ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ; ಡಿಸಿಎಂ ಡಿಕೆ ಶಿವಕುಮಾರ್ ಭರವಸೆ

Metro station named after Field Marshal K.M. Caryappa; DCM DK Shivakumar

ಬೆಂಗಳೂರು: “ಮೆಟ್ರೋ ನಿಲ್ದಾಣಕ್ಕೆ (Metro station) ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ (K.M. Karyappa) ಅವರ ಹೆಸರಿಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ. ಕಾರ್ಯಪ್ಪ ಅವರ ಹೆಸರಿಡುವುದು ನಮ್ಮ ಭಾಗ್ಯ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Sivakumar) ಅವರು ಹೇಳಿದರು.

ಕರ್ನಾಟಕ ಸರ್ಕಾರವು ಬೆಂಗಳೂರಿನಲ್ಲಿ ಏಳು ಎಕರೆ ಭೂಮಿ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಕೊಡವ ಸಮಾಜದವರು ನಗರದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಉದ್ದೇಶಿಸಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿದರು.

“ಈ ವಿಚಾರವಾಗಿ ನಾವು ಮುಕ್ತ ಮನಸ್ಸು ಹೊಂದಿದ್ದೇವೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಾಗೂ ಈ ಡಿ.ಕೆ. ಶಿವಕುಮಾರ್ ಸೇರಿ ಕಾರ್ಯಪ್ಪ ಅವರ ಹೆಸರನ್ನು ಉಳಿಸುವ ಕೆಲಸ ಮಾಡುತ್ತೇವೆ” ಎಂದು ಭರವಸೆ ನೀಡಿದರು.

“ಮನುಷ್ಯನಿಗೆ ಮುತ್ತುರತ್ನ ಶೋಭೆ ತರುವಂತೆ ಇಡೀ ದೇಶಕ್ಕೆ ಕೊಡಗು ಹಾಗೂ ಕೊಡವರು ಆಭರಣವಿದ್ದಂತೆ. ಇತಿಹಾಸ ನೋಡಿದಾಗ ನಿಮಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸಿದ್ದೀರಿ. ರಾಜಕೀಯ ಮಾತ್ರವಲ್ಲ ಕ್ರೀಡೆ, ಕಾನೂನು ವ್ಯವಸ್ಥೆ, ಸೇನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕೊಡವರ ಕೊಡುಗೆ ಅಪಾರ. ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ನಿಮ್ಮ ಕೊಡುಗೆ ಇದೆ” ಎಂದು ಬಣ್ಣಿಸಿದರು.

“ಸಂಸ್ಕೃತಿ ಹಾಗೂ ಪರಂಪರೆಗಳನ್ನು ನಾವು ಹಾಳು ಮಾಡಿಕೊಳ್ಳಬಾರದು ಎಂಬುದು ನಮ್ಮ ಬಯಕೆ. ಕೊಡವ ಸಮಾಜಕ್ಕೆ ನೀಡಲಾಗಿರುವ 7 ಎಕರೆ ಜಮೀನಿಗೆ 30-40 ಕೋಟಿ ಕಡಿಮೆ ಮಾಡಿರುವುದು ದೊಡ್ಡ ವಿಚಾರವಲ್ಲ. ಇದಕ್ಕಿಂತ ನಿಮ್ಮ ತ್ಯಾಗ, ಪರಿಶ್ರಮ, ಶಿಸ್ತು ದೊಡ್ಡದು” ಎಂದು ತಿಳಿಸಿದರು.

“ಸರ್ವರಿಗೂ ಸಮಪಾಲು, ಸಮಬಾಳು ತತ್ವದ ಮೇಲೆ ನಮ್ಮ ಸರ್ಕಾರ ಅನೇಕ ಕಾರ್ಯಕ್ರಮ ರೂಪಿಸುತ್ತಿದೆ. ದುರ್ಬಲ ಸಮಾಜ, ಶೋಷಿತ ಸಮಾಜ, ಹಿಂದುಳಿದವರಿಗೆ ಸಹಾಯ ಮಾಡಲು ಕಾಂಗ್ರೆಸ್ ಬದ್ಧವಾಗಿದೆ” ಎಂದು ತಿಳಿಸಿದರು.

“ಕಾಂಗ್ರೆಸ್ ಸರ್ಕಾರಗಳು ಈ ಹಿಂದಿನಿಂದಲೂ ಹೃದಯ ಶ್ರೀಮಂತಿಕೆಯಿಂದ ಸಣ್ಣ ಸಮಾಜಗಳಿಗೆ ಸಹಾಯ ಮಾಡಿಕೊಂಡು ಬಂದಿವೆ. ನಮ್ಮ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ನಿಮಗೆ ಈ ಭೂಮಿ ನೀಡಲು ತೀರ್ಮಾನಿಸಿದೆ” ಎಂದರು.

ನಮಗೆ ಬೆಂಬಲ ನೀಡಿ ಕೈ ಬಲಪಡಿಸಿ

“ನಮ್ಮ ಸರ್ಕಾರ ನಿಮಗೆ ಅನೇಕ ಕಾರ್ಯಕ್ರಮ ಕೊಟ್ಟಿದೆ. ಸೇನೆಯಲ್ಲಿ ಸೇವೆ ಸಲ್ಲಿಸಿ ಬಂದವರಿಗೆ ಭೂಮಿ ಕೊಟ್ಟಿದೆ. ಕೊಡವರನ್ನು ರಾಜ್ಯಸಭೆ ಸದಸ್ಯರನ್ನಾಗಿ ಮಾಡಿದ್ದೇವೆ, ಮೂರ್ನಾಲ್ಕು ನಾಯಕರನ್ನು ಶಾಸಕರನ್ನಾಗಿ ಮಾಡಿದ್ದೇವೆ. ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದೇವೆ. ರಾಜಕೀಯದಲ್ಲಿ ನಿಮ್ಮ ಧ್ವನಿ ಇರಬೇಕು ಎಂದು ಹಲವು ತೀರ್ಮಾನ ಮಾಡಿದ್ದೇವೆ. ಈ ಇತಿಹಾಸವನ್ನು ಅರಿತು ನೀವು ನಮ್ಮ ಪರವಾಗಿ ನಿಲ್ಲಬೇಕು” ಎಂದು ಮನವಿ ಮಾಡಿದರು.

“ದೇವರು ನಮಗೆ ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಅದೇರೀತಿ ನಮಗೆ ಈಗ ಸಿಕ್ಕಿರುವ ಅವಕಾಶದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ನಿಮಗೆ ಅಗತ್ಯ ನೆರವು ನೀಡುತ್ತಿದೆ. ನಾವು ನಿಮ್ಮ ಜತೆ ಇದ್ದೇವೆ, ನೀವು ನಮ್ಮ ಜತೆ ನಿಂತು ನಮ್ಮ ಕೈಗೆ ಶಕ್ತಿ ತುಂಬಬೇಕು ಎಂದು ಪಕ್ಷದ ಅಧ್ಯಕ್ಷನಾಗಿ ಮನವಿ ಮಾಡುತ್ತೇನೆ. ಪೊನ್ನಣ್ಣ ಹಾಗೂ ಮಂಥರ್ ಗೌಡ ಅವರನ್ನು ಶಾಸಕರಾಗಿ ಆಯ್ಕೆ ಮಾಡಿದ್ದೀರಿ. ಮುಂದೆಯೂ ನೀವು ಇವರನ್ನು ವಿಧಾನಸೌಧಕ್ಕೆ ಆರಿಸಬೇಕು” ಎಂದು ಹೇಳಿದರು.

ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ; ಡಿಸಿಎಂ ಡಿಕೆ ಶಿವಕುಮಾರ್ ಭರವಸೆ

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]