No one can finish JDS, it is a party of workers; Nikhil Kumaraswamy

ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ; ನಿಖಿಲ್ ಕುಮಾರಸ್ವಾಮಿ

ತುಮಕೂರು, (ಕೊರಟಗೆರೆ): ರಾಜ್ಯದ ಜನ ಕಾಂಗ್ರೆಸ್ ಆಡಳಿತದಿಂದ ರೋಸಿಹೋಗಿದ್ದಾರೆ. ದೇವೇಗೌಡರ ಮಾರ್ಗದರ್ಶನದಲ್ಲಿ, ಕುಮಾರಣ್ಣನವರ ನಾಯಕತ್ವದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು ನಿಮ್ಮ ಜೊತೆ ನಾನಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

ಜನರೊಂದಿಗೆ ಜನತಾದಳ ಇಂದು ಮೂರನೇ ದಿನದ ರಾಜ್ಯ ಪ್ರವಾಸ ಬೈಕ್ ರ್ಯಾಲಿ ಮೂಲಕ ಕೊರಟಗೆರೆ ಕ್ಷೇತ್ರದಲ್ಲಿ “ಜನರೊಂದಿಗೆ ಜನತಾದಳ” ಮಿಸ್ಡ್ ಕಾಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಸಭೆಯನ್ನ ಉದ್ದೇಶಿಸಿ ಮಾತನಾಡಿದರು.

ಸುಧಾಕರ್ ಲಾಲ್ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರಲು ಪೂರಕವಾಗಿ ಕೆಲಸ ಮಾಡಿ ಮಾಡುತ್ತಿದ್ದೇವೆ. ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಇದು ಕಾರ್ಯಕರ್ತರ ಪಕ್ಷ ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಜತೆ ನಾನಿದ್ದೇನೆ ಎಂದು ಧೈರ್ಯ ತುಂಬಿದರು.

ಪ್ರವಾಸ ಅವಧಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆ ಮತ್ತು ಪ್ರತಿ ತಾಲ್ಲೂಕಿನ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ಸಾಮಾನ್ಯ ಜನರನ್ನ ಭೇಟಿ ಮಾಡಳಿದ್ದೇನೆ. ಪಕ್ಷದ ಬಗ್ಗೆ
ಕಾರ್ಯಕರ್ತರು ಹೊಂದಿರುವ ಭಾವನೆಯನ್ನು ಅರ್ಥಮಾಡಿಕೊಳ್ಳಳಿದ್ದೇನೆ. ಪಕ್ಷವನ್ನು ಮತ್ತೆ ತಳ ಮಟ್ಟದಿಂದ ಗಟ್ಟಿಗೊಳಿಸಲು ಏನು ಮಾಡಬೇಕೆಂದು ಜನರಿಂದ ಕೇಳಲಿದ್ದೆನೇ ಎಂದರು.

ನನ್ನ ರಾಜ್ಯ ಪ್ರವಾಸ ವೇಳೆ ಎಲ್ಲರನ್ನೂ ಭೇಟಿ ಮಾಡುತ್ತೇನೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ದದಲ್ಲಿನ ಸ್ಥಳೀಯ ಸಮಸ್ಯೆ ಆಲಿಸುತ್ತಿದ್ದು, ಕಾರ್ಯಕರ್ತರ ಜತೆ ಬೆರೆತು ಅದಕ್ಕೆ ಪರಿಹಾರ ಉತ್ತರವನ್ನು ಕಂಡುಕೊಳ್ಳಲು ಇದೊಂದು ಉತ್ತಮ ವೇದಿಕೆ ಎಂದು ತಿಳಿಸಿದರು.

58 ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ.ನಮ್ಮ ಪಕ್ಷವನ್ನು ಹಲವು ದಶಕಗಳಿಂದ ಕಟ್ಟಿ ಬೆಳೆಸಿದ ದೇವೇಗೌಡರ ಕಾಲಘಟ್ಟದ ಸಾಕಷ್ಟು ಹಿರಿಯ ನಾಯಕರಿದ್ದೀರಾ.ನಿಮ್ಮ ಸಂಪರ್ಕ ಬಯಸಿ ಪ್ರವಾಸ ಕೈಗೊಂಡಿದ್ದೇನೆ. ಜಿಲ್ಲೆಯಲ್ಲಿ ದೇವೇಗೌಡರ ಹೋರಾಟಕ್ಕೆ ಜೊತೆಯಾಗಿ ನಿಂತು ಬೆಂಬಲ ನೀಡಿದ್ದೀರಾ.

ಜನತಾದಳ ಪಕ್ಷ ಮುಗಿದೆ ಹೋಯ್ತು ಅಂತ ವಿರೋಧ ಪಕ್ಷದವರು ಹೇಳುತ್ತಿದ್ದಾರೆ.. ಆದರೆ ಜಿಲ್ಲೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಕ್ಕಿಂತ ಹೆಚ್ಚಿನ ವೋಟಿಂಗ್ ಪರ್ಸೆಂಟೇಜ್ ಅನ್ನ ಜೆಡಿಎಸ್ ಪಕ್ಷಕ್ಕೆ ಕೊಟ್ಟಿದ್ದೀರ ನಿಮ್ಮ ಋಣ ತೀರಿಸಲು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದರು.

ಡಿಸೆಂಬರ್ ನಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಬರಲಿದೆ. ಗ್ರಾಮ ಪಂಚಾಯ್ತಿ ಚುನಾವಣೆ ಪಕ್ಷದಲ್ಲಿ ಬೇರು ಇದ್ದಂತೆ.ಪಕ್ಷ ಎಲ್ಲಾದಕ್ಕೂ ತಯಾರಿ ಮಾಡಿಕೊಳ್ಳಬೇಕು. ಅದಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ನಾನು ಮೂರು ಬಾರಿ ಚುನಾವಣೆಯಲ್ಲಿ ಪೆಟ್ಟು ತಿಂದಿರಬಹುದು. ನಾನು ಒಳ್ಳೆ ಉದ್ದೇಶದಿಂದ ನಾನು ಪ್ರವಾಸಕ್ಕೆ ಬಂದಿದ್ದೇನೆ ನಿಮ್ಮ ಪ್ರೀತಿ ಸಹಕಾರ ಇರಲಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ದೇವೇಗೌಡರ ಮಾರ್ಗರ್ದಶದಲ್ಲಿ ಪಕ್ಷವನ್ನು ಬೇರು ಮಟ್ಟದಲ್ಲಿ ಪ್ರಾದೇಶಕ ಪಕ್ಷವನ್ನು ಕಟ್ಟಿಬೆಳೆಸಬೇಕು ಅಂತ ಹೊರಟ್ಟಿದ್ದೇನೆ.ರಾಜ್ಯದ ಸಮಸ್ಯೆಗಳನ್ನ ಅರ್ಥೈಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದು‌ ಹೊರಟ್ಟಿದ್ದೇನೆ. ಕಾಂಗ್ರೆಸ್ ಪಕ್ಷದ ಎರಡು ವರ್ಷದ ಆಡಳಿತ ನೋಡಿದ್ದೀರಾ.? ಹೆಚ್ಚು ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷ ಜನಪರ ಕಾರ್ಯಕ್ರಮ ಕೊಡಬಹುದಿತ್ತು. ಆದರೆ ಸಾಲದ ಹೊರೆ ಹೊರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕುಮಾರಸಣ್ಣ ಅವರು ಮುಖ್ಯಮಂತ್ರಿ ಆಗಿದ್ದ 14 ತಿಂಗಳಲ್ಲಿ 25 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಿದ್ದಾರೆ.ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಪರಿಸ್ಥಿತಿ ಏನಾಗಿದೆ.25 ಸಾವಿರ ಇದ್ದ ಟಿಸಿ ಬೆಲೆ 3-4 ಲಕ್ಷಕ್ಕೆ ಏರಿದೆ. ಪ್ರಾದೇಶಿಕ ಪಕ್ಷದ ಅಸ್ತಿತ್ವ ಕಾಪಾಡುವ ಜವಬ್ದಾರಿ ನಿಮ್ಮ ಮೇಲಿದೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದರು.

ಹಿರಿಯರು, ಯುವಕರು ಹಾಗೂ ತಾಯಂದಿರು ಜೆಡಿಎಸ್ ಪಕ್ಷವನ್ನು ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಬೇಕು. ನನ್ನ ಮನವಿಗೆ ಸ್ಪಂದಿಸಿದ ಕಾರ್ಯಕರ್ತ ಬಂಧುಗಳು ಬೂತ್ ಮಟ್ಟದಲ್ಲಿ ತಂಡಗಳನ್ನು ಕಟ್ಟಿಕೊಂಡು ಪಕ್ಷ ಸಂಘಟಿಸುವ ಭರವಸೆ ನೀಡಿದರು

ನನ್ನ ಪ್ರೀತಿಯ ಯುವಕರು, ಹಿರಿಯರ ಮಾರ್ಗದರ್ಶನ ಪಡೆಯಬೇಕು ಆಗ ಮಾತ್ರ ನಮಗೆ ಅಧಿಕಾರ ದೊರೆಯಲು ಸಾಧ್ಯ, ನಾವೆಲ್ಲರೂ ನಮ್ಮ ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗೋಣ ಎಂದು ಯುವ ಸಮುದಾಯಕ್ಕೆ ಅವರು ಕರೆನೀಡಿದರು.

ಇದೇ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರರಾದ ತಿಪ್ಪೇಸ್ವಾಮಿ ರವರು, ಮಾಜಿ ಶಾಸಕರಾದ ಪಿ.ಆರ್ ಸುಧಾಕರ್ ಲಾಲ್ ರವರು, ಜಿಲ್ಲಾಧ್ಯಕ್ಷರಾದ ಆರ್.ಸಿ ಆಂಜಿನಪ್ಪ ಇದ್ದರು.

ಸಚಿವ ರಾಜಣ್ಣ ಅವರೇ ನಿಮ್ಮ ಹಿರಿತನಕ್ಕೆ ಗೌರವವಿದೆ ಬೆಲೆ ಕೊಡುತ್ತೇವೆ

ಸಚಿವ ರಾಜಣ್ಣ ಅವರೇ ನೀವೂ ಹಿರಿಯರು ಗೌರವವಿದೆ, ನಿಮ್ಮ ಹಿರಿತನಕ್ಕೆ ನಾನು ಬೆಲೆ ಕೊಡುತ್ತೇನೆ. ಆದರೆ ಹಿಟ್ಲರ್ ಕಾಲದ ರಾಜಕಾರಣ ಮಾಡಬೇಡಿ, ಇಲ್ಲಿ ಯಾರು ಕೂಡಾ ನಿಮ್ಮ ದರ್ಪಕ್ಕೆ, ಧಮ್ಕಿಗೆ, ಟಾರ್ಗೆಟ್ ರಾಜಕಾರಣಕ್ಕೆ ಕೈ ಕಟ್ಟಿಕೊಂಡು ಕೂರಲ್ಲ ರಾಜಣ್ಣ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು

ಮಧುಗಿರಿಯಲ್ಲಿ ಆಯೋಜಿಸಲಾಗಿದ್ದ ಮೂರನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಸಭೆಯನ್ನ ಉದ್ದೇಶಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ಟಾರ್ಗೆಟ್ ರಾಜಕಾರಣ ಮಾಡುತ್ತಿದ್ದಾರೆ. ಕೃಷಿ ಇಲಾಖೆಯಲ್ಲಿ ಡಿ ಗ್ರೂಪ್ ನೌಕರ ನರಸಿಂಹಮೂರ್ತಿ ಜೆಡಿಎಸ್ ಪಕ್ಷದ ಅಭಿಮಾನಿಯಾಗಿದ್ದು ತಪ್ಪಾ.? ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡ ಅನ್ನೋ ಕಾರಣಕ್ಕೆ ಅಮಾಯಕ ನನ್ನ ಟಾರ್ಗೆಟ್ ಮಾಡಿ ಬಲಿಪಶು ಮಾಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆ ಅಭಿಮಾನಿ ಪಕ್ಷದ ಮೇಲೆ ಅಭಿಮಾನ ಇಡುವುದು ತಪ್ಪಾ.? ಅಂತಹ ಮುಗ್ಧ ವ್ಯಕ್ತಿಯ ಮೇಲೆ ಟಾರ್ಗೆಟ್ ಮಾಡಿ ಕಿತ್ತು ಬಿಸಾಕಿದ್ದಾರೆ. ಇಲ್ಲಿರುವ ಶಾಸಕರು ಹಿರಿಯರಿದ್ದಾರೆ. ಅವರು ಹಿರಿಯ ತನಕ್ಕೆ ನಾನು ಬೆಲೆ ಕೊಡುತ್ತೇನೆ. ಈ ರೀತಿ ದಬ್ಬಾಳಿಕೆ ದೌರ್ಜನ್ಯ, ಅಹಂಕಾರ ಎಷ್ಟು ದಿನ ಮಾಡ್ತೀರಿ ಎಂದು ಕಿಡಿಕಾರಿದರು.

ಪ್ರಜಾಪ್ರಭುತ್ವದ ಚುನಾವಣೆಯಲ್ಲಿ ಎಂತ ಬಲಿಷ್ಠ ನಾಯಕರನ್ನು ಸೋಲಿಸುವ ಹಾಗೂ ಉಲ್ಟಾ ಸೀದಾ ಮಾಡುವ ಶಕ್ತಿ, ಸಾಮರ್ಥ್ಯ ತಾಲ್ಲೂಕಿನ ಜನತೆಗೆ ಇದೆ. ಅಧಿಕಾರ ಶಾಶ್ವತ ಅಲ್ಲ ಕಾಲ ಚಕ್ರ ಬದಲಾಗುತ್ತೆ ಎಂದು ಹೀಗೆ ಇರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

2008ರಲ್ಲಿ ಅನಿತಾ ಕುಮಾರಸ್ವಾಮಿ ಅವರು ಮಧುಗಿರಿ ಶಾಸಕರಾಗಿದ್ದಾಗ ಕ್ಷೇತ್ರದಲ್ಲಿ ಯಾವುದೇ ಸಂಘರ್ಷಕ್ಕೆ ಎಡೆ ಮಾಡಿಕೊಳ್ಳದೆ ಆರೋಗ್ಯಕರವಾಗಿ ಅಧಿಕಾರ ನಡೆಸಿದರು. ಆದರೆ ಮಧುಗಿರಿಗೆ ಕ್ಷೇತ್ರದಲ್ಲಿ ಈಗ ಪರಿಸ್ಥಿತಿ ಏನಾಗಿದೆ ಎಂದರು.

ಮಾಜಿ ಶಾಸಕ ವೀರಭದ್ರಯ್ಯ ಅವರು ಮೂರು ಬಾರೀ ಚುನಾವಣೆಯಲ್ಲಿ ಒಂದು ಬಾರೀ ಗೆದ್ದಿದ್ದಾರೆ. ಆದರೆ ರಾಜಕೀಯ ಷಡ್ಯಂತರದಲ್ಲಿ ನನ್ನ ಬಲಿಪಶು ಮಾಡಿದ್ದಾರೆ. ನಾನು ಸೋತಿದೀನಿ ಅನ್ನೋ ಕಾರಣಕ್ಕೆ ಮನೆಯಲ್ಲಿ ಕೂತ್ತಿಲ್ಲ, ಪಕ್ಷ ಸಂಘಟನೆ ಮಾಡ್ಬೇಕು ಅಂತ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದರು.

ದಯವಿಟ್ಟು ಛಲ ಕಳೆದುಕೊಳ್ಳಬೇಡಿ, ಈ ಪಕ್ಷವನ್ನ ಕಟ್ಟಿ ಬೆಳೆಸಿದಂತಹ ನಿಷ್ಠಾವಂತ ಕಾರ್ಯಕರ್ತರ ಪ್ರಶ್ನೆ ಇದು. ಅವರಿಗೆ ನಾವು ರಕ್ಷಣೆ ಕೊಡಬೇಕು. ಅವರ ಬೆನ್ನೆಲುಬಾಗಿ ನಿಲ್ಲಬೇಕು. ಏನು ತಪ್ಪೇ ಮಾಡದಿರುವ ಅಮಾಯಕರ ಮೇಲೆ ಈ ರೀತಿ ದೌರ್ಜನ್ಯ ಆದಂತ ಸಂದರ್ಭದಲ್ಲಿ ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಧೈರ್ಯ ತುಂಬಿದರು.

ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನ ಬಿಟ್ಟುಕೊಡುವ ಪ್ರಶ್ನೆ ಇಲ್ಲ. ನೀವು ಯಾರು ಕೂಡ ಆತಂಕಕ್ಕೆ ಒಳಗಾಗಬೇಡಿ ನಾನಿದ್ದೇನೆ, ಪಕ್ಷ ಇದೆ ನಾನು ರಾಜ್ಯ ಪ್ರವಾಸ ಮಾಡುತ್ತಿರುವ ಉದ್ದೇಶವೇ ನಿಮ್ಮ ಜೊತೆ ನಾನಿದ್ದೇನೆ ಎಂದು ತಿಳಿಸುವುದಕ್ಕೆ ನಿಮ್ಮ ಸಂಬಂಧ ಪ್ರೀತಿ ಸಹಕಾರ ನನ್ನ ಮೇಲೆ ಇರಲಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವೀರಭದ್ರಪ್ಪ, ತಿಮ್ಮರಾಯಪ್ಪ , ಜಿಲ್ಲಾಧ್ಯಕ್ಷರಾದ ಆರ್.ಸಿ ಆಂಜಿನಪ್ಪ, ತಾಲ್ಲೂಕು ಅಧ್ಯಕ್ಷರಾದ ಬಸವರಾಜ್ , ಮುಖಂಡರಾದ ಗೋವಿಂದರಾಜ್ , ಕೊಂಡವಾಡಿ ಚಂದ್ರಶೇಖರ್ ಸೇರಿದಂತೆ ಪ್ರಮುಖ ಮುಖಂಡರು ಹಾಗೂ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!