ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ ಮಳಿಗೆ: ಬಿಜೆಪಿ ನಾಯಕರ ದ್ವಂದ್ವ ನಿಲುವು..!

Amul shops at metro stations: BJP leaders' dual stance..!

ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ (Metro station) ಅಮೂಲ್ ಮಳಿಗೆ (Amul Shop) ತೆರೆಯುತ್ತಿರುವ ಕುರಿತು ಆಕ್ರೋಶ ವ್ಯಕ್ತವಾಗಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಇದೇ ನಿಲ್ದಾಣಗಳಲ್ಲಿ 8 ನಂದಿನಿ (Nandini) ಕೇಂದ್ರ ತೆರೆದು ಅಮೂಲ್ಗೆ ಸ್ಪರ್ಧೆಯೊಡ್ಡಲು ಆದೇಶ ನೀಡಿದ್ದಾರೆ.

ಆದರೆ ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಬೇಕಾದ ವಿರೋಧ ಪಕ್ಷ ಬಿಜೆಪಿ (BJP) ನಾಯಕರಿಂದ ದ್ವಂದ್ವ ಹೇಳಿಕೆಗಳು ಬಂದಿದ್ದು, ಮುಜುಗರಕ್ಕೆ ಕಾರಣವಾಗುವ ಸಾಧ್ಯತೆ ಎದುರಾಗಿದೆ.

ಹೌದು ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಹಾಗೂ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ (CT Ravi)ರ ಅಭಿಪ್ರಾಯ ವಿಭಿನ್ನವಾಗಿದೆ.

ನಂದಿನಿ ಹಾಗೂ ಅಮುಲ್ ಎರಡೂ ಕೂಡಾ ನಮ್ಮದೇ ದೇಶದ ಬ್ರಾಂಡ್ಗಳು. ನಂದಿನಿ ನಮ್ಮ ರಾಜ್ಯದ್ದಾಗಿದೆ. ಎರಡು ಕೂಡಾ ರೈತರ ಸಂಸ್ಥೆಗಳಾಗಿದ್ದು, ಇಲ್ಲಿ ದ್ವೇಷ ಮಾಡುವ ಅಗತ್ಯವಿಲ್ಲ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಹೇಳಿದ್ದಾರೆ.

ಆದರೆ ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ ಮಳಿಗೆ ತೆರೆಯಲು ಅವಕಾಶ ನೀಡಿರುವ ಕಾಂಗ್ರೆಸ್ ಪಕ್ಷ ನಂದಿನಿ ಬ್ರ್ಯಾಂಡ್ ಅನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ಆರ್ ಅಶೋಕ ಟ್ವೀಟ್ ಮಾಡಿದ್ದಾರೆ.

ಒಂದು ಕಡೆ ಹಾಲು ಉತ್ಪಾದಕರಿಗೆ ನೂರಾರು ಕೋಟಿ ಬಾಕಿ ಉಳಿಸಿಕೊಂಡಿದೆ. ಮತ್ತೊಂದು ಕಡೆ ಅತ್ಯಂತ ಬೇಡಿಕೆ ಇರುವ ರೆಡಿ ಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೋಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ ನಂದಿನಿ ಬ್ರ್ಯಾಂಡ್ ನ ಮಾರುಕಟ್ಟೆ ವಿಸ್ತರಿಸಲು ಅತ್ಯಂತ ಉತ್ಸಾಹ ಮತ್ತು ಬದ್ಧತೆ ತೋರಿದ್ದ ದಕ್ಷ ಅಧಿಕಾರಿ ಕೆಎಂಎಫ್‌ ಎಂಡಿ ಶ್ರೀ ಎಂ.ಕೆ.ಜಗದೀಶ್ ಅವರನ್ನ ರಾಜ್ಯ ಸರ್ಕಾರ ದಿಢೀರನೆ ವರ್ಗಾವಣೆ ಮಾಡಿತ್ತು.

ಈಗ ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಡೈರಿ ಮಳಿಗೆಗಳನ್ನು ಸ್ಥಾಪಿಸಲು ಕರೆದಿದ್ದ ಟೆಂಡರ್ ನಲ್ಲಿ ಭಾಗವಹಿಸಲೂ ಆಸಕ್ತಿ ತೋರಿಲ್ಲ.

ನಮ್ಮ ನಾಡಿನ ರೈತರು, ನಿಷ್ಠಾವಂತ ಗ್ರಾಹಕರು ಕಷ್ಟಪಟ್ಟು ಕಟ್ಟಿರುವ ನಂದಿನಿ ಬ್ರ್ಯಾಂಡ್ ಅನ್ನ ಸರ್ವನಾಶ ಮಾಡಲು ಸಿಎಂ ಸಿದ್ದರಾಮಯ್ಯ ಅವರು ಶಪಥ ಮಾಡಿದಂತಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ‌.

ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆಗಳ ಸ್ಥಾಪನೆಗೆ ಅವಕಾಶ ನೀಡಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಟಿ ರವಿ, ಕರ್ನಾಟಕದಲ್ಲಿ ನಂದಿನಿಗೆ ಮೊದಲು ಆದ್ಯತೆ ನೀಡಬೇಕು. ನಂದಿನಿಗೆ ಅವಕಾಶ ಕೊಡದೇ ನಿರಾಕರಿಸಿದರೆ ಅದು ತಪ್ಪಾಗುತ್ತದೆ. ಆದರೆ ಎರಡೂ ಕೂಡಾ ಸ್ಪರ್ಧೆಯಲ್ಲಿದೆ.

ಅಮುಲ್ ಹಾಗೂ ನಂದಿನಿ ಸಂಸ್ಥೆಗಳು ವಿಲೀನ ಆಗುವ ಬಗ್ಗೆ ಹಿಂದೆ ಚರ್ಚೆ ಆಗಿತ್ತು. ನಂದಿನಿಯ ಒಳ್ಳೆಯ ಟೆಕ್ನಾಲಜಿಯನ್ನು ಅಮುಲ್ ಬಳಸಿಕೊಳ್ಳಬೇಕು. ಅಮುಲ್‌ನ ಒಳ್ಳೆಯ ಟೆಕ್ನಾಲಜಿಯನ್ನು ನಂದಿನಿ ಅಳವಡಿಸಿಕೊಳ್ಳಬೇಕು ಎಂದರು.

ನಮ್ಮ ನಂದಿನಿ ಬೇರೆ ಕಡೆಗಳಲ್ಲೂ ಮಳಿಗೆ ತರೆದಿದೆ. ಉತ್ತರ ಪ್ರದೇಶ, ದೆಹಲಿ, ಮುಂಬೈನಲ್ಲೂ ಮಳಿಗೆಗಳನ್ನು ತೆರೆದಿದೆ. ಅದು ತನ್ನ ಸಾಮರ್ಥ್ಯವನ್ನು ಗಳಿಸಿಕೊಳ್ಳೋದು.

ಸ್ಪರ್ಧೆಯಲ್ಲೂ ಭಾಗವಹಿಸಿ ಮೆಟ್ರೋ ಮಾತ್ರ ಅಲ್ಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲೂ ತನ್ನ ಮಳಿಗೆಗಳನ್ನು ತೆರೆಯಿವಷ್ಟು ಸಾಮರ್ಥ್ಯ ನಂದಿನಿಗೆ ಬರಲಿ ಎಂದು ನಾನು ಆಶಿಸುತ್ತೇನೆ. ಇದಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರ ಹಾಗೂ ಬಿಎಂಆರ್‌ಸಿಎಲ್ ಚಿಂತನೆ ಮಾಡಬೇಕು. ಎಲ್ಲೆಲ್ಲಿ ಅಮುಲ್ ಮಳಿಗೆಗೆ ಅವಕಾಶ ಕೊಟ್ಟಿದ್ದೀರಿ ನಂದಿನಿಗೂ ಮಳಿಗೆಯನ್ನು ಮೀಸಲಿಡಿ. ಆಗ ನಂದಿನಿಯೂ ಇರುತ್ತದೆ, ಅಮುಲ್ ಕೂಡಾ ಇರುತ್ತದೆ. ಸ್ಪರ್ಧೆ ಚೆನ್ನಾಗಿ ಆಗುತ್ತದೆ. ಆರೋಗ್ಯಕರ ಸ್ಪರ್ಧೆ ಇರುತ್ತದೆ. ಇದು ನನ್ನ ಸಲಹೆ. ಎಲ್ಲದಕ್ಕೂ ಟೀಕೆ, ರಾಜಕಾರಣ ಮಾಡುವ ಉದ್ದೇಶ ನನಗಿಲ್ಲ ಎಂದು ಸಿಟಿ ರವಿ ಹೇಳುವ ಮೂಲಕ ಆರ್ ಅಶೋಕ್ ಹೇಳಿಕೆಯನ್ನು ಅಲ್ಲಗೆಳೆದಿದ್ದಾರೆ.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]