Life and courage

ಹರಿತಲೇಖನಿ ದಿನಕ್ಕೊಂದು ಕಥೆ: ಬದುಕು ಮತ್ತು ಧೈರ್ಯ

Harithalekhani: ದಟ್ಟವಾದ ಕಾಡಿನಲ್ಲಿನ ಸರೋವರದ ಬದಿಯಲ್ಲಿ ಸಾವಿರಾರು ಮೊಲಗಳು ವಾಸ­ವಾ­ಗಿ­ದ್ದವು. ಅವುಗಳಿಗೆ ಅಲ್ಲಿ ಬೇಕಾದಷ್ಟು ಆಹಾರ ಸಿಗುತ್ತಿತ್ತು. ಅವುಗಳ ಪರಿ­ವಾರ ದಿನದಿಂದ ದಿನಕ್ಕೆ ವೃದ್ಧಿಸುತ್ತಲೇ ಇತ್ತು. ಮೊಲಗಳು ಮೊದಲೇ ತುಂಬ ಪುಕ್ಕಲು ಸ್ವಭಾವದ ಪ್ರಾಣಿಗಳು. ಒಂದು ಚೂರು ಸದ್ದಾ­ದರೂ ಹೆದರಿ ಓಡು­ವಂಥ ಜೀವಿಗಳು.

ಒಂದು ಬಾರಿ ಮೊಲಗಳೆಲ್ಲ ಸಭೆ ಸೇರಿದ್ದಾಗ ಹಿರಿಯ ಮೊಲ­ವೊಂದು ಗಂಭೀರವಾಗಿ ಮಾತನಾಡಿತು, ‘ಬಂಧು­ಗಳೇ, ನಾವೆಲ್ಲ ಈ ಅರಣ್ಯದಲ್ಲಿ ಚೆನ್ನಾಗಿದ್ದೇವೆ ಎಂಬುದು ಒಂದು ಭಾವನೆ. ಆದರೆ, ನಿಜವಾಗಿ ನೋಡಿದರೆ ನಾವು ಇರುವಷ್ಟು ಆತಂಕದಲ್ಲಿ ಬೇರೆ ಯಾವ ಪ್ರಾಣಿಯೂ ಕಾಡಿನಲ್ಲಿ ಇರು­ವುದು ಸಾಧ್ಯವಿಲ್ಲ. ನಮ್ಮ ಸ್ವಭಾವವೇ ಪುಕ್ಕಲು. ನಾವು ಪಕ್ಕಾ ಸಸ್ಯಾಹಾರಿಗಳು, ಯಾರಿಗೂ ತೊಂದರೆ ಕೊಡುವವರಲ್ಲ. ಆದರೆ, ಎಲ್ಲರೂ ನಮ್ಮ ಮೇಲೆ ಯಾಕೆ ಇಷ್ಟು ದ್ವೇಷ ಸಾಧಿಸುತ್ತಾರೋ ತಿಳಿ­ಯದು.

ಮಾಂಸಾಹಾರಿಗಳಾದ ಪ್ರಾಣಿ­ಗಳು ನಮಗೋಸ್ಕರ ಕಾಯುತ್ತಿರುತ್ತವೆ. ಸಿಕ್ಕಸಿಕ್ಕಲ್ಲಿ ನಮ್ಮವರನ್ನು ಹೊಡೆದು ತಿನ್ನು­ತ್ತವೆ. ಇನ್ನೊಂದೆಡೆಗೆ ಬೇಟೆ­ಗಾ­ರರೂ ನಮ್ಮನ್ನೇ ಹುಡುಕಿಕೊಂಡು ಬರುತ್ತಾರೆ. ಅಲ್ಲಲ್ಲಿ ಬಲೆ ಹಾಕಿ ನಮ್ಮನ್ನು ಹಿಡಿಯುತ್ತಾರೆ. ಸಿಕ್ಕವರನ್ನು ಹಿಡಿದುಕೊಂಡು ಹೋಗಿ ಕೆಲವರನ್ನು ಕೊಂದು ಮಾಂಸ ಮಾರುತ್ತಾರೆ. ಇನ್ನೂ ಕೆಲವರನ್ನು ಹಿಡಿದುಕೊಂಡು ಹೋಗಿ ಪಂಜರದಲ್ಲಿಟ್ಟು ಸಾಕುತ್ತಾರೆ. ಪಾಪ! ಆ ಮೊಲಗಳಿಗೆ ಜೀವನಪರ್ಯಂತ ಜೈಲು ವಾಸ. ನಾವು ಏನು ಮಾಡಬೇಕು ಎಂಬುದು ತಿಳಿಯ­ದಾಗಿದೆ.

ಒಂದೆಡೆಗೆ ನಮ್ಮನ್ನು ಬೇಟೆಯಾಡುವ ಕಾಡುಪ್ರಾಣಿ­ಗಳು, ಮತ್ತೊಂದೆ­ಡೆಗೆ ಬೇಟೆಗಾರರು. ಇಬ್ಬರಿಂದಲೂ ಹೇಗೆ ಪಾರಾಗಬೇ­ಕೆಂಬುದನ್ನು ನಾವು ಯೋಚಿಸಬೇಕ­ಲ್ಲವೇ?’.

ಹಿರಿಯ ಮೊಲದ ಮಾತು­ಗಳನ್ನು ಶ್ರದ್ಧೆಯಿಂದ ಎಲ್ಲ ಮೊಲ­ಗಳು ಕೇಳಿದವು. ಅವುಗಳ ಕಣ್ಣ ಮುಂದೆ ತಮ್ಮ ಅತ್ಯಂತ ಅನಿಶ್ಚಿತವಾದ ಬದುಕು ತೇಲಿಬಂತು. ಪ್ರತಿಕ್ಷಣವೂ ಸಾವಿಗೆ ಹೆದರಿ ಓಡಬೇಕಾದ ಪರಿಸ್ಥಿತಿ ತಮ್ಮದು ಎಂದು ಚಿಂತಿಸಿ ಕಂಗಾಲಾದವು.

ಆಗ ಮತ್ತೊಂದು ಮೊಲ ಎದ್ದು ನಿಂತಿತು. ಅದು ಕಣ್ಣೀರು ಸುರಿಸುತ್ತಲೇ ಹೇಳಿತು, ‘ಹೌದು, ಹಿರಿಯರು ಹೇಳಿ­ದಂತೆ ನಮ್ಮ ಬದುಕಿಗೆ ಯಾವ ಅರ್ಥವೂ ಇಲ್ಲ. ಹೀಗೆ ಕ್ಷಣಕ್ಷಣವೂ ಸಾಯು­ವುದಕ್ಕಿಂತ ಒಮ್ಮೆಯೇ ಸತ್ತು ಹೋಗುವುದು ವಾಸಿ. ನನ್ನ ಮಾತು ಕೇಳುವು­ದಾದರೆ ನಾವೆಲ್ಲ ಒಂದೇ ಬಾರಿ ಕೊಳದಲ್ಲಿ ಮುಳುಗಿ ಸತ್ತು ಹೋಗುವುದು ಸರಿಯಾದ ದಾರಿ’.

ಅಲ್ಲಿ ಸೇರಿದ ಎಲ್ಲ ಮೊಲಗಳಿಗೆ ಈ ವಿಚಾರ ಅತ್ಯಂತ ಸರಿ ಎನ್ನಿಸಿತು. ಹಾಗಾದರೆ ತಡವೇಕೆ? ಇಂದೇ, ಈಗಲೇ ಹೋಗಿ ಕೊಳದಲ್ಲಿ ಹಾರಿಕೊಳ್ಳೋಣ ಎಂದು ಸಾವಿರಾರು ಮೊಲಗಳು ಕೊಳದ ಕಡೆಗೆ ನಡೆದವು.

ಆಗ ಒಂದು ಘಟನೆ ನಡೆಯಿತು. ಸಾವಿರಾರು ಮೊಲಗಳು ಕೊಳದ ಹತ್ತಿರ ಬಂದಾಗ ದಂಡೆಯಲ್ಲಿ ಕುಳಿತಿದ್ದ ಸಾವಿ­ರಾರು ಕಪ್ಪೆಗಳು ಗಾಬರಿಯಾಗಿ ನೀರಿಗೆ ಹಾರಿದವು.

ಇದನ್ನು ಕಂಡ ಒಂದು ತರುಣ ಮೊಲ ಕೂಗಿತು, ‘ಎಲ್ಲರೂ ನಿಲ್ಲಿ, ಯಾರೂ ನೀರಿಗೆ ಹಾರಬೇಕಿಲ್ಲ. ನಾವು ಬರುವುದನ್ನು ಕಂಡು ಗಾಬರಿ­ಯಾಗಿ ಹಾರಿದ ಕಪ್ಪೆಗಳನ್ನು ಕಂಡಿರಾ? ಅಂದರೆ ನಮ್ಮಂತಹ ಪುಕ್ಕಲು ಪ್ರಾಣಿ­ಗಳಿಗೂ ಹೆದರುವ ಪ್ರಾಣಿಗಳಿವೆಯಲ್ಲ! ನಮ್ಮ ಬದುಕು ಅವುಗಳಿಗಿಂತ ಎಷ್ಟೋ ವಾಸಿ. ಕಪ್ಪೆಗಳೇ ಬದುಕುವುದಕ್ಕೆ ಉತ್ಸಾಹ ತೋರುವಾಗ ನಾವೇಕೆ ಬದುಕಿನಿಂದ ಮುಖ ತಿರುಗಿಸಬೇಕು?’ ಮೊಲಗಳಿಗೆ ಮಾತು ಸರಿ ಎನ್ನಿಸಿತು.

ಅವುಗಳ ಮುಖದಲ್ಲಿ ಸಂತೋಷ ತೇಲಾಡಿತು. ಅವು ಮತ್ತೆ ಕುಪ್ಪಳಿಸುತ್ತ ಕಾಡಿಗೆ ನಡೆದವು.

5 ನೇ ತರಗತಿಯ ಕನ್ನಡ ಶಿಕ್ಷಕರ ಕೈಪಿಡಿ

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!