ದೊಡ್ಡಬಳ್ಳಾಪುರ: ಎಸಿ ಆದೇಶ ರದ್ದು.. ರೂ.150 ಕೋಟಿ ಬೆಲೆ ಬಾಳುವ ಜಮೀನು ಸರ್ಕಾರದ ವಶಕ್ಕೆ..!

Drink & Drive: Driver fined Rs. 12,500!

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ (Hulikunte) ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗುವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಜೂನ್ 18 ರಂದು ಆದೇಶ ಮಾಡಿದ್ದಾರೆ.

ಜಿಎಂಎಫ್ ಯೋಜನೆಯಲ್ಲಿ ರೈತರಿಗೆ ಸರ್ಕಾರದಿಂದ ಮಂಜೂರಾಗಿರುವ ಜಮೀನುಗಳು ಕಾನೂನಾತ್ಮಕವಾಗಿ ವಹಿವಾಟು ಆಗದೇ ಇರುವುದರಿಂದ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವುದು ಅವಶ್ಯಕವಾಗಿದೆ. ಹಾಗಾಗಿ ಈ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯಲು ದೊಡ್ಡಬಳ್ಳಾಪುರ ತಹಶೀಲ್ದಾರ್ ಅವರಿಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರದ ವಶಕ್ಕೆ ಪಡೆಯಲಾಗುತ್ತಿರುವ ಈ ಜಮೀನು ಈಗಿನ ಮಾರುಕಟ್ಟೆ ಬೆಲೆಯಲ್ಲಿ ಸುಮಾರು ರೂ.150 ಕೋಟಿ ಬೆಲೆ ಬಾಳಬಹುದು ಎಂದು ಅಂದಾಜಿಸಲಾಗಿದೆ.

ಹುಲಿಕುಂಟೆ ಸಮೀಪ ಸರ್ಕಾರ ವಶಕ್ಕೆ ಪಡೆಯುತ್ತಿರುವ ಈ ಜಮೀನಿನ ಸುತ್ತಲು ಈಗಾಗಲೇ ಕೆಎಐಡಿಬಿ ಕ್ವಿನ್ ಸಿಟಿ ಹಾಗೂ ಹೈಟೆಕ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗಾಗಿ ಸುಮಾರು 2 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡಿದೆ.

ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ಕ್ಕೆ ಸಂಬಂಧಿಸಿದಂತೆ ನಡೆದಿರಬಹುದಾದ ಅಕ್ರಮ ವಹಿವಾಟಿನ ಕುರಿತು ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ಜನರ ಸಮಿತಿ ರಚಿಸಿ ಜೂನ್ 13 ರಂದು ಕಂದಾಯ ಇಲಾಖೆಯ(ವಿಶೇಷ ಕೋಶ) ಅಧೀನ ಕಾರ್ಯದರ್ಶಿ ಕೆ.ಎಸ್.ಶೈಲಶ್ರೀ ಅವರು ಸಹ ಆದೇಶ ಹೊರಡಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]