ಬೆಂ.ಗ್ರಾಂ.ಜಿಲ್ಲೆ: ನೆಲಮಂಗಲ ತಾಲ್ಲೂಕಿನ ಪ್ರಸಿದ್ಧ ಶಿವಗಂಗೆ ಬೆಟ್ಟ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ಪ್ಲಾಸ್ಟಿಕ್ ವಸ್ತುಗಳ ಕೊಂಡ್ಯೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ (Ban on the use and sale of plastic) ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.
ಈ ಕುರಿತಂತೆ ಪ್ರಕಟಣೆ ನೀಡಿರುವ ಅವರು, ಶಿವಗಂಗೆ ಬೆಟ್ಟ ಪ್ರದೇಶದಲ್ಲಿರುವ ಸಸ್ಯ ಸಂಕುಲಗಳನ್ನು, ಪ್ರಾಣಿ ಪಕ್ಷಿಗಳನ್ನು, ಸೂಕ್ಷ್ಮ ಜೀವಿಗಳನ್ನು ಮತ್ತು ಮಾನವ ಸಂಕುಲವನ್ನು ಸಂರಕ್ಷಿಸುವ ಹಾಗೂ ಇಲ್ಲಿನ ಪ್ರಾಕೃತಿಕ ಸೊಬಗಿನ ನೈರ್ಮಲ್ಯತೆಯನ್ನು ಕಾಪಾಡಬೇಕಿದೆ.
ಈ ಹಿನ್ನೆಲೆಯಲ್ಲಿ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ಪ್ಲಾಸ್ಟಿಕ್ ವಸ್ತುಗಳ ಕೊಂಡ್ಯೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.