು ಎಂದು ಸರ್ಕಾರ ವಿರುದ್ಧ ಕಿಡಿಕಾರಿದರು.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಕಡೆಯೂ ಪ್ರವಾಸ ಮಾಡ್ತೇವೆ. ಕಾರ್ಯಕರ್ತರು ಒಂದು ಛಲ ಇಟ್ಟುಕೊಳ್ಳಬೇಕು.ನಮ್ಮದು ಸಣ್ಣ ಪ್ರಮಾಣದ ಪಕ್ಷ ಅಲ್ಲ.ಹಳ್ಳಿ ಹಳ್ಳಿಗಳಿಗೆ ಹೋಗಿ ಒಂದು ರಿಜಿಸ್ಟರ್ ಮಾಡಿ ಯಾವುದೇ ಹಣ ಕಾಸು ಖರ್ಚಾಗಲ್ಲ ಎಲ್ಲರ ಬಳಿ ಸ್ಮಾರ್ಟ್ ಪೋನ್ ಇದೆ.

ಡಿಜಿಟಲ್ ನಲ್ಲಿ ರಿಜಿಸ್ಟರ್ ಮಾಡಿಸಿ ಪಕ್ಷದ ಸಂಘಟನೆಯಲ್ಲಿ ಕೈ ಜೋಡಿಸಿ ಎಂದು ಮನವಿ ಮಾಡಿದರು. ಯಾರೂ ಕೂಡ ಮೈ ಮರೆಯೋದು ಬೇಡ. ಇವತ್ತಿಂದ ಟೈಂ ಶುರುವಾಗಿದೆ. ಕನಿಷ್ಠ 50 ಲಕ್ಷ ಮಿಸ್ ಕಾಲ್ ಸದಸ್ಯ ಕೊಡ್ತೇವೆಂದು ದೇವೇಗೌಡರು ಹಾಗೂ ಕುಮಾರಣ್ಣಗೆ ಭರವಸೆ ಕೊಡ್ತಿದ್ದೇವೆ ಎಂದು ತಿಳಿಸಿದರು.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]