ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಅಪಕಾರನಹಳ್ಳಿ ಸಮೀಪ ಸಂಭವಿಸಿದೆ.
ಘಟನೆಯಲ್ಲಿ ಬೈಕ್ ಸವಾರ ತಂಬೇನಹಳ್ಳಿಯ ಹನುಮಯ್ಯ (40 ವರ್ಷ) ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ ದಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವಣ ಅಪಕಾರನಹಳ್ಳಿ ಸಮೀಪ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.