ಕಮಲ್ ಸಿನಿಮಾ.. ಕನ್ನಡ ಪರ ಸಂಘಟನೆಗಳು ಕಾನೂನು ಕೈಗೆತ್ತಿಕೊಳ್ಳಬೇಡಿ; ಡಿಸಿಎಂ ಡಿಕೆ ಶಿವಕುಮಾರ್ ಮನವಿ

Kamal's movie.. Pro-Kannada organizations should not take legal action; DCM DK Shivakumar appeals

ಬೆಂಗಳೂರು: ಡಿಕೆ ಸುರೇಶ್ (DK Suresh) ಇಡಿ ತನಿಖೆಗೆ ಸಹಕಾರ ನೀಡಲಿದ್ದಾರೆ ಹಾಗೂ ತಮ್ಮ ಹೇಳಿಕೆಯನ್ನು ಸಲ್ಲಿಸಲಿದ್ದಾರೆ. ನಮ್ಮ ಹೆಸರನ್ನು ಅಪರಿಚಿತರು ದುರುಪಯೋಗ ಮಾಡಿಕೊಳ್ಳುತ್ತಾ ಇದ್ದಾರೆ ಎಂದು ಅವರು ಪೊಲೀಸರಿಗೆ ದೂರು ನೀಡಿದ್ದರು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಹೇಳಿದರು.

ಅರಮನೆ ಮೈದಾನದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಐಶ್ವರ್ಯಾ ಗೌಡ ಅವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಸುರೇಶ್ ಅವರಿಗೆ ಇಡಿ ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ಶಿವಕುಮಾರ್ ತಂಗಿ ಎಂದೇಳಿಕೊಂಡು ಮೋಸ ಮಾಡಿರುವ ಬಗ್ಗೆ ವಂಚನೆಗೆ ಒಳಗಾಗಿರುವ ಮೂರು ನಾಲ್ಕು ಜನರು ನನ್ನ ಬಳಿ ಬಂದು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಎಂದು ನಾವೂ ಸಹ ಹೇಳಿದ್ದೇವೆ. ಆದ ಕಾರಣ ನಾವು ಇಡಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ” ಎಂದು ಹೇಳಿದರು.

ಸುರೇಶ್ ಅವರು ವಿಚಾರಣೆಗೆ ಹಾಜರಾಗುತ್ತಾರೆಯೇ ಎಂದು ಕೇಳಿದಾಗ, “ಈ ದೇಶದ ಕಾನೂನಿಗೆ, ವಿಚಾರಣೆಗಳಿಗೆ ನಾವು ಗೌರವ ನೀಡುತ್ತೇವೆ. ಮೋಸ ಮಾಡುವ ವ್ಯಕ್ತಿಗಳ ವಿರುದ್ಧದ ತನಿಖೆಗೆ ನಾವು ಸಹಕಾರ ನೀಡಲು ಬದ್ದರಾಗಿದ್ದೇವೆ. ಜನರಿಗೆ ನ್ಯಾಯ ಒದಗಿಸಿಕೊಡುವ ಕೆಲಸವನ್ನು ಡಿ.ಕೆ.ಸುರೇಶ್ (DK Suresh) ಹಾಗೂ ಶಿವಕುಮಾರ್ ಮಾಡುತ್ತಾರೆ” ಎಂದರು.

“ಸಹೋದರ ಡಿ.ಕೆ.ಸುರೇಶ್ ಅವರ ಮನೆ ಬಾಗಿಲಿಗೆ ಇಡಿಯವರು ಸಮನ್ಸ್ ಅನ್ನು ಅಂಟಿಸಿ ಹೋಗುತ್ತೇವೆ ಎಂದರಂತೆ. ಅದಕ್ಕೆ ನಾನು ಸ್ವೀಕರಿಸಿ ಎಂದು ಹೇಳಿದ್ದೇನೆ. ಸಮನ್ಸ್ ನೀಡಲು ಬಂದಾಗ ಸಹೋದರ ಮನೆಯಲ್ಲಿ ಇರಲಿಲ್ಲ” ಎಂದು ತಿಳಿಸಿದರು.

ಕುಮಾರಸ್ವಾಮಿಗೆ ಅಂಗಿ, ಪಂಚೆ, ಜುಬ್ಬಾ ಕಳುಹಿಸೋಣ

ರಾಜ್ಯದಲ್ಲಿ ಮುಂದೆ ಬಿಜೆಪಿ- ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎನ್ನುವ ಕುಮಾರಸ್ವಾಮಿ (HD Kumaraswamy) ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೆ ಯಾವ ರೀತಿಯ ಪಂಚೆ, ಅಂಗಿ, ಜುಬ್ಬಾ, ಪ್ಯಾಂಟ್, ಮೇಲಂಗಿ ಬೇಕು ಎಂಬುದನ್ನು ಕಳುಹಿಸಿ ಕೊಡೋಣ. ಮಾಧ್ಯಮದವರ ಕೈಗೆ ಇವೆಲ್ಲವನ್ನು ನೀಡುತ್ತೇನೆ. ನೀವೇ ಅವರಿಗೆ ತಲುಪಿಸಿಬಿಡಿ” ಎಂದು ಕುಹಕವಾಡಿದರು.

ಕಮಲಹಾಸನ್ ನಟನೆಯ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಸಂಬಂಧ 24 ಗಂಟೆಯೊಳಗೆ ಸರ್ಕಾರ ವಿವರಣೆ ನೀಡಬೇಕು ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನದ ಬಗ್ಗೆ ಕೇಳಿದಾಗ, ಕಮಲ ಹಾಸನ್ ವಿಚಾರದಲ್ಲಿ ನ್ಯಾಯಲಯ ನೀಡಿರುವ ಆದೇಶವನ್ನು ನಾವೆಲ್ಲರೂ ಗೌರವದಿಂದ ಪಾಲನೆ ಮಾಡಬೇಕು.

ನಾವು ನಮ್ಮ ಮಿತಿಯನ್ನು ಮೀರಬಾರದು, ಶಾಂತಿಯಿಂದ ಇರಬೇಕು ಎಂದು ಕನ್ನಡಪರ ಸಂಘ- ಸಂಸ್ಥೆಗಳಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ. ಯಾರೂ ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ನಮ್ಮ ರಾಜ್ಯ ಶಾಂತಿ ಪ್ರಿಯ ರಾಜ್ಯ ಎಂದರು.

ಕನ್ನಡಿಗರ ಸ್ವಾಭಿಮಾನವನ್ನ ಯಾರೂ ಹಾಳು ಮಾಡಲು ಸಾಧ್ಯವಿಲ್ಲ

“ಅವರ ಅಭಿಪ್ರಾಯ ಹೇಳುವುದು ತಪ್ಪಲ್ಲ. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡಿದ್ದೇವೆ. ಎಲ್ಲಾ ಜಾತಿ, ಸಂಸ್ಕೃತಿ, ಧರ್ಮಗಳನ್ನು ಬೆಂಗಳೂರು ಅರಗಿಸಿಕೊಂಡಿದೆ. ಬೆಂಗಳೂರು ಅಂತರರಾಷ್ಟ್ರೀಯ ನಗರ, ಎಲ್ಲರಿಗೂ ಬೇಕಾದ ನಗರ. ಕನ್ನಡದ ಜನರು ಹೃದಯ ಶ್ರೀಮಂತಿಕೆ ತೋರಿಸಿಕೊಂಡು ಬಂದಿದ್ದಾರೆ. ನಮ್ಮ ಸ್ವಾಭಿಮಾನವನ್ನು ಯಾರೂ ಸಹ ಹಾಳು ಮಾಡಲು ಸಾಧ್ಯವಿಲ್ಲ. ಕನ್ನಡದ ಪರ ನಾವಿದ್ದೇವೆ. ಆದರೆ ನ್ಯಾಯಲಯದ ತೀರ್ಪಿಗೆ ಗೌರವ ನೀಡಲೇ ಬೇಕು” ಎಂದು ತಿಳಿಸಿದರು.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]