AI-171 ವಿಮಾನ ಅವಘಡ: AI ವೈರಲ್ ವಿಡಿಯೋ ನೋಡಿ

AI-171 plane crash: Watch AI viral video

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್ ಬಳಿ ಸಂಭವಿಸಿದ ಏರ್ ಇಂಡಿಯಾ (AI-171) ವಿಮಾನ ಅಪಘಾತ AI ವಿಡಿಯೋ ವೈರಲ್ ಆಗುತ್ತಿದೆ.

ಈ ಅಪಘಾತದಲ್ಲಿ 270 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಪ್ರಸ್ತುತ ಈ ಘಟನೆಗೆ ಸಂಬಂಧಿಸಿದಂತೆ AI ಕಿರುಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Video COURTESY: @prawasitv

ಉಳಿದಂತೆ ವಿಮಾನ ದುರಂತದಲ್ಲಿ ಮೃತಪಟ್ಟ 275 ಮಂದಿಯಲ್ಲಿ 190 ಮಂದಿಯ ಗುರುತು ಪತ್ತೆಯಾಗಿದ್ದು, 32 ಮಂದಿ ವಿದೇಶಿಗರೂ ಸೇರಿದಂತೆ 159 ಜನರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಭವಿಸಿದ ಭೀಕರ ವಿಮಾನ ಅವಘಡದಲ್ಲಿ ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿವೆ. ಉಳಿದವರ ಗುರುತು ಪತ್ತೆಗೆ ಡಿಎನ್‌ಎ ತಾಳೆ ನೋಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಅಹಮದಾಬಾದ್ ಸಿವಿಲ್‌ ಆಸ್ಪತ್ರೆಯ ವೈದ್ಯಕೀಯ ಸೂಪರಿಂಟೆಂಡೆಂಟ್ ರಾಕೇಶ್ ಜೋಶಿ ತಿಳಿಸಿದರು.

ಕುಟುಂಬಸ್ಥರಿಗೆ ಹಸ್ತಾಂತರಿಸಲಾದ 127 ಭಾರತೀಯರ ಮೃತದೇಹಗಳ ಪೈಕಿ, 123 ಮಂದಿ ವಿಮಾನದ ಪ್ರಯಾಣಿಕರಾಗಿದ್ದರೆ, ನಾಲ್ವರು ಘಟನಾ ಸ್ಥಳದಲ್ಲಿದ್ದ ದುರ್ದೈವಿಗಳು ಎಂದು ಅವರು ತಿಳಿಸಿದ್ದಾರೆ.

ವಿಮಾನ ಪತನದ ಸಂದರ್ಭದಲ್ಲಿ ಗಾಯಗೊಂಡು 71 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಏಳು ಮಂದಿ ಮಾತ್ರ ಅಹಮದಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. 12 ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಸಂದರ್ಭದಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕ ವಿಶ್ವಾಸ್ ಕುಮಾರ್ ರಮೇಶ್ ಅವರು ಗುಣಮುಖರಾಗಿದ್ದು ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಯಿಂದ ಬುಧವಾರ ನಿರ್ಗಮಿಸಿದರು ಎಂದು ಅಧಿಕಾರಿಗಳು ತಿಳಿಸಿದರು.

ಬಳಿಕ ಅವರು ಅವಘಡದಲ್ಲಿ ಮೃತಪಟ್ಟ ಸಹೋದರ ಅಜಯ್ ಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದರು ಎಂದು ಮಾಹಿತಿ ನೀಡಿದರು.

ವಿಶ್ವಾಸ್ ಮತ್ತು ಅಜಯ್‌ ಅವರು ಮೂಲತಃ ಕೇಂದ್ರಾಡಳಿತ ಪ್ರದೇಶವಾದ ದಿಯುನವರು. ಕುಟುಂಬಸ್ಥರೊಂದಿಗೆ ಕೆಲ ದಿನ ಕಾಲಕಳೆದ ನಂತರ ಜೂನ್ 12ರಂದು ಏರ್ ಇಂಡಿಯಾ ವಿಮಾನದ ಮೂಲಕ ಲಂಡನ್‌ಗೆ ಮರಳುತ್ತಿದ್ದರು. ವಿಶ್ವಾಸ್ ಅವರು ಅಜಯ್ ಅವರ ಪಾರ್ಥಿವ ಶರೀರವನ್ನು ಹೆಗಲ ಮೇಲೆ ಹೊತ್ತು ಚಿತಾಗಾರಕ್ಕೆ ಒಯ್ಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]