ದೊಡ್ಡಬಳ್ಳಾಪುರ: ನಗರದ ಸೋಮೇಶ್ವರ ಬಡಾವಣೆಯ ಎನ್.ಗಂಗಾಧರಯ್ಯ (N.Gangadhariah) ಅವರು ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.
ನಗರಸಭೆ ಸದಸ್ಯರಾಗಿ ಹಾಗೂ ಸ್ಥಾಯಿಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರಿಗೆ ಪತ್ನಿ, ಒಬ್ಬ ಪುತ್ರ, ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ಬೆಳಿಗ್ಗೆ 11.30ಕ್ಕೆ ನಗರದ ಕಛೇರಿಪಾಳ್ಯ ಸಮೀಪದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.