ಬೆಂಗಳೂರು: ಬೇರು ಮಟ್ಟದಲ್ಲಿ ಬಿಜೆಪಿ ಸಂಘಟನೆ ಇನ್ನಷ್ಟು ವೇಗ ಪಡೆಯಬೇಕೆಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ನೂತನ ಜಿಲ್ಲಾಧ್ಯಕ್ಷರಿಗೆ ಮಾರ್ಗದರ್ಶನ ಮಾಡಿದ್ದಾರೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರು ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯ ಪದಾಧಿ ಕಾರಿಗಳ ಮತ್ತು ಪ್ರಮುಖ ಮುಖಂಡರ ಉಪಸ್ಥಿ ತಿಯಲ್ಲಿ 39 ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷರ ನಿಯು ಕ್ತಿಯ ನಂತರ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಯಶಸ್ವಿಯಾಗಿ ಎದುರಿಸಲು ಬೂತ್ ಮಟ್ಟದಿಂದ ಜಿಲ್ಲಾ ತಂಡದ ಪಾತ್ರ ಯಾವ ರೀತಿ ಇರಬೇಕೆಂಬ ಕುರಿತು ಸಲಹೆ ಸೂಚನೆ ಕೊಡಲಾಗಿದೆ.
ಕಾಂಗ್ರೆಸ್ ಸರಕಾರದ ಎರಡು ವರ್ಷಗಳ ದುರಾಡಳಿತ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಒಂದೂಕಾಲು ವರ್ಷ ದಲ್ಲಿ ಪಕ್ಷ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ವಾಲ್ಮೀಕಿ ನಿಗಮ ವಿರುದ್ಧ ಹೋರಾಟ ಮಾಡಿದ್ದು, ಮುಡಾ ಹಗರಣದ ವಿರುದ್ಧವೂ ಪಾದಯಾತ್ರೆ ನಡೆಸಿದ್ದಾರೆ.
ಜನಾಕ್ರೋಶ ಯಾತ್ರೆಯ ಮೂಲಕ ಸರಕಾರದ ವೈಫಲ್ಯ ಜನಸಾಮಾನ್ಯರಿಗೆ ಯಶಸ್ವಿಯಾಗಿ ತಲುಪಿಸಲಾಗಿದೆ.
ಬೇರು ಮಟ್ಟದಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ವೇಗ ಪಡೆಯಬೇಕೆಂದು ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ. ಪರಿವಾರದ ಎಲ್ಲ ಹಿರಿಯರ ಮಾರ್ಗದರ್ಶನದೊಂದಿಗೆ ಪಕ್ಷದ ಕಾರ್ಯಕರ್ತರು ಸಮಾಜಕ್ಕೆ ಒಳಿತನ್ನು ಮಾಡಬೇಕೆಂಬ ನಿಟ್ಟಿನಲ್ಲಿ ಅನೇಕ ಹಿರಿಯರು ಮಾರ್ಗದರ್ಶನ ನೀಡುತ್ತಾರೆ. ಇವತ್ತು ಹಿರಿಯರು ಮಾರ್ಗದರ್ಶನ ನೀಡಿದ್ದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದರು.
ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ನೂತನ ಅಧ್ಯಕ್ಷರಾಗಿ ತಮಗೆ ದೊರೆತಿರುವ ಜವಾಬ್ದಾರಿಗಳನ್ನು ನಿರೀಕ್ಷೆ ಮೀರಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ಮೂಲಕ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಇನ್ನಷ್ಟು ಬಲವೃದ್ದಿಗೊಳಿಸುವ ನಿಟ್ಟಿನಲ್ಲಿ ತಾವು ನಿರೀಕ್ಷೆ ಮೀರಿ ಗುರಿ ಸಾಧಿಸಬೇಕು, ಮುಂದಿನ ದಿನಗಳಲ್ಲಿ ಎದುರಾಗುವ ಎಲ್ಲಾ ಚುನಾವಣೆಗಳನ್ನು ಎದುರಿಸಲು ಸಜ್ಜಾಗುವಂತೆ ತಿಳಿಸಿದರು
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಚುನಾವಣಾ ಸಂಚಾಲಕ ಗಣೇಶ್ ಕಾರ್ಣಿಕ್, ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್,ಮುಂತಾದವು ಇದ್ದರು.