35,000 vacant posts to be filled soon: CM Siddaramaiah

ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ ಶೀಘ್ರ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಘೋಷಿಸಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದರು.

ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

1964 ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು ಎಂದು ಶ್ಲಾಘಿಸಿದರು.

ಇಡೀ ಏಷ್ಯಾದಲ್ಲಿ ಮೊದಲಿಗೆ ವಿದ್ಯುತ್ ಉತ್ಪಾದನೆ ಆಗಿದ್ದು 1902 ರಲ್ಲಿ ಕರ್ನಾಟಕದಲ್ಲಿ. 1905 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ವಿದ್ಯುತ್ ಸರಬರಾಜು ಕಂಪನಿ ಆರಂಭಿಸಲಾಯಿತು. 1908 ರಲ್ಲಿ ಮೊದಲ ಬಾರಿ ಅರಮನೆಗೆ ವಿದ್ಯುತ್ ಬಂತು. ಅಲ್ಲಿಂದ ಇಲ್ಲೀವರೆಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ನಾವು 34000 ಮೆಘಾ ವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ಕೇವಲ ನಮ್ಮ ರಾಜ್ಯದ್ದಾಗಿದೆ ಎಂದರು.

ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗುತ್ತಿರುವುದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿರುವ ಕಾರಣಕ್ಕೇ ಎಂದು ವಿಶ್ಲೇಷಿಸಿದರು.

ರೈತರಿಗೆ, ಕೃಷಿಗೆ, ಪಂಪ್ ಸೆಟ್ ಗಳಿಗೆ ಹಗಲಲ್ಲೂ 7 ಗಂಟೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಶಕ್ತರಾಗುತ್ತೇವೆ. ಈ ಗುರಿ ಇಟ್ಟುಕೊಂಡು ಕೆಲಸಗಳು ನಡೆಯುತ್ತಿವೆ.

60000 ಮೆಘಾ ವ್ಯಾಟ್ ಉತ್ಪಾದನೆ ಗುರಿ ನಾವು ತಲುಪಿದ ತಕ್ಷಣ ಇದು ಸಾಧ್ಯವಾಗಲಿದೆ. ವಿದ್ಯುತ್ ಪ್ರಮುಖ ಕಚ್ಛಾವಸ್ತು ಎನ್ನುವುದನ್ನು ನಾವು ಮರೆಯಬಾರದು ಎಂದರು.

ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೀರಿ. ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ನಮ್ಮ ಸರ್ಕಾರ ಸಿದ್ಧವಿದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ನೀವು ನಮ್ಮ ಜೊತೆಗೆ ಇರಿ ಎಂದು ಕರೆ ನೀಡಿದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!