Stampede during RCB victory celebration; R Ashoka demands emergency session

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

ಬೆಂಗಳೂರು: RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಈ ದುರ್ಘಟನೆಯು ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ, ಕ್ರೀಡಾ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ದುರಂತ ಜನರಲ್ಲಿ ಆತಂಕ ಮತ್ತು ಕಳವಳ ಉಂಟುಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಆಡಳಿತದಲ್ಲಿ ಆಗಿರುವ ಲೋಪಗಳು, ಘಟನೆ ನಂತರ ಸರ್ಕಾರದ ಕ್ರಮಗಳು ಅನೇಕ ಸಂಶಯಗಳನ್ನು ಹುಟ್ಟುಹಾಕಿದೆ. ಕಾಲ್ತುಳಿತಕ್ಕೆ ಕಾರಣರಾದ ಬಲಾಢ್ಯರನ್ನು ರಕ್ಷಿಸಲಾಗುತ್ತಿದೆ. ಸತ್ಯವನ್ನು ಮರೆಮಾಚಲು ಮೂರು ರೀತಿಯ ತನಿಖೆಗಳನ್ನು ಮಾಡಲಾಗುತ್ತಿದೆ. ಅಸಹಾಯಕ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ ಎಂದು ಅವರು ದೂರಿದ್ದಾರೆ.

ಭವಿಷ್ಯದಲ್ಲಿ ಇಂತಹ ದುರ್ಘಟನೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಚರ್ಚೆಯ ಅಗತ್ಯವಿದೆ. ಇದಕ್ಕಾಗಿ ಮೂರು ದಿನಗಳ ತುರ್ತು ಅಧಿವೇಶನ ಕರೆಯಬೇಕಿದೆ.

ಕಾಲ್ತುಳಿತ ಘಟನೆಗೆ ಕಾರಣವಾದ ಸಂದರ್ಭಗಳ ಸಂಪೂರ್ಣ ತನಿಖೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುಂಪು ನಿಯಂತ್ರಣ ಮತ್ತು ಸುರಕ್ಷತಾ ಕ್ರಮಗಳ ಬಲವರ್ಧನೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ವ್ಯವಸ್ಥೆ, ಭವಿಷ್ಯದಲ್ಲಿ ಇಂತಹ ಘಟನೆ ತಪ್ಪಿಸಲು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಈ ತುರ್ತು ಅಧಿವೇಶನವು ರಾಜ್ಯ ಸರ್ಕಾರ ಬದ್ಧತೆಯನ್ನು ಜನರಿಗೆ ತೋರಿಸಲು ಮತ್ತು ದುರಂತದಿಂದ ಕಲಿತ ಪಾಠಗಳ ಆಧಾರದಲ್ಲಿ ಭವಿಷ್ಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗಲಿದೆ. ಹಾಗೆಯೇ ಘಟನೆಗೆ ಕಾರಣಗಳೇನು ಎಂಬುದನ್ನು ಜನತೆಗೆ ತಿಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ರಾಜಕೀಯ

ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ

ನಾವು ಮಾತನಾಡಿದರೆ ರಾಜಕೀಯವಾಗುತ್ತದೆ. ಹೀಗಾಗಿ ಜೆಡಿಎಸ್-ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುವುದು ಬಹುಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ( D.K. Shivakumar)

[ccc_my_favorite_select_button post_id="112052"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಹೊರಡಿಸಿದೆ.

[ccc_my_favorite_select_button post_id="111989"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!