
ಲಖನೌ: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಹಿಂಡನ್ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ (Air India) ಎಕ್ಸ್‌ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
ಟೇಕಾಫ್‌ಗೆ ಸ್ವಲ್ಪ ಸಮಯ ಬಾಕಿ ಇರುವಾಗ ತಾಂತ್ರಿಕ ದೋಷ ಕಾಣಿಸಿದ್ದು, ಅನಾಹುತವೊಂದು ತಪ್ಪಿದಂತಾಗಿದೆ. ಏರ್ ಇಂಡಿಯಾ ಐಎಕ್ಸ್-1511 ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
ರನ್‌ವೇಯಲ್ಲಿದ್ದಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ, ವಿಮಾನ ಹಾರಾಟ ಒಂದು ಗಂಟೆ ಕಾಲ ವಿಳಂಬವಾಯಿತು. ‘ವಿಮಾನದಲ್ಲಿನ ತಾಂತ್ರಿಕ ದೋಷದಿಂದಾಗಿ ಹಾರಾಟ ವಿಳಂಬವಾಗಿದೆ. ಪ್ರಯಾಣಿಕರಿಗೆ ಉಚಿತ ಟಿಕೆಟ್ ಮರುಹೊಂದಿಕೆ ಅಥವಾ ರದ್ದತಿಯನ್ನು ಪೂರ್ಣ ಮರುಪಾವತಿ ಯೊಂದಿಗೆ ಮಾಡಿಕೊಡಲಾಗಿದೆ.
ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ’ ಎಂದು ಏರ್ ಇಡಿಯಾ ವಕ್ತಾರರು ತಿಳಿಸಿದ್ದಾರೆ.
ವಿಮಾನವು ರನ್‌ವೇಗೆ ಬಂದು ನಿರ್ಗಮನಕ್ಕೆ ಸಿದ್ಧತೆ ನಡೆಸುತ್ತಿದ್ದಾಗ ಸಿಬ್ಬಂದಿಗೆ ಕೊನೆಯ ಕ್ಷಣದಲ್ಲಿ ತೊಂದರೆ ಕಂಡುಬಂದಿದೆ. ಹಾಗಾಗಿ ಕೂಡಲೇ ಇಂಜಿನಿಯರ್ ಗಳನ್ನು ಕರೆಸಿ ಪರಿಶೀಲಿಸಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

