ಬೆಂ.ಗ್ರಾಂ.ಜಿಲ್ಲೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ (Karnataka Arya Vaishya Community Development Corporation) 2025-26 ನೇ ಸಾಲಿಗೆ ಸಾಮಾನ್ಯ ವರ್ಗದ ಆರ್ಯ ವೈಶ್ಯ ಸಮುದಾಯದವರಿಗೆ ಸಾಲ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಸಂಬಂಧಪಟ್ಟ ಯೋಜನೆ ಸೌಲಭ್ಯ ಪಡೆಯಲು ಅರ್ಹ ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯ, ವೈಶ್ಯ ಸಮುದಾಯಕ್ಕೆ ಸೇರಿರಬೇಕು, “ನಮೂನೆ – ಜೆ” ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆದಿರಬೇಕು (ಪ್ರಮಾಣ ಪತ್ರ ಚಾಲ್ತಿಯ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು. ಹಾಗೇ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಈ ಯೋಜನೆಯಲ್ಲಿ ಮಹಿಳೆಯರಿಗೆ ಶೇ.33%, ವಿಶೇಷಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಿಗಳಿಗೆ (ವರ್ಗ) ಶೇ.5% ಮೀಸಲಾತಿಯನ್ನು ನೀಡಲಾಗಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹಗಿರುತ್ತಾರೆ, ಆದರೆ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಸಾಲ ಸೌಲಭ್ಯ ಪಡೆಯಲು ಅವಕಾವಿರುತ್ತದೆ.
ಅರ್ಜಿಯನ್ನು ಅನ್ ಲೈನ್ ಮೂಲಕ kacdc.karnataka.gov.in ಅಧಿಕೃತ ಜಾಲತಾಣದಲ್ಲಿ ಸಲ್ಲಿಸಿ ಜುಲೈ 31 ರೊಳಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 080-27275114 ಗೆ ಕಚೇರಿ ಸಮಯದಲ್ಲಿ ಸಂಪರ್ಕಿಬಹುದಾಗಿದೆ ಎಂದು ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.