ಯಲಹಂಕ: ದೊಡ್ಡಬಳ್ಳಾಪುರ ತಾಲ್ಲೂಕಿನ ಆರೂಢಿ ಶ್ರೀ ಅರವಿಂದ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಡಿವಿ ಶಿವರುದ್ರಯ್ಯ (DVS) ಅವರ ಪತ್ನಿ ಪಾರ್ವತಮ್ಮ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಮಂಗಳವಾರ ಸಂಜೆ ಪಾರ್ವತಮ್ಮ ಅವರಿಗೆ ಹೃದಯಾಘಾತ ಉಂಟಾಗಿದ್ದು, ಜಯದೇವ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಮೃತರು ಪತಿ ಡಿವಿ ಶಿವರುದ್ರಯ್ಯ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಅಂತಿಮ ನಮನ ಸಲ್ಲಿಸಲು ಯಲಹಂಕದ ಅಟ್ಟೂರು ಲೇಔಟ್ನ ಮನೆಯ ಬಳಿ ಅವಕಾಶ ಕಲ್ಪಿಸಲಾಗಿದೆ.
ಮೃತರ ಅಂತ್ಯಕ್ರಿಯೆ ಕಡತನ ಮಲೆ ಗ್ರಾಮದ ಸ್ವಂತ ಜಮೀನಿನಲ್ಲಿ ಇಂದು ಮಧ್ಯಾಹ್ನ 3 ರಿಂದ 4 ಗಂಟೆಯ ಒಳಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.