ರಾಜ್‌ಕೋಟ್; ಗುರುವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ (AI-171) ಪತನದಲ್ಲಿ 274 ಜನರ ಸಾವಿಗೀಡಾಗಿದ್ದು, ಇದರಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ (Vijay Rupani) ಅವರು ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಅವರ ಅಂತ್ಯಕ್ರಿಯೆ ರಾಜ್‌ಕೋಟ್‌ನಲ್ಲಿ ನೆರವೇರಿಸಲಾಯಿತು.
ಗುಜರಾತ್ ನ ಮಾಜಿ ಮುಖ್ಯಮಂತ್ರಿ ರೂಪಾನಿ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಮಾಜಿ ಸಿಎಂಗೆ ಅಂತಿಮ ವಿದಾಯದ ವೇಳೆ ಹಲವಾರು ಜನ ಕಂಬನಿ ಮಿಡಿದಿದ್ದಾರೆ.
ಈ ವೇಳೆ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರೂಪಾನಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ವಿಜಯ್ ರೂಪಾನಿ 2016 ರಿಂದ 2021 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.
ಹೊಸ ನಾಯಕತ್ವವನ್ನು ಹುಟ್ಟಿಹಾಕುವ ನೆಪದಲ್ಲಿ ಬಿಜೆಪಿಯು 2022 ರ ಗುಜರಾತ್ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ರೂಪಾನಿ ಅವರನ್ನು ಕರ್ನಾಟಕದ ಬಿಎಸ್ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದಂತೆ, ಕೊಡಿಸಿ ಕೆಳಗಿಳಿಸಿತ್ತು.