Don't spread misinformation about the Manjunatha Swamy temple in Dharmasthala: R. Ashoka

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಬೆಂಗಳೂರು: ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ ಪ್ರಕಾರ ಧರ್ಮಾಧಾರಿತವಾದ ಮೀಸಲು ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್‌ ನಾಯಕರು ಸಂವಿಧಾನದ ಪುಸ್ತಕ ಹಿಡಿದುಕೊಂಡು ಸಂವಿಧಾನಕ್ಕೆ ಅಪಚಾರ ಮಾಡುತ್ತಿದ್ದಾರೆ.

ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇ.5 ರಷ್ಟು ಮೀಸಲು ಹೆಚ್ಚಿಸಿರುವುದರಿಂದ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗುತ್ತಿದೆ. ಮತಕ್ಕಾಗಿ ಇಂತಹ ನೀಚ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಆರ್‌ಸಿಬಿ ಸಂಭ್ರಮಾಚರಣೆಯಲ್ಲಾದ ಕಾಲ್ತುಳಿತ ದುರಂತವನ್ನು ಮುಚ್ಚಿಹಾಕಲು ಇಂತಹ ವಿವಾದವನ್ನು ಹರಿಬಿಡಲಾಗುತ್ತಿದೆ. ಇದು ನಾಡಿನ ಜನರ ಹಕ್ಕನ್ನು ಸರ್ಕಾರ ಕಸಿದಿದೆ ಎಂದರು.

ಹೀಗೆಯೇ ಮುಂದುವರಿದರೆ ಸಿದ್ದರಾಮಯ್ಯ ಕೇವಲ ಮುಸ್ಲಿಂ ಸಮುದಾಯಕ್ಕೆ ಮೀಸಲಾದ ಮುಖ್ಯಮಂತ್ರಿಯಾಗುತ್ತಾರೆ. ಈ ಹಿಂದೆಯೇ ಮೀಸಲು ಹೆಚ್ಚಳಕ್ಕೆ ಮಾನ್ಯತೆ ಸಿಕ್ಕಿಲ್ಲ. ಈಗ ಹೊಸ ರೀತಿಯ ಮೀಸಲು ತಂದಿದ್ದಾರೆ. ಅಕ್ಟೋಬರ್‌ನಲ್ಲಿ ಕುರ್ಚಿ ಬಿಟ್ಟುಕೊಡಬೇಕೆಂಬ ಕಾರಣಕ್ಕಾಗಿ ಹೀಗೆ ಮಾಡಿದ್ದಾರೆ. ಮುಸ್ಲಿಮರೆಲ್ಲರೂ ನನ್ನ ಜೊತೆ ಬರಬೇಕೆಂದು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದರು.

ಅಹಿಂದ’ ದಲ್ಲಿ ‘ಹಿಂದ’ ಮಾಯವಾಯ್ತಾ? ಇದ್ಯಾವ ಸೀಮೆ ಸಾಮಾಜಿಕ ನ್ಯಾಯ ಸಿದ್ದರಾಮಯ್ಯನವರೇ? ವೋಟ್ ಬ್ಯಾಂಕ್ ರಾಜಕಾರಣವನ್ನೇ ಬಂಡವಾಳವಾಗಿಸಿಕೊಂಡಿರುವ ಕಾಂಗ್ರೆಸ್ ಪಕ್ಷ ತನ್ನ ತುಷ್ಟೀಕರಣವನ್ನ ಮುಂದುವರೆಸಲು ದಿನಕ್ಕೊಂದು ಹೊಸ ದಾರಿ ಹುಡುಕಿಕೊಳ್ಳುತ್ತಿದೆ. ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ 4% ಮೀಸಲಾತಿ ನೀಡಿದ ನಂತರ ಈಗ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರ ಮೀಸಲಾತಿಯನ್ನು 10% ನಿಂದ 15%ಗೆ ಹೆಚ್ಚಿಸಲು ಹೊರಟಿದೆ.

ಧರ್ಮಾಧಾರಿತ ಮೀಸಲಾತಿ ನೀಡುವುದು ಸಂವಿಧಾನದ ಆಶಯಗಳಿಗೆ ಸಂಪೂರ್ಣವಾಗಿ ವಿರುದ್ಧವಾದದ್ದು ಎಂದು ಸ್ವತಃ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರೆ ಹೇಳಿದ್ದರೂ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಗುತ್ತಿಗೆ ಕಾಮಗಾರಿಗಳಲ್ಲಿ 4% ಮೀಸಲಾತಿ ನೀಡಲು ಮುಂದಾಗಿತ್ತು. ಈಗ ಬಡವರಿಗೆ ಮನೆ ಕೊಡುವುದರಲ್ಲಿಯೂ ಮುಸಲ್ಮಾನರಿಗೆ ಆದ್ಯತೆ ಕೊಡಲು ಮುಂದಾಗಿದೆ. ಇದು ಕಾಂಗ್ರೆಸ್‌ ಪಕ್ಷದ ಸಂವಿಧಾನ ವಿರೋಧಿ ಮನಸ್ಥಿತಿಗೆ ಮತ್ತೊಂದು ಸಾಕ್ಷಿ ಎಂದು ದೂರಿದ್ದಾರೆ.

ಅಂದು ಸ್ವಾರ್ಥಕ್ಕಾಗಿ ನೆಹರು ಹಾಗೂ ಜಿನ್ನಾ ಭಾರತವನ್ನು ವಿಭಜಿಸಿದ ರೀತಿ, ಇಂದು ನಾಡದ್ರೋಹಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕರ್ನಾಟಕದಲ್ಲಿ ಧರ್ಮದ ಆಧಾರದ ಮೇಲೆ ಸಮಾಜ ವಿಭಜಿಸಲು ಹೊರಟಿದ್ದಾರೆ. ಈ ಸಂವಿಧಾನ ವಿರೋಧಿ, ಸಾಮಾಜಿಕ ನ್ಯಾಯ ವಿರೋಧಿ ಮೀಸಲಾತಿ ಹೆಚ್ಚಳವನ್ನು ಹಿಂಪಡೆಯುವವರೆಗೂ ಬಿಜೆಪಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದರು.

ಕೆಎಂಎಫ್‌ ಭಾಗವಹಿಸಿಲ್ಲ

ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯುವ ಟೆಂಡರ್‌ನಲ್ಲಿ ಕೆಎಂಎಫ್‌ ಭಾಗವಹಿಸಿದೇ ಇರುವುದು ಸರ್ಕಾರದ ಕುತಂತ್ರ. ಒಂದು ಕಡೆ ರೈತರಿಗೆ ಹಾಲಿನ ಸಹಾಯಧನ ನೀಡಿಲ್ಲ. ಇನ್ನೊಂದು ಕಡೆ ಕೆಎಂಎಫ್‌ಗೆ ಅವಕಾಶ ನೀಡಿಲ್ಲ. ಸರ್ಕಾರದ ತಪ್ಪಿನಿಂದಾಗಿ ರೈತರಿಗೆ ಅನ್ಯಾಯವಾಗಿದೆ ಹಾಗೂ ಬೇರೆಯವರಿಗೆ ಅವಕಾಶ ಸಿಕ್ಕಿದೆ ಎಂದರು.

ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಕಾಂಗ್ರೆಸ್‌ ಒಡೆಯುತ್ತಿದೆ. ಸಿದ್ದರಾಮಯ್ಯ ಬಂದ ನಂತರ ಎಲ್ಲರನ್ನೂ ಒಡೆಯುತ್ತಿದ್ದಾರೆ. ಬೆಂಗಳೂರನ್ನು ಒಡೆಯುವುದನ್ನು ಜನರು ಸಹಿಸುವುದಿಲ್ಲ

1 ಕೋಟಿ ಜನರನ್ನು ಆಳಲು ಒಬ್ಬ ಮೇಯರ್‌ಗೆ ಸಾಧ್ಯವಿಲ್ಲ ಎಂದು ಭಾವಿಸಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಹಣವಿಲ್ಲ. ಈ ತಪ್ಪನ್ನು ಮರೆಮಾಚಲು ಮೂರು ಭಾಗ ಮಾಡುವ ತೀರ್ಮಾನ ಮಾಡಲಾಗಿದೆ. ಗುಂಡಿ ಬಿದ್ದ ರಸ್ತೆ, ಕಸದ ಸಮಸ್ಯೆಯನ್ನು ಜನರು ಮರೆಯುವಂತೆ ಮಾಡಲು ಹೊಸ ವಿಚಾರಗಳನ್ನು ಪ್ರಸ್ತಾಪಿಸಲಾಗುತ್ತಿದೆ. ಬೆಂಗಳೂರನ್ನು ಒಡೆದರೆ, ಜನರ ಶಾಪ ತಟ್ಟಲಿದೆ ಎಂದರು.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!